
ಮುಂಬೈ: ಕಾನ್ಪುರ ಟೆಸ್ಟ್‌ನಲ್ಲಿ ಡ್ರಾಗೆ ತೃಪ್ತಿಪಟ್ಟುಕೊಂಡಿದ್ದ ಭಾರತ ಹಾಗೂ ತಂಡಗಳು ನಾಳೆ(ಡಿ.3) ವಾಂಖೆಡೆ ಸ್ಟೇಡಿಯಂನಲ್ಲಿ ಎರಡನೇ ಹಾಗೂ ಟೆಸ್ಟ್ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಅಂದಹಾಗೆ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ಅಂತಿಮಗೊಳಿಸುವುದು ಟೀಮ್ ಮ್ಯಾನೇಜ್‌ಮೆಂಟ್‌ಗೆ ತಲೆ ನೋವಾಗಿದೆ. ಏಕೆಂದರೆ ನಿಯಮಿತ ನಾಯಕ ಮುಂಬೈ ಟೆಸ್ಟ್‌ಗೆ ಮರಳಿರುವುದರಿಂದ ಅವರಿಗೆ ಯಾರು ಸ್ಥಾನ ಬಿಟ್ಟುಕೊಡಲಿದ್ದಾರೆಂಬುದು ಕುತೂಹಲಕಾರಿ ಅಂಶವಾಗಿದೆ. ಕಳೆದ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಶ್ರೇಯಸ್ ಅಯ್ಯರ್ ಎರಡೂ ಇನಿಂಗ್ಸ್‌ಗಳಲ್ಲಿ ಕ್ರಮವಾಗಿ ಶತಕ ಹಾಗೂ ಅರ್ಧಶತಕ ಸಿಡಿಸಿದ್ದರು. ಆ ಮೂಲಕ ಅವರು ಎರಡನೇ ಟೆಸ್ಟ್‌ಗೆ ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಂಡಿದ್ದಾರೆ. ಅಂದಹಾಗೆ ಆರಂಭಿಕ ಟೆಸ್ಟ್ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್‌ಗೆ ತಮ್ಮ 5ನೇ ಕ್ರಮಾಂಕವನ್ನು ನೀಡುವ ಮೂಲಕ ಕೊಹ್ಲಿಯ 4ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದರು. ಇದೀಗ ಕೊಹ್ಲಿ ತಂಡಕ್ಕೆ ಮರಳಿರುವುದರಿಂದ ಮಧ್ಯಮ ಕ್ರಮಾಂಕದಲ್ಲಿ ಸಮಸ್ಯೆ ಉಂಟಾಗಿದೆ. ಟೀಮ್ ಇಂಡಿಯಾ ನಾಯಕನಿಗೆ ಯಾರು ತಮ್ಮ ಸ್ಥಾನವನ್ನು ಬಿಟ್ಟುಕೊಡಲಿದ್ದಾರೆಂಬುದು ಇದೀಗ ಕುತೂಹಲಕಾರಿ ಅಂಶವಾಗಿದೆ. ಸತತ ವೈಫಲ್ಯ ಅನುಭವಿಸುತ್ತಿರುವ ರಹಾನೆ ಅವರೇ ಕೊಹ್ಲಿಗೆ ತಮ್ಮ ಸ್ಥಾನವನ್ನು ಬಿಟ್ಟುಕೊಡುವುದು ನ್ಯಾಯ ಎಂದು ಮಾಜಿ ಕ್ರಿಕೆಟಿಗ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿರುವ ವಿಡಿಯೋದಲ್ಲಿ ಮಾತನಾಡಿರುವ ಆಕಾಶ್ ಚೋಪ್ರಾ, ವಿರಾಟ್ ಕೊಹ್ಲಿಗೆ ಅಜಿಂಕ್ಯ ರಹಾನೆ ಅವರೇ ತಮ್ಮ ಸ್ಥಾನವನ್ನು ಬಿಟ್ಟುಕೊಡಬೇಕಾಗುತ್ತದೆ ಎಂದು ಹೇಳಿದ್ದಾರೆ. "ಅಜಿಂಕ್ಯ ರಹಾನೆ ಹಾಗೂ ಶ್ರೇಯಸ್ ಅಯ್ಯರ್ ಬಗ್ಗೆ ಹೆಡ್ ಕೋಚ್ ರಾಹುಲ್ ದ್ರಾವಿಡ್‌ಗೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ದ್ರಾವಿಡ್, ಇದರ ಬಗ್ಗೆ ಇಷ್ಟು ಬೇಗ ಮಾತನಾಡುವುದು ಸಮಂಜಸವಲ್ಲ. ಸಮಯ ಬಂದಾಗ ಇದಕ್ಕೆ ಸೂಕ್ತ ಉತ್ತರ ನೀಡುತ್ತೇವೆ ಎಂದಿದ್ದರು. ನೀವು ನ್ಯಾಯದ ಪರ ಮಾತನಾಡುವುದಾದರೆ ಎರಡನೇ ಟೆಸ್ಟ್‌ಗೆ ರಹಾನೆಯನ್ನು ಹೊರಗಿಟ್ಟು ಕೊಹ್ಲಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಡಬೇಕಾಗುತ್ತದೆ. ಐವರು ಬ್ಯಾಟ್ಸ್‌ಮನ್‌ಗಳೊಂದಿಗೆ ನೀವು ಆಡಿಸುವ ಅಗತ್ಯವಿದ್ದರೆ, ಶ್ರೇಯಸ್ ಅಯ್ಯರ್ ಮುಂದುವರಿಸಬೇಕು," ಎಂದು ಚೋಪ್ರಾ ತಿಳಿಸಿದ್ದಾರೆ. ಇನ್ ಫಾರ್ಮ್‌ನಲ್ಲಿರುವ ಶ್ರೇಯಸ್ ಅಯ್ಯರ್ ಅವರನ್ನು ತಂಡದಿಂದ ಕೈ ಬಿಡಬಾರದೆಂದು ಆಕಾಶ್ ಚೋಪ್ರಾ ಇದೇ ವೇಳೆ ಒತ್ತಿ ಹೇಳಿದ್ದಾರೆ. "ಭಾರತ ತಂಡದ ದ್ವಿತೀಯ ಇನಿಂಗ್ಸ್‌ನಲ್ಲಿ 51ಕ್ಕೆ 5 ವಿಕೆಟ್ ಕಳೆದುಕೊಂಡಿದ್ದಾಗ ಹಾಗೂ ಪ್ರಥಮ ಇನಿಂಗ್ಸ್‌ನಲ್ಲಿ 145ಕ್ಕೆ 4 ವಿಕೆಟ್ ಕಳೆದುಕೊಂಡಿದ್ದಾಗ, ಟೀಮ್ ಇಂಡಿಯಾದ ಬ್ಯಾಟಿಂಗ್ ಉತ್ತವಾಗಿರಲಿಲ್ಲ. ಇಂಥಾ ಸನ್ನಿವೇಶದಲ್ಲಿ ಶ್ರೇಯಸ್ ಅಯ್ಯರ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು," ಎಂದರು. "ಒಟ್ಟಾರೆ ತಂಡದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ಮೂಡಿಲ್ಲವಾದರೆ, ಇನ್‌ಫಾರ್ಮ್ ಬ್ಯಾಟ್ಸ್‌ಮನ್ ಅನ್ನು ನೀವು ಕಡೆಗಣಿಸಬಾರದು. ಈ ಹಿನ್ನೆಲೆಯಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡಿಸಬೇಕೆಂಬುದು ನನ್ನ ಅಭಿಪ್ರಾಯ," ಎಂದು ಆಕಾಶ್ ಚೋಪ್ರಾ ಯುವ ಆಟಗಾರನ ಪರ ಬ್ಯಾಟ್ ಬೀಸಿದ್ದಾರೆ. ಕಾನ್ಪುರ ಟೆಸ್ಟ್‌ನಲ್ಲಿ ಶ್ರೇಯಸ್ ಅಯ್ಯರ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು. ಅವರು ಆಡಿದ್ದ ಚೊಚ್ಚಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿಯೇ 105 ರನ್ ಗಳಿಸಿದ್ದರು. ಆ ಮೂಲಕ ಪದಾರ್ಪಣೆ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಭಾರತದ 16ನೇ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಅಯ್ಯರ್ ಭಾಜನರಾಗಿದ್ದರು. ದ್ವಿತೀಯ ಇನಿಂಗ್ಸ್‌ನಲ್ಲಿಯೂ ಯುವ ಬ್ಯಾಟ್ಸ್‌ಮನ್ ಅರ್ಧಶತಕ ಸಿಡಿಸುವ ಮೂಲಕ ತಂಡವನ್ನು ಅಪಾಯದಿಂದ ಪಾರು ಮಾಡಿದ್ದರು. ಮೂವರು ಸ್ಪಿನ್ನರ್‌ಗಳನ್ನು ಮುಂದುವರಿಸಿ: ಚೋಪ್ರಾ "ಮುಂಬೈನ ವಾಂಖೆಡೆ ಸ್ಟೇಡಿಯಂನ ಪಿಚ್ ವೇಗದ ಬೌಲರ್‌ಗಳಿಗೆ ಸಹಾಯ ಮಾಡುತ್ತದೆ ಹಾಗೂ ಸ್ಪಿನ್ನರ್‌ಗಳಿಗೆ ಟರ್ನ್‌ಗೆ ಖಂಡಿತಾ ನೆರವಾಗುತ್ತದೆ. ಈ ಹಿನ್ನೆಲೆಯಲ್ಲಿ ನೀವು ಮೂವರು ಸ್ಪಿನ್ನರ್‌ಗಳನ್ನು ಮುಂದುವರಿಸಬೇಕು. ಇನ್ನು ವೇಗದ ಬೌಲಿಂಗ್ ವಿಭಾಗದಲ್ಲಿ ಇಬ್ಬರು ವೇಗಿಗಳಿಗೆ ಅವಕಾಶ ನೀಡಬೇಕಾಗುತ್ತದೆ. ಇಶಾಂತ್ ಶರ್ಮಾ ಬದಲು ಮೊಹಮ್ಮದ್ ಸಿರಾಜ್ ಕಣಕ್ಕೆ ಇಳಿಯುವುದು ಸೂಕ್ತ ಆಯ್ಕೆ. ಇನ್ನು ಉಮೇಶ್ ಯಾದವ್ ಮುಂದುವರಿಯಲಿ," ಎಂದು ಆಕಾಶ್ ಚೋಪ್ರಾ ಸಲಹೆ ನೀಡಿದ್ದಾರೆ. ೨ನೇ ಟೆಸ್ಟ್ ಪಂದ್ಯಕ್ಕೆ ಚೋಪ್ರಾ ಆಯ್ಕೆಯ ಭಾರತ ತಂಡ: ಶುಭಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ವೃದ್ದಿಮಾನ್ ಸಹಾ, ಆರ್ ಅಶ್ವಿನ್, ಅಕ್ಷರ್ ಪಟೇಲ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3FY5wf0