
ಕಾನ್ಪುರ(ಉತ್ತರ ಪ್ರದೇಶ): ಇಲ್ಲಿನ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಇಂದು ಆರಂಭವಾದ ಟೆಸ್ಟ್ ಸರಣಿಯ ಮೊದಲನೇ ಹಣಾಹಣಿಯಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಟಾಸ್ ಗೆದ್ದ ಬಳಿಕ ಮಾತನಾಡಿದ ಅಜಿಂಕ್ಯ ರಹಾನೆ, ಇಲ್ಲಿನ ವಿಕೆಟ್ ಅತ್ಯುತ್ತಮವಾಗಿ ಕಾಣುತ್ತಿದ್ದು ಮೊದಲು ಬ್ಯಾಟ್ ಮಾಡುತ್ತೇವೆ. ಬ್ಯಾಟಿಂಗ್‌ಗೆ ಪಿಚ್ ಅತ್ಯುತ್ತಮವಾಗಿ ಕಾಣುತ್ತಿದ್ದು, ತಡವಾಗಿ ನಿಧಾನಗತಿಯತ್ತ ಪರಿವರ್ತನೆಯಾಗಲಿದೆ. ನೂತನ ಕೋಚಿಂಗ್ ಸಿಬ್ಬಂದಿ ಅಡಿಯಲ್ಲಿ ಆಡಲು ಉತ್ಸುಕರಾಗಿದ್ದೇವೆ, ವಿಶೇಷವಾಗಿ ರಾಹುಲ್ ಭಾಯ್ ಅಡಿಯಲ್ಲಿ ಆಡಲು ವೈಯಕ್ತಿಕ ನಾನು ಆನಂದಿಸುತ್ತೇನೆ. ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಟೆಸ್ಟ್‌ಗೆ ಪದಾರ್ಪಣೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ . ಭಾರತ ಸೀಮಿತ ಓವರ್‌ಗಳ ತಂಡದಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದ ಶ್ರೇಯಸ್ ಅಯ್ಯರ್, ನ್ಯೂಜಿಲೆಂಡ್ ವಿರುದ್ಧ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ. ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಿಷಭ್ ಪಂತ್ ಸೇರಿ ಕೀ ಆಟಗಾರರ ಅನುಪಸ್ಥಿತಿಯಲ್ಲಿ ಅಯ್ಯರ್ ಚೊಚ್ಚಲ ಟೆಸ್ಟ್ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ. ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಭಾರತ: ಶುಭಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ(ನಾಯಕ), ಶ್ರೇಯಸ್ ಅಯ್ಯರ್, ವೃದ್ದಿಮಾನ್ ಸಹಾ(ವಿ.ಕೀ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ಇಶಾಂತ್ ಶರ್ಮಾ, ಉಮೇಶ್ ಯಾದವ್ ನ್ಯೂಜಿಲೆಂಡ್: ಟಾಮ್ ಲಥಾಮ್, ವಿಲ್ ಯಂಗ್, ಕೇನ್ ವಿಲಿಯಮ್ಸನ್(ನಾಯಕ), ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಟಾಮ್ ಬ್ಲಂಡೆಲ್ (ವಿ.ಕೀ), ರಚಿನ್ ರವೀಂದ್ರ, ಟಿಮ್ ಸೌಥೀ, ಅಜಾಝ್ ಪಟೇಲ್, ಕೈಲ್ ಜೇಮಿಸನ್, ವಿಲಿಯಮ್ ಸೋಮರ್‌ವಿಲ್ಲೆ
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3HS1nuF