ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಶೇ.94ರಷ್ಟು ಪೂರ್ಣ; ಹೈಕೋರ್ಟ್‌ಗೆ ಬಿಬಿಎಂಪಿ ಮಾಹಿತಿ

ಬೆಂಗಳೂರು: ನಗರದಲ್ಲಿ ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಬಗ್ಗೆ ನಿಖರ ಮಾಹಿತಿ ಕಲೆ ಹಾಕಲು ನಡೆಸುತ್ತಿರುವ ಸಮೀಕ್ಷೆ ಕಾರ್ಯ ಶೇ.94ರಷ್ಟು ಪೂರ್ಣಗೊಂಡಿದೆ ಎಂದು ಹೈಕೋರ್ಟ್‌ಗೆ ತಿಳಿಸಿದೆ. ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದ ವಿಚಾರದ ಸಂಬಂಧ ಹೈಕೋರ್ಟ್‌ 2013ರಲ್ಲಿ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಪಿಐಎಲ್‌, ಸಿಜೆ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತು. ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸಹಕರಿಸಲು ಅಮಿಕಸ್‌ ಕ್ಯೂರಿಯಾಗಿ ನೇಮಕಗೊಂಡಿರುವ ಹಿರಿಯ ನ್ಯಾಯವಾದಿ ಕೆ.ಎನ್‌.ಫಣೀಂದ್ರ ‘ರಾಜ್ಯ ಮಟ್ಟದಲ್ಲಿ ಶಾಲೆಯಿಂದ ಹೊರಗುಳಿದ ಕಾರ್ಯ ಪೂರ್ಣಗೊಳಿಸಲಾಗಿದೆ. ಅಂತೆಯೇ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬಿಬಿಎಂಪಿ ಸಮೀಕ್ಷೆ ಕಾರ್ಯ ಕೈಗೊಂಡಿದೆ. ಈವರೆಗೆ ಶೇ.94ರಷ್ಟು ಪೂರ್ಣಗೊಳಿಸಿದೆ ಎಂದು ತಿಳಿಸಿದೆ. ಹಾಗಾಗಿ, ಪಾಲಿಕೆಗೆ ಸಮೀಕ್ಷೆ ಪೂರ್ಣಗೊಳಿಸಲು ಇನ್ನೂ ಸ್ವಲ್ಪ ಕಾಲಾವಕಾಶ ನೀಡಬೇಕು. ಬಿಬಿಎಂಪಿ ವರದಿ ನೀಡಿದ ನಂತರ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ನ್ಯಾಯಾಲಯಕ್ಕೆ ಯಾವ ಕ್ರಮಗಳನ್ನು ಕೈಗೊಳ್ಳಬೇಕೆಂಬ ಬಗ್ಗೆ ವರದಿ ಸಲ್ಲಿಸಲಾಗುವುದು ಎಂದರು. ಹಿರಿಯ ನ್ಯಾಯವಾದಿ ಜೋಯ್ನಾ ಕೊತಾರಿಯಾ, ಬಿಬಿಎಂಪಿ ನೀಡಿರುವ ಪ್ರಾಥಮಿಕ ಅಂಕಿ- ಅಂಶಗಳ ಪ್ರಕಾರ 10 ಲಕ್ಷ ಶಾಲಾ ಮಕ್ಕಳನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ. 5 ಲಕ್ಷಕ್ಕೂ ಅಧಿಕ ಮಂದಿ ಶಾಲೆಯಿಂದ ಹೊರಗುಳಿದಿದ್ದಾರೆ ಎನ್ನಲಾಗಿದೆ. ಅದು ನಿಜವೇ ಆಗಿದ್ದರೆ ಅವರನ್ನು ಶಾಲೆಗೆ ವಾಪಸ್‌ ಕರೆತರಲು ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದರು. ಆಗ ನ್ಯಾಯಪೀಠ, ಪಾಲಿಕೆಯ ಹೇಳಿಕೆಯನ್ನು ದಾಖಲಿಸಿಕೊಂಡು ಸಮೀಕ್ಷೆ ಪೂರ್ಣಗೊಳಿಸಲು ಬಿಬಿಎಂಪಿಗೆ ಕಾಲಾವಕಾಶ ನೀಡಿ ವಿಚಾರಣೆಯನ್ನು 2022ರ ಫೆಬ್ರವರಿಗೆ ಮುಂದೂಡಿತು.


from India & World News in Kannada | VK Polls https://ift.tt/3y0oWNv

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...