IT Raids: ಅಜಿತ್ ಪವಾರ್‌ಗೆ ಸೇರಿದ 1000 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಮುಂಬಯಿ: ಉಪ ಮುಖ್ಯಮಂತ್ರಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ 1,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಸಂಪತ್ತನ್ನು ಇಲಾಖೆ ದಾಳಿಗಳ ಬಳಿಕ ಮುಟ್ಟುಗೋಲು ಹಾಕಿಕೊಂಡಿದೆ. ಮುಂಬಯಿಯ ನಾರಿಮನ್ ಪಾಯಿಂಟ್‌ನಲ್ಲಿರುವ ನಿರ್ಮಲ್ ಟವರ್‌ ಸೇರಿದಂತೆ ಐದು ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಜತೆಗೆ ಒಂದು ಸಕ್ಕರೆ ಕಾರ್ಖಾನೆ ಮತ್ತು ರೆಸಾರ್ಟ್ ಅನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅಜಿತ್ ಪವಾರ್ ಮತ್ತು ಅವರ ಕುಟುಂಬದವರು ಈ ಎಲ್ಲ ಬೇನಾಮಿ ಆಸ್ತಿಗಳ ಫಲಾನುಭವಿಗಳಾಗಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ. ಈ ಆಸ್ತಿಗಳನ್ನು ಅಕ್ರಮವಾಗಿ ಖರೀದಿ ಮಾಡಲಾಗಿದೆ ಎಂದು ಆರೋಪಿಸಿರುವ ಇಲಾಖೆ, ಬೇನಾಮಿ-ವಿರೋಧಿ ಕಾಯ್ದೆಯನ್ನು ಹೇರಿಕೆ ಮಾಡಿದೆ. ಕಳೆದ ತಿಂಗಳು ಅಜಿತ್ ಪವಾರ್ ಅವರ ಸಹೋದರಿಯರ ಮನೆಗಳು ಮತ್ತು ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆದಿತ್ತು. ಈ ಬೃಹತ್ ದಾಳಿಯ ಸಂದರ್ಭದಲ್ಲಿ ಸುಮಾರು 184 ಕೋಟಿ ರೂಪಾಯಿ ಲೆಕ್ಕಪತ್ರವಿಲ್ಲದ ಆದಾಯವನ್ನು ಪತ್ತೆ ಹಚ್ಚಲಾಗಿದೆ. ಈ ದಾಳಿ ಹಾಗೂ ಪರಿಶೀಲನೆ ಕುರಿತು ಪ್ರತಿಕ್ರಿಯೆ ನೀಡಿರುವ ಅಜಿತ್ ಪವಾರ್, ತಮಗೆ ಸಂಬಂಧಿಸಿದ ಎಲ್ಲ ಸಂಸ್ಥೆಗಳೂ ನಿಯಮಿತವಾಗಿ ತೆರಿಗೆ ಪಾವತಿ ಮಾಡುತ್ತಿವೆ ಎಂದು ಹೇಳಿದ್ದಾರೆ. 'ನಾವು ಪ್ರತಿ ವರ್ಷವೂ ತೆರಿಗೆ ಪಾವತಿ ಮಾಡುತ್ತೇವೆ. ನಾನು ಹಣಕಾಸು ಸಚಿವನಾಗಿರುವುದರಿಂದ ಆರ್ಥಿಕ ಶಿಸ್ತುಗಳ ಬಗ್ಗೆ ಬಹಳ ಚೆನ್ನಾಗಿ ಅರಿವಿದೆ. ನನಗೆ ಸಂಬಂಧಿಸಿದ ಎಲ್ಲ ಸಂಸ್ಥೆಗಳೂ ತೆರಿಗೆ ಪಾವತಿ ಮಾಡಿವೆ' ಎಂದು ಎನ್‌ಸಿಪಿ ನಾಯಕ ಪವಾರ್ ಪ್ರತಿಪಾದಿಸಿದ್ದಾರೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ ಅವರು, '35-40 ವರ್ಷಗಳ ಹಿಂದೆ ಮದುವೆಯಾಗಿದ್ದ ನನ್ನ ಸಹೋದರಿಯರಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿರುವುದು ನನಗೆ ಬೇಸರ ಮೂಡಿಸಿದೆ. ಅಜಿತ್ ಪವಾರ್ ಅವರ ಸಂಬಂಧಿಕರ ಮನೆಗಳ ಮೇಲೆ ದಾಳಿಗಳು ನಡೆದಿದ್ದರೆ, ಸಂಸ್ಥೆಗಳನ್ನು ಯಾವ ರೀತಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಜನರು ಅದರ ಬಗ್ಗೆ ಯೋಚಿಸಬೇಕು' ಎಂದು ಹೇಳಿದ್ದಾರೆ. ಮಾಜಿ ಕೇಂದ್ರ ಸಚಿವ ಅವರೂ ತಮ್ಮ ಸೋದರಳಿಯನಿಗೆ ಸಂಬಂಧಿಸಿದ ದಾಳಿಗಳ ಕುರಿತು ಬಿಜೆಪಿ ವಿರುದ್ಧ ಕಿಡಿಕಾರಿದ್ದು, ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಮೃತಪಟ್ಟ ಘಟನೆ ಬಗ್ಗೆ ಬಿಜೆಪಿ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಶರದ್ ಪವಾರ್ ಆರೋಪಿಸಿದ್ದರು. ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದ ಘಟನೆಯ ವೇಳೆಯೇ ಆಡಳಿತ ಪಕ್ಷದ ಭಾಗವಾಗಿರುವ ಎನ್‌ಸಿಪಿಗೆ ಕೇಂದ್ರ ಅಧೀನದ ತನಿಖಾ ಸಂಸ್ಥೆಗಳು ಮತ್ತೊಂದು ಆಘಾತ ನೀಡಿದೆ.


from India & World News in Kannada | VK Polls https://ift.tt/3EBPruD

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...