ಮಂಗಳೂರಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ: ಪೊಲೀಸ್ ಕರ್ತವ್ಯಕ್ಕೂ ಅಡ್ಡಿ; 5 ಮಂದಿಯ ಬಂಧನ!

ಮಂಗಳೂರು: ನಗರದ ಯೆನೆಪೋಯ ಪದವಿ ಕಾಲೇಜಿನ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ನಡೆದಿದ್ದು, ಈ ಸಂದರ್ಭ ಸ್ಥಳಕ್ಕೆ ತೆರಳಿದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಕೃತ್ಯವೂ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ 7 ಮಂದಿ ವಿದ್ಯಾರ್ಥಿಗಳು ಹಾಗೂ 5 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಆದಿತ್ಯ, ಕೆನ್ ಜಾನ್ಸನ್, ಮುಹಮ್ಮದ್, ಅಬ್ದುಲ್ ಶಾಹಿದ್, ವಿಮಲ್, ಫಹಾದ್ , ಅಬು ತಹರ್, ಮುಹಮ್ಮದ್ ನಾಸಿಫ್, ಆದರ್ಶ ಎಂದು ಗುರುತಿಸಲಾಗಿದೆ. ಎರಡು ಘಟನೆಗೆ ಸಂಬಂಧಿಸಿ ಒಟ್ಟು 19 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ. ಪ್ರಕರಣ ವಿವರಯೆನೆಪೋಯ ಕಾಲೇಜ್ ನಲ್ಲಿ 03 ನೇ ವರ್ಷದ ಬಿಎಸ್ಸಿ ಹಾಸ್ಪಿಟಾಲಿಟಿ ಸೈನ್ಸ್ ಕೇರಳ ಮೂಲದ ಆದರ್ಶ ಪ್ರೇಮಕುಮಾರ್ ನಿನ್ನೆ ಸಂಜೆ ಸುಮಾರು 7ಗಂಟೆಗೆ ವೇಳೆಗೆ ತನ್ನ ಸ್ನೇಹಿತ ಅಭಿರಾಮಿಯನ್ನು ಭೇಟಿ ಮಾಡಿ ಮಾತನಾಡುತ್ತಿರುವಾಗ ಸಿನಾನ್ ಇತರ 8 ಜನ ಇಂಟರ್ ಲಾಕ್ ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಪ್ರೇಮ್ ಕುಮಾರ್ ಎಡಕೈಗೆ ಗಾಯ ಆಗಿದ್ದು, ಮೊಹಮ್ಮದ್ ನಸಿಪ್ ಗೂ ಗಾಯವಾಗಿದೆ. ಗಲಾಟೆ ಬಿಡಿಸಲು ಬಂದಿದ್ದ ಪಿರ್ಯಾದಿ ಸ್ನೇಹಿತರಾದ ಅದೇ ಹಾಸ್ಟೇಲ್ ನ ಶನಿನ್ ಮತ್ತು ಶ್ರವಣರವರಿಗೆ ಜೀವ ಬೆದರಿಕೆ ಒಡ್ಡಿರುವುದಾಗಿ ಆದರ್ಶ ದೂರು ನೀಡಿದ್ದ. ಗಲಾಟೆ ಬಿಡಿಸಲು ಬಂದಿದ್ದ ತನ್ನ ಸ್ನೇಹಿತರಾದ ಶನಿನ್ ಮತ್ತು ಶ್ರವಣ್ ರವರು ಗುಜ್ಜರಕರೆ ಬಳಿ ಹಾಸ್ಟೆಲ್ ನಲ್ಲಿ ವಾಸ್ತವ ಇದ್ದು ಅವರು ಅಪಾಯದಲ್ಲಿದ್ದು ರಕ್ಷಣೆ ಮಾಡಲು ಕೋರಿಕೊಂಡಿದ್ದ. ಅದರಂತೆ ರಾತ್ರಿ 10 ಗಂಟೆ ಸುಮಾರಿಗೆ ಪಿಎಸ್‌ಐ ಶೀತಲ್ ಹಾಗೂ ಸಿಬ್ಬಂದಿಗಳು ಹಾಸ್ಟೆಲ್ ಬಳಿ ಹೋದಾಗ ಹಾಸ್ಟೆಲ್ ನ ನಿವಾಸಿ ವಿದ್ಯಾರ್ಥಿಗಳು ಇಂಟರ್ ಲಾಕ್, ಕಲ್ಲು ಹಾಗೂ ಕುರ್ಚಿಗಳನ್ನು ಪೊಲೀಸರತ್ತ ಎಸೆದು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಸಕ್ತ ಪರಿಸ್ಥಿತಿ ಶಾಂತವಾಗಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸ್ ಆಯುಕ್ತ ಎನ್ . ಶಶಿಕುಮಾರ್ ತಿಳಿಸಿದ್ದಾರೆ.


from India & World News in Kannada | VK Polls https://ift.tt/3GdjF7Z

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...