ಚಿಕ್ಕಮಗಳೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೊರೊನಾ ಸ್ಫೋಟ; 40 ಮಂದಿಗೆ ಸೋಂಕು ದೃಢ!

ಚಿಕ್ಕಮಗಳೂರು: ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ. ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೊರೊನಾ ಸ್ಫೋಟಗೊಂಡಿದೆ. ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಇದುವರೆಗೆ ಒಟ್ಟು 67 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು 60 ವಿದ್ಯಾರ್ಥಿಗಳು, ಮೂವರು ಶಿಕ್ಷಕರು, ನಾಲ್ವರು ಸಿಬ್ಬಂದಿ ಗಳಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಬಾಳೆಹೊನ್ನೂರು ಸಮೀಪದ ಸಿಗೋಡುನಲ್ಲಿರುವ ವಸತಿ ಶಾಲೆಯ ಮೂವರು ವಿದ್ಯಾರ್ಥಿಗಳು ಹಾಗು ನಾಲ್ವರು ಸಿಬ್ಬಂದಿಯಲ್ಲಿ ಮೊದಲು ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ, 418 ವಿದ್ಯಾರ್ಥಿಗಳು, ಸಿಬ್ಬಂದಿಯ ಸ್ವ್ಯಾಬ್ ಅನ್ನು ಆರೋಗ್ಯ ಇಲಾಖೆ ಪಡೆದಿತ್ತು. ಆ ಪೈಕಿ ಈವರೆಗೆ 67 ಮಂದಿಯಲ್ಲಿ ಕೋವಿಡ್‌ ಪತ್ತೆಯಾಗಿದೆ. ಸದ್ಯ ಈಗ ಸೀಲ್‌ಡೌನ್ ಮಾಡಲಾಗಿದೆ. ಸೋಂಕಿತ ವಿದ್ಯಾರ್ಥಿಗಳು, ಸಿಬ್ಬಂದಿಗೆ ರೋಗ ಲಕ್ಷಣಗಳಿಲ್ಲ. ಜಿಲ್ಲಾಡಳಿತ ವಸತಿ ಶಾಲೆಯಲ್ಲಿಯೇ ಕ್ವಾರಂಟೈನ್ ವ್ಯವಸ್ಥೆ ಮಾಡಿದೆ. ಡಿ.ಹೆಚ್.ಒ, ಸರ್ವೇಕ್ಷಣಾಧಿಕಾರಿ, ಆರೋಗ್ಯ ಸಿಬ್ಬಂದಿ ಭೇಟಿ ನೀಡಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಇನ್ನು ಪಾಸಿಟಿವ್ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


from India & World News in Kannada | VK Polls https://ift.tt/3Dqxjmo

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...