ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳಕ್ಕೆ ಅವಕಾಶ ನೀಡದ ರಾಜ್ಯ ಸರಕಾರ, ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಶುಲ್ಕವನ್ನು ದಿಢೀರನೆ 10 ಸಾವಿರ ರೂ.ಗಳಷ್ಟು ಹೆಚ್ಚಳ ಮಾಡಿದೆ. ಈ ಹಿಂದೆ ಸರಕಾರಿ ಕಾಲೇಜುಗಳಿಗೆ ವಿದ್ಯಾರ್ಥಿಗಳು ಒಟ್ಟು 23,810 ರೂ.ಗಳನ್ನು ಪಾವತಿ ಮಾಡಬೇಕಿತ್ತು. ಆದರೆ, ಸರಕಾರ ಇತರ ಶುಲ್ಕದ ಹೆಸರಲ್ಲಿ ಶುಲ್ಕ ಪರಿಷ್ಕರಣೆ ಮಾಡಿರುವುದರಿಂದ ವಿದ್ಯಾರ್ಥಿಗಳು ಈಗ 33,810 ರೂ.ಗಳನ್ನು ಪಾವತಿ ಮಾಡಬೇಕಿದೆ. ಖಾಸಗಿ ಎಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ ಸರಕಾರಿ ಕೋಟಾದ ಸೀಟುಗಳಿಗೂ ಈ ನಿಯಮ ಅನ್ವಯವಾಗಲಿದೆ. ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳದ ಬಗ್ಗೆ ಸರಕಾರ ಕಾಲೇಜುಗಳ ಅಭಿವೃದ್ಧಿಯ ನೆಪ ಹೇಳುತ್ತಿದೆ. ಸರಕಾರಿ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಈ ಶುಲ್ಕ ಬಳಸಿಕೊಳ್ಳಲಾಗುವುದು ಎಂಬುದು ಸರಕಾರದ ವಾದವಾಗಿದೆ. ಶುಲ್ಕ ಪಟ್ಟಿ:
- ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕ: 33,810 ರೂ.
- ಸರಕಾರಿ ಅನುದಾನಿತ ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕ: 43,810 ರೂ.
- ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ(ಟೈಪ್-1) ಶುಲ್ಕ: 83,526 ರೂ.
- ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ(ಟೈಪ್-2) ಶುಲ್ಕ: 90,060 ರೂ.
- ಡೀಮ್ಡ... ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಕಾಲೇಜುಗಳ ಶುಲ್ಕ: 90,293 ರೂ.
from India & World News in Kannada | VK Polls https://ift.tt/3IdH9Mn