ಕಾವೇರುತ್ತಿದೆ ಕನ್ನಡಿಗರ ಹೋರಾಟ; ರಾಯಣ್ಣ ಪ್ರತಿಮೆ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಸಿದ್ದರಾಮಯ್ಯ!

ಬೆಳಗಾವಿ: ಪುಂಡರ ಅಟ್ಟಹಾಸವನ್ನು ಖಂಡಿಸಿ ಸೋಮವಾರ ಕನ್ನಡ ಪರ ಸಂಘಟನೆಗಳು ಬೃಹತ್ ಹೋರಾಟ ನಡೆಸಲಿದ್ದು, ವಿರೋಧ ಪಕ್ಷದ ನಾಯಕ ಕೂಡಾ ಸಾಥ್ ನೀಡಲಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಅನಗೋಳದಲ್ಲಿರುವ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಅನಗೋಳದಲ್ಲಿರುವ ರಾಯಣ್ಣನ ಪ್ರತಿಮೆಗೆ ಎಂಇಎಸ್ ಕಿಡಿಗೇಡಿಗಳು ಹಾನಿ ಉಂಟು ಮಾಡಿದ್ದರು. ಇದು ಕನ್ನಡಿಗರನ್ನು ಕೆರಳಿಸಿದೆ. ಈಗಾಗಲೇ ಮೂರ್ತಿಯನ್ನು ಸರಿಪಡಿಸಿ ಅಲ್ಲೇ ಮರು ಪ್ರತಿಷ್ಠಾಪನೆ ಮಾಡಲಾಗಿದೆ. ಇದೀಗ ಆ ಸ್ಥಳಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೆರಳಲಿದ್ದಾರೆ. ಅಷ್ಟೇ ಅಲ್ಲದೆ ಸದನದಲ್ಲೂ ಈ ವಿಚಾರವನ್ನು ಪ್ರಸ್ತಾಪ ಮಾಡಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಕಾಂಗ್ರೆಸ್ ಸಜ್ಜಾಗಿದೆ. ಈ ನಡುವೆ ಕನ್ನಡ ಪರ ಸಂಘಟನೆಗಳು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಸುವರ್ಣಸೌಧ ಚಲೋ ಹಮ್ಮಿಕೊಂಡಿದ್ದಾರೆ. ಒಟ್ಟಿನಲ್ಲಿ ಎಂಇಎಸ್ ಪುಂಡರ ಪುಂಡಾಟ ವಿಚಾರ ಸದನದಲ್ಲಿ ಹೊರಗೂ ಹಾಗೂ ಒಳಗೂ ಗದ್ದಲ ಉಂಟು ಮಾಡಲಿದೆ. ಮತ್ತೊಂದು ಕಡೆಯಲ್ಲಿ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದಾದ್ಯಂತ ಖಾಕಿ ಪಡೆ ಎಚ್ಚರಿಕೆ ವಹಿಸಿದೆ.


from India & World News in Kannada | VK Polls https://ift.tt/33NN23b

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...