
: ಈ ಸರ್ಕಾರದ ಅವಧಿ ಮುಗಿದ ಮೇಲೆ ಸಚಿವ ಸಿ. ಎಂ. ಆಗುವ ಅವಕಾಶಗಳಿವೆ ಎಂದು ಸಚಿವ ಈ ಹಿಂದೆ ಹೇಳಿಕೆ ನೀಡಿದ್ದರು. ಆದರೆ ಈ ಹೇಳಿಕೆ ವಿಚಾರವಾಗಿ ವಿರೋಧ ಪಕ್ಷಗಳು ಜನರನ್ನು ದಿಕ್ಕು ತಪ್ಪಿಸುತ್ತಿದ್ದು, ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದ ಸರ್ಕಾರ ಸುಭದ್ರವಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಸ್ಪಷ್ಟನೆ ನೀಡಿದ್ದಾರೆ. ಚಾಮರಾಜನಗರದಲ್ಲಿ ಮಾಧ್ಯಮಗಳೊಂದಿಗೆ ಮಾತಮಾಡಿದ ಅವರು, ಸಿಎಂ ಬೊಮ್ಮಾಯಿ ಅವರು ತಮ್ಮ ಅವಧಿ ಪೂರೈಸಲಿದ್ದಾರೆ ಎಂದು ಹೇಳಿದರು. ಸಚಿವ ಮುರುಗೇಶ ನಿರಾಣಿ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆಯೇ ವಿನಾ, ಇದೇ ಅವಧಿಯಲ್ಲಿ ಆಗುತ್ತಾರೆ ಎಂದು ಹೇಳಿಲ್ಲ. ಸಚಿವ ಈಶ್ವರಪ್ಪ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಬಿ. ವೈ. ವಿಜಯೇಂದ್ರ ತಿಳಿಸಿದರು. ವಿಧಾನ ಪರಿಷತ್‌ಗೆ ಚುನಾವಣೆ ನಡೆಯಲಿರುವ 20 ಕ್ಷೇತ್ರಗಳ ಪೈಕಿ 15 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಜೆಡಿಎಸ್ ಜೊತೆಗಿನ ಹೊಂದಾಣಿಕೆಯ ಬಗ್ಗೆ ಪಕ್ಷದ ಹಿರಿಯ ಮುಖಂಡರು ಕುಳಿತು ಮಾತನಾಡಲಿದ್ದಾರೆ. ನಾವು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಅಭಿವೃದ್ಧಿಯ ವಿಚಾರ ಇಟ್ಟಕೊಂಡು ಪ್ರಚಾರ ಮಾಡುತ್ತಿದ್ದೇವೆ. ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಈಗಿನ ಸಿ. ಎಂ. ಬಸವರಾಜ ಬೊಮ್ಮಾಯಿ ಸರ್ಕಾರದ ಸಾಧನೆ, ಕಾರ್ಯಕ್ರಮಗಳ ಆಧಾರದ ಮೇಲೆ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್‌ಗೆ ಮತ ಕೇಳಲು ಯಾವ ಸಾಧನೆಯೂ ಇಲ್ಲ ಎಂದು ಬಿ. ವೈ. ವಿಜಯೇಂದ್ರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇಸ್ಪೀಟ್ ಎಲೆಗಳಂತೆ ಬಿಜೆಪಿಯಲ್ಲಿ ಸಿಎಂ ಬದಲಾಗುತ್ತಾರೆ ಎನ್ನುವ ಮಾಜಿ ಸಚಿವ ಎಚ್. ಸಿ. ಮಹದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿ. ವೈ. ವಿಜಯೇಂದ್ರ, ವಿರೋಧ ಪಕ್ಷದವರು ಈ ರೀತಿಯ ಹೇಳಿಕೆಗಳನ್ನು ನೀಡುವ ಮೂಲಕ ಅಧಿಕಾರಿಗಳ ಮಧ್ಯೆ ಹಾಗೂ ರಾಜ್ಯದ ಜನರಲ್ಲಿ ಗೊಂದಲವನ್ನು ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಅವರು ಯಶಸ್ಸು ಕಾಣಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸುಭದ್ರವಾಗಿದೆ ಎಂದರು. ಇನ್ನು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಿ. ವೈ. ವಿಜಯೇಂದ್ರ, ‘ಪಕ್ಷ ನನಗೆ ಎಲ್ಲಿ ಟಿಕೆಟ್ ನೀಡಿದರೂ ಸ್ಪರ್ಧಿಸುತ್ತೇನೆ. ಎಲ್ಲಿ ಅವಕಾಶ ಕೊಟ್ಟರೂ ಸ್ಪರ್ಧಿಸುವ ಆಸೆ ಇದೆ. ಆದರೆ ನಾನು ಸ್ಪರ್ಧಿಸುವ ಬಗ್ಗೆ ಹಾಗೂ ಎಲ್ಲಿ ನಿಲ್ಲಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ’ ಎಂದರು.
from India & World News in Kannada | VK Polls https://ift.tt/3DaVG7z