ಕಾಂಗ್ರೆಸ್‌ಗೆ ತೊಂದರೆ ಮಾಡಲು ಬಿಜೆಪಿ- ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ: ಜಿ. ಪರಮೇಶ್ವರ್

ತುಮಕೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತೊಂದರೆ ಮಾಡುವ ಉದ್ದೇಶದಿಂದಲೇ ಬಿಜೆಪಿ- ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ. ಈ ಬಗ್ಗೆ ನಾವು ಮೊದಲಿಂದಲಲು ಹೇಳಿಕೊಂಡು ಬರುತ್ತಿದ್ದೇವೆ ಎಂದು ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಜಿಲ್ಲೆಯ ಕೊರಟಗೆರೆಯಲ್ಲಿ ಬಿಜೆಪಿ- ಜೆಡಿಎಸ್ ಒಳ ಒಪ್ಪಂದ ಬಗ್ಗೆ ಮಾತನಾಡಿದ ಜಿ.ಪರಮೇಶ್ವರ್, ಈ ಬಗ್ಗೆ ನಾವು ಮೊದಲಿನಿಂದ ಹೇಳುತ್ತಿದ್ದೇವೆ. ಕಾಂಗ್ರೆಸ್‌ಗೆ ತೊಂದರೆ ಮಾಡಬೇಕು ಅಂತಲೇ ಅವರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಅದಕ್ಕೆ ಸಾಕ್ಷಿ ಇವತ್ತು ಎಲ್ಲಾ 25 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಹಾಕಿಲ್ಲದೆ ಇರುವುದು. ಅಭ್ಯರ್ಥಿಗಳನ್ನು ಹಾಕಿಲ್ಲ ಅಂದ್ರೆ ಇನ್ ಡೈರೆಕ್ಟ್ ಆಗಿ ಬೆಂಬಲಿಸಿ ಅಂತ ಹೇಳ್ತಾ ಇರೋದು ನಮಗೆ ಕಾಣಿಸುತ್ತಿದೆ. ಉದ್ದೇಶಪೂರ್ವಕವಾಗಿ ಈ ರೀತಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ಸಿಗೆ ತೊಂದರೆ ಮಾಡಬೇಕು ಅಂತಲೇ ಈ ಅವರು ಈ ರೀತಿ ಮಾಡಿದ್ದಾರೆ. ಹಾಗಾಗಿ ಜೆಡಿಎಸ್ ನವರು ಬಿಜೆಪಿಗೆ ಸಹಕಾರ ಮಾಡುತ್ತಿದ್ದಾರೆ ಎಂದಿದ್ದಾರೆ. ಇನ್ನು, ಬಿಟ್ ಕಾಯಿನ್ ತನಿಖೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ್, ಈ ಪ್ರಕರಣದ ತನಿಖೆ ಮುಂದುವರಿಸಬೇಕು. ಮೇಲಾಗಿ ನ್ಯಾಯಾಧೀಶರೆ ಅದರ ನೇತೃತ್ವವನ್ನು ವಹಿಸಬೇಕು ಎಂದು ಒತ್ತಾಯ ಮಾಡಿದ್ದಾರೆ. ಆದರೆ, ಅದನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾವ ರೀತಿ ತೆಗೆದುಕೊಳ್ಳುತ್ತದೆ ನೋಡಬೇಕು. ಯಾಕೆಂದರೆ ಇದರಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ವಿಚಾರಗಳಿವೆ. ಯಾರು ಇದರಲ್ಲಿ ತಪ್ಪು ಮಾಡಿದ್ದಾರೆ. ಅವರಿಗೆ ಕಾನೂನು ರೀತಿ ಕ್ರಮ ಕೈಗೊಳ್ಳುವ ಕೆಲಸವನ್ನ ರಾಜ್ಯ ಸರ್ಕಾರ ಮಾಡಬೇಕು ಎಂದು ಹೇಳಿದ್ದಾರೆ. ಅಲ್ಲದೇ, ರಾಜ್ಯ ಸರ್ಕಾರದ 40 ಪರ್ಸೆಂಟ್ ಕಮಿಷನ್ ವಿಚಾರದ ಬಗ್ಗೆ ಮಾತನಾಡಿದ ಪರಮೇಶ್ವರ್, ಹಿಂದೆ ನೀವು ನಮಗೆ 10% ಪರ್ಸೆಂಟ್ ಸರ್ಕಾರ ಅಂತ ಹೇಳುತ್ತಿದ್ದೀರಿ. ಈಗ ಅಧಿಕೃತವಾಗಿ ಸಂಘದವರು ಹೇಳುತ್ತಾರೆ ಅಂದರೆ, ವಿಚಾರ ಮಾಡಬೇಕಾದ ವಿಷಯ. ಈ ಬಗ್ಗೆ ಜನ ಸಮುದಾಯಕ್ಕೆ ಗೊತ್ತಾಗಬೇಕು. ಪ್ರತಿ ತಾಲೂಕು, ಜಿಲ್ಲೆ, ರಾಜ್ಯದಲ್ಲಿ ಕಂಟ್ರಾಕ್ಟರ್‌ಗಳಿದ್ದಾರೆ. ಅವರೆಲ್ಲ ಸರ್ಟಿಫೈಡ್ ಕಂಟ್ರಾಕ್ಟರುಗಳು. ನೋಂದಾಯಿತ ಕಂಟ್ರಾಕ್ಟರುಗಳ ಸಂಘದಿಂದ ಪ್ರಧಾನಮಂತ್ರಿಗೆ ಪತ್ರ ಬರೆದಿದ್ದಾರೆ. ಪ್ರಧಾನ ಮಂತ್ರಿಗಳಿಗೆ ಪತ್ರ ಬರೆಯುತ್ತಾರೆ ಅಂದ್ರೆ ಯೋಚನೆ ಮಾಡಿ. ಇದನ್ನ ಪ್ರಧಾನ ಮಂತ್ರಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯವನ್ನ ಜಿ.ಪರಮೇಶ್ವರ್ ಮಾಡಿದ್ದಾರೆ.


from India & World News in Kannada | VK Polls https://ift.tt/30ZNV7H

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...