ಹೆಚ್ಚುವರಿ ಶುಲ್ಕ ಪಡೆದ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು; ಶುಲ್ಕ ವಾಪಸ್‌ ನೀಡುವಂತೆ ಹೈಕೋರ್ಟ್ ಸೂಚನೆ

ಬೆಂಗಳೂರು: ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನ ಇಬ್ಬರು ಜೇಷ್ಠತೆ ಹೊಂದಿರುವ ವಿದ್ಯಾರ್ಥಿಗಳಿಂದ ಪಡೆದ ಹೆಚ್ಚುವರಿ ಶುಲ್ಕ ಹಿಂದಿರುಗಿಸುವ ಕುರಿತ ಮನವಿಯನ್ನು ಆದಷ್ಟು ಶೀಘ್ರ ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್‌ ಸೂಚಿಸಿದೆ. ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನ ಮೊಹಮ್ಮದ್‌ ನೌಫಾಲ್‌ ಹಾಗೂ ಮೊಹಮದ್‌ ರಫೀಕ್‌ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಅಶೋಕ ಎಸ್‌.ಕಿಣಗಿ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ‘ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜು ಆಡಳಿತ ಮಂಡಳಿ 2017-18ರ ಶೈಕ್ಷಣಿಕ ಸಾಲಿನಲ್ಲಿಅರ್ಜಿದಾರ ವಿದ್ಯಾರ್ಥಿಗಳಿಂದ ಕಾನೂನು ಬಾಹಿರವಾಗಿ 1,67,160 ರೂ. ಹೆಚ್ಚುವರಿ ಶುಲ್ಕ ಸಂಗ್ರಹಿಸಿತ್ತು. ಅದನ್ನು ವಾಪಸ್‌ ನೀಡುವಂತೆ ಕೋರಿ ಸಲ್ಲಿಸಿರುವ ಮನವಿಯನ್ನು ಶುಲ್ಕ ನಿಯಂತ್ರಣ ಸಮಿತಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿ ನ್ಯಾಯಪೀಠ ಅರ್ಜಿಯನ್ನು ವಿಲೇವಾರಿ ಮಾಡಿತು. ಅರ್ಜಿದಾರರ ಪರ ವಾದಿಸಿದ ವಕೀಲ ಕೆ.ಅಭಿಷೇಕ್‌, ಮೆರಿಟ್‌ ಆಧಾರದಲ್ಲಿ ಅರ್ಜಿದಾರರು ಎಂಜಿನಿಯರಿಂಗ್‌ ಸೀಟು ಪಡೆದು ಸಿಇಟಿ ಮುಖಾಂತರ ಪ್ರವೇಶ ಪಡೆದಿದ್ದರೂ ಕಾಲೇಜು ಆಡಳಿತ ಮಂಡಳಿಯು ಹೆಚ್ಚುವರಿ ಶುಲ್ಕ ಸಂಗ್ರಹಿಸಿದೆ. ಇದು ಕಾಯಿದೆಗೆ ವಿರುದ್ಧವಾಗಿದೆ. ಈ ಕುರಿತಂತೆ ಶುಲ್ಕ ನಿಯಂತ್ರಣ ಸಮಿತಿ ಕೂಡಲೇ ಕ್ರಮ ಕೈಗೊಳ್ಳಲು ಹೈಕೋರ್ಟ್‌ ನಿರ್ದೇಶಿಸಬೇಕು ಎಂದು ಕೋರಿದರು.


from India & World News in Kannada | VK Polls https://ift.tt/3oszwd4

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...