ಸಂತಾನೋತ್ಪತ್ತಿ ಮಹಿಳೆಯ ವೈಯಕ್ತಿಕ ಆಯ್ಕೆ, ಇಚ್ಛೆಗೆ ವಿರುದ್ಧವಾಗಿ ನಡೆಯುವಂತಿಲ್ಲ; ಹೈಕೋರ್ಟ್‌

ಬೆಂಗಳೂರು: ಬೇಕೋ ಬೇಡವೋ ಅನ್ನುವ ಆಯ್ಕೆ ಸಂವಿಧಾನದ 21ನೇ ವಿಧಿಯಡಿಯಲ್ಲಿ ಮಹಿಳೆಯ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ. ತನ್ನ ದೈಹಿಕ ಸಮಗ್ರತೆ ರಕ್ಷಿಸಿಕೊಳ್ಳುವ ಹಕ್ಕನ್ನೂ ಮಹಿಳೆ ಹೊಂದಿರುತ್ತಾಳೆ ಎಂದು ಹೈಕೋರ್ಟ್‌ ಹೇಳಿದೆ. ಧಾರವಾಡ ಪೀಠದ ನ್ಯಾ.ಎನ್‌.ಎಸ್‌.ಸಂಜಯ್‌ ಗೌಡ ಅವರಿದ್ದ ಏಕಸದಸ್ಯ ಪೀಠ ಈ ಆದೇಶವನ್ನು ಹೊರಡಿಸಿದೆ. ‘ಅತ್ಯಾಚಾರಕ್ಕೆ ಒಳಗಾಗಿ ಗರ್ಭ ಧರಿಸಿದ್ದ 16 ವರ್ಷದ ಬಾಲಕಿಯ ಗರ್ಭಪಾತಕ್ಕೆ ಮನವಿ ಮಾಡಿದ್ದರು. ವೈದ್ಯಕೀಯ ಗರ್ಭಪಾತ ಕಾಯಿದೆ 1971ರ ಸೆಕ್ಷನ್‌ 3ರ ಅಡಿ ಗರ್ಭ ಧರಿಸಿ 24 ವಾರಗಳು ಪೂರ್ಣಗೊಂಡಿದ್ದರೆ ಗರ್ಭಪಾತ ಮಾಡಲಾಗದು ಎಂದು ವೈದ್ಯಕೀಯ ಅಧಿಕಾರಿ ನಿರಾಕರಿಸಿದ್ದನ್ನು ಪ್ರಶ್ನಿಸಿದ್ದ ಅರ್ಜಿ ಆಲಿಸಿದ ನ್ಯಾಯಪೀಠ ಈ ತೀರ್ಪು ನೀಡಿದೆ. ‘ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ವೈದ್ಯಕೀಯ ಗರ್ಭಪಾತ ಕಾಯಿದೆ 1971 ರಲ್ಲಿ ಕೆಲವು ಶಾಸನ ಬದ್ಧ ಮಿತಿಗಳಿದ್ದರೂ, ಅವು ಮೂಲಭೂತವಾಗಿ ವೈದ್ಯರಿಗೆ ಮಾತ್ರ ಅನ್ವಯಿಸುತ್ತವೆ. ಅಂಥ ಸಂದರ್ಭದಲ್ಲಿ ವೈದ್ಯಕೀಯವಾಗಿ ಗರ್ಭಧಾರಣೆಯನ್ನು ಅಂತ್ಯಗೊಳಿಸುವ ಅಗತ್ಯವನ್ನು ಸಾಂವಿಧಾನಿಕ ಕೋರ್ಟ್‌ಗಳು ವಿಭಿನ್ನ ರೀತಿಯಲ್ಲಿ ಪರಿಗಣಿಸಬೇಕು’ ಎಂದು ನ್ಯಾಯ ಪೀಠ ಹೇಳಿದೆ. ಅತ್ಯಾಚಾರಕ್ಕೆ ಒಳಗಾದ ಮತ್ತು ಅದರ ಕಾರಣದಿಂದಾಗಿ ಗರ್ಭಿಣಿ ಆಗಿರುವ ಬಾಲಕಿಗೆ ಅಪರಾಧದ ಹೊರೆ ಹೊರಲು ಬಲವಂತಪಡಿಸಿದಂತೆ ಆಗುತ್ತದೆ ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು. ಆಕೆಯ ಆಯ್ಕೆಗೆ ವಿರುದ್ಧವಾಗಿ ಮಗುವಿಗೆ ಜನ್ಮ ನೀಡುವಂತೆ ಮಾಡುವುದು ಸರಿಯಲ್ಲ. ಇದರಿಂದ ಮಗುವಿನ ಭವಿಷ್ಯಕ್ಕೂ ಕಳಂಕವಾಗಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಮಹಿಳೆಯರ ಅಪೇಕ್ಷೆಗೆ ವಿರುದ್ಧವಾಗಿ ಇರುವುದು ಸಂವಿಧಾನದ 21ನೇ ವಿಧಿಯ ಅಡಿಯ ವೈಯಕ್ತಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆ ಎಂದು ನ್ಯಾಯಾಲಯ ಹೇಳಿದೆ. ಆರೋಗ್ಯಾಧಿಕಾರಿಗೆ ಸೂಚನೆಸ್ತ್ರೀರೋಗ ತಜ್ಞರು, ಮನೋ ವಿಜ್ಞಾನಿ ಮತ್ತು ಇತರೆ ವೈದ್ಯರನ್ನು ಒಳಗೊಂಡ ವೈದ್ಯಕೀಯ ಮಂಡಳಿ ನೀಡಿರುವ ಅಭಿಪ್ರಾಯ ಪರಿಶೀಲಿಸಿದ ಪೀಠ, ಅರ್ಜಿದಾರು ಭ್ರೂಣ ತೆಗೆಸಲು ಅರ್ಹವಾಗಿದ್ದಾರೆ. ಹಾಗಾಗಿ ವೈದ್ಯಕೀಯ ಗರ್ಭಪಾತ ಕಾಯಿದೆ 1971ರ ನಿಬಂಧನೆಗಳು ಮತ್ತು ವೈದ್ಯಕೀಯ ಮಂಡಳಿಯ ಅಭಿಪ್ರಾಯಕ್ಕೆ ಬದ್ಧವಾಗಿ ಭ್ರೂಣವನ್ನು ತೆಗೆಯಬೇಕು ಎಂದು ಬೆಳಗಾವಿ ಆರೋಗ್ಯಾಧಿಕಾರಿಗೆ ನ್ಯಾಯಪೀಠ ಆದೇಶಿಸಿದೆ.


from India & World News in Kannada | VK Polls https://ift.tt/3xmqFwe

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...