ಕನ್ನಡ ಧ್ವಜ ಸುಟ್ಟ ಬೆನ್ನಲ್ಲೇ ಮತ್ತೊಂದು ಕೃತ್ಯ; ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ!

ಬೆಳಗಾವಿ: ಮಹಾರಾಷ್ಟ್ರದಲ್ಲಿ ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಬೆಂಕಿ ಹಾಕಿ ಕನ್ನಡಿಗರ ತಾಳ್ಮೆಯನ್ನು ಕೆದಕಿದ ಬೆನ್ನಲ್ಲೇ ಇದೀಗ ಮತ್ತೊಮ್ಮೆ ಇಂತಹದೇ ಘಟನೆ ಪುನರಾವರ್ತಿಸಿದೆ. ಬೆಳಗಾವಿಯಲ್ಲಿ ಕ್ರಾಂತಿವೀರ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಶುಕ್ರವಾರ ರಾತ್ರಿ ವಿರೂಪಗೊಳಿಸಿದ್ದು, ಇದರಿಂದ ಸ್ವಾಭಿಮಾನಿ ಕನ್ನಡಿಗರ ತಾಳ್ಮೆಗೆ ಮತ್ತೆ ಪೆಟ್ಟು ಬಿದ್ದಿದೆ. ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದರಿಂದ ನಗರದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ರಾತ್ರಿ ಸುಮಾರು ಒಂದು ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ರಾಡ್‌ನಿಂದ ಹೊಡೆದು ಅದರ ಡಾಲ್‌ ಭಗ್ನಗೊಳಿಸಿದ್ದಾರೆ. ಮೂರ್ತಿಯನ್ನು ಹೊಡೆದು ಭಗ್ನಗೊಳಿಸುತ್ತಿರುವ ಶಬ್ದ ಕೇಳಿದಾಗ ಸ್ಥಳೀಯರು ಮನೆಯಿಂದ ಹೊರಗೆ ಬಂದಿದ್ದು, ಇದನ್ನು ಗಮನಿಸಿದ ದುಷ್ಕರ್ಮಿಗಳು ತಕ್ಷಣ ಸ್ಥಳದಿಂದ ಓಡಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ವಿರೂಪಗೊಳಿಸಿದ ಸುದ್ದಿ ತಿಳಿದ ಕೂಡಲೇ ರಾಯಣ್ಣ ಅಭಿಮಾನಿಗಳು ಹಾಗೂ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಟಿಳಕವಾಡಿ ಪೊಲೀಸ್‌ ಠಾಣೆ ಮುಂದೆ ಜಮಾಯಿಸಿದ್ದು, ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿಬೇಕೆಂದು ಆಗ್ರಹಿಸಿದ್ದಾರೆ. ಪೊಲೀಸ್‌ ಠಾಣೆಯ ಮುಂದೆಯೂ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ವಾಹನಗಳಿಗೆ ಕಲ್ಲು ಈ ಮಧ್ಯೆ ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿ ವಿರೂಪ ಪ್ರಕರಣವನ್ನು ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆಯೋಜಿಸಿದ್ದ ಪ್ರತಿಭಟನೆ ತಡರಾತ್ರಿ ತೀವ್ರ ಸ್ವರೂಪ ಪಡೆದುಕೊಂಡಿತು. ಈ ವೇಳೆ ಕೆಲವೆಡೆ ವಾಹನಗಳಿಗೆ ಕಲ್ಲು ತೂರಾಟ ನಡೆದ ಬಗ್ಗೆ ವರದಿಯಾಗಿದೆ. ಕಲ್ಲು ತೂರಾಟದಿಂದ ಇಪ್ಪತ್ತಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.


from India & World News in Kannada | VK Polls https://ift.tt/3FnzwkJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...