ರಾಜ್ಯದಲ್ಲಿ ಮತ್ತೆ ಏರಿಕೆಯತ್ತ ಕೋವಿಡ್‌! 397 ಹೊಸ ಪ್ರಕರಣ!

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸೋಂಕು ಇನ್ನೂ ಸಕ್ರಿಯಾಗಿದ್ದು, ಪ್ರತಿದಿನವೂ ಸುಮಾರು ಮುನ್ನೂರರಷ್ಟು ಪ್ರಕರಣಗಳು ಪತ್ತೆಯಾಗುತ್ತಲೇ ಇವೆ. ಸೋಂಕುಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದ್ದರೂ, ಇನ್ನೂ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಶನಿವಾರ ಕೂಡ 397 ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ ಕಂಡಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,97,643ಕ್ಕೆ ಏರಿಕೆಯಾಗಿದೆ. ಇತ್ತೀಚೆಗಷ್ಟೇ ರಾಜ್ಯದಲ್ಲಿ ಓಮಿಕ್ರಾನ್‌ ರೂಪಾಂತರಿ ತಳಿ ವೈರಸ್‌ ಕೂಡ ಪತ್ತೆಯಾಗಿದ್ದು, ರಾಜ್ಯದಲ್ಲಿ ಈಗಾಗಲೇ ಹಲವು ಪ್ರಕರಣಗಳು ಪತ್ತೆಯಾಗಿದೆ. ಇದೂ ಕೂಡ ಆತಂಕಕ್ಕೆ ಕಾರಣವಾಗಿದೆ. ರಾಜ್ಯಾದ್ಯಂತ 277 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಒಟ್ಟು ಬಿಡುಗಡೆಯಾದವರ ಸಂಖ್ಯೆ 29,52,378ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣ ಸಂಖ್ಯೆ 7012ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿಯಲ್ಲಿ ತಿಳಿಸಿದೆ. ಸೋಂಕಿನಿಂದ ಸಂಭವಿಸುವ ಸಾವಿನ ಪ್ರಮಾಣದಲ್ಲಿ ಕೊಂಚ ಕಡಿಮೆಯಾಗಿದೆ. ಶನಿವಾರ 4 ಮಂದಿ ಮೃತಪಟ್ಟಿದ್ದು, ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 38,224ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.35ಕ್ಕೆ ಇಳಿಕೆಯಾದರೆ, ಮರಣ ಪ್ರಮಾಣ ಶೇ. 1ಕ್ಕೆ ಇಳಿಕೆಯಾಗಿದೆ. ಬೆಂಗಳೂರಲ್ಲಿ 207 ಸೋಂಕು ಬೆಂಗಳೂರು ನಗರದಲ್ಲಿ ಶನಿವಾರ 207 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 159 ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ 22, ಹಾಸನ 19, ಮೈಸೂರು 29, ಶಿವಮೊಗ್ಗ 19 ಪ್ರಕರಣಗಳು ಪತ್ತೆಯಾಗಿವೆ. ಉಳಿದ ಕೆಲವು ಜಿಲ್ಲೆಗಳಲ್ಲಿ ಬೆರಳೆಣಿಕೆ ಸಂಖ್ಯೆಯ ಪ್ರಕರಣಗಳಿವೆ. 12 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ಯಾದಗಿರಿ, ವಿಜಯಪುರದಲ್ಲಿ ಇಂದು ಶೂನ್ಯ ಪ್ರಕರಣ ವರದಿಯಾಗಿದೆ. ಗದಗ ಜಿಲ್ಲೆ ಕಳೆದ 1 ತಿಂಗಳಿಂದಲೂ ಕೊರೊನಾ ಮುಕ್ತ ಜಿಲ್ಲೆಯಾಗಿ ಮುಂದುವರಿದಿದೆ. ಬೀದರ್‌, ಹಾವೇರಿ ಜಿಲ್ಲೆಗಳು ಕೊರೊನಾ ಮುಕ್ತ ಜಿಲ್ಲೆಗಳಾಗಿ ಹೊರಹೊಮ್ಮಿವೆ. ಜಿಲ್ಲಾವಾರು ಸೋಂಕಿನ ಸಂಖ್ಯೆ: ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 207, ಬೀದರ್ 0, ಚಾಮರಾಜನಗರ 3, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 11, ಚಿತ್ರದುರ್ಗ 3, ದಕ್ಷಿಣಕನ್ನಡ 22, ದಾವಣಗೆರೆ 2, ಧಾರವಾಡ 26, ಗದಗ 0, ಹಾಸನ 19, ಹಾವೇರಿ 0, ಕಲಬುರಗಿ 1, ಕೊಡಗು 19, ಕೋಲಾರ 5, ಕೊಪ್ಪಳ 0, ಮಂಡ್ಯ 2, ಮೈಸೂರು 29, ರಾಯಚೂರು 0, ರಾಮನಗರ 0, ಶಿವಮೊಗ್ಗ 19, ತುಮಕೂರು 8, ಉಡುಪಿ 8, ಉತ್ತರಕನ್ನಡ 7, ವಿಜಯಪುರ 0, ಯಾದಗಿರಿ 0.


from India & World News in Kannada | VK Polls https://ift.tt/3xY4IUK

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...