ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಮಂಗಳೂರು-ಮುಂಬಯಿ ಮಧ್ಯೆ ಮಲ್ಟಿ ಆ್ಯಕ್ಸೆಲ್‌ ಬಸ್‌ ಸಂಚಾರ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಟು ಮುಂಬೈಗೆ ವೋಲ್ವೋ ಮಲ್ಟಿ ಆ್ಯಕ್ಸಲ್‌ ಸಾರಿಗೆ ಡಿ.12ರಿಂದ ಕಾರ್ಯಾಚರಣೆ ಆರಂಭಿಸಿದೆ. ವೋಲ್ವೋ ಮಲ್ಟಿ ಆ್ಯಕ್ಸಲ್‌ ಸಾರಿಗೆ ಮಂಗಳೂರು ಮೂಲಕ ವಯಾ ಮೂಡುಬಿದಿರೆ, ಕಾರ್ಕಳ, ನಿಟ್ಟೆ, ಬೆಳ್ಮಣ್ಣ್‌, ಶಿರ್ವ ಮಂಚಕಲ್ಲ್‌, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬಯಿಗೆ ತಲುಪಲಿದೆ. ಈ ಸಾರಿಗೆಯು ಮಂಗಳೂರು ಬಸ್‌ ನಿಲ್ದಾಣದಿಂದ ಮಧ್ಯಾಹ್ನ 12.45 ಗಂಟೆಗೆ ಹೊರಟು ಮೂಡುಬಿದಿರೆಗೆ 1.45ಕ್ಕೆ ತಲುಪಲಿದೆ. ಕಾರ್ಕಳದಿಂದ 2.15 ಕ್ಕೆ ಹೊರಟು ನಿಟ್ಟೆ, ಬೆಳ್ಮಣ್ಣು, ಶಿರ್ವ ಮಂಚ ಕಲ್ಲ್‌, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬಯಿಗೆ ಬೆಳಗ್ಗೆ 7 ಗಂಟೆಗೆ ಸರಿಯಾಗಿ ತಲುಪುತ್ತದೆ. ಮರು ಪ್ರಯಾಣದಲ್ಲಿ ಮುಂಬಯಿಯಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಪೂನಾ, ಸತಾರ, ಕೊಲ್ಲಾಪುರ, ನಿಪ್ಪಾಣಿ, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಅಂಕೋಲಾ, ಭಟ್ಕಳ, ಕುಂದಾಪುರ, ಉಡುಪಿ, ಶಿರ್ವ ಮಂಚಕಲ್ಲ್‌, ಬೆಳ್ಮಣ್ಣ್‌, ನಿಟ್ಟೆ, ಕಾರ್ಕಳಕ್ಕೆ ಬೆಳಗ್ಗೆ 6.30ಕ್ಕೆ ತಲುಪುಲಿದೆ. ನಂತರ ಮೂಡುಬಿದಿರೆಯಿಂದ ಬೆಳಗ್ಗೆ 7 ಗಂಟೆಗೆ ಹೊರಟು ಮಂಗಳೂರಿಗೆ ಬೆಳಗ್ಗೆ 8 ಗಂಟೆಗೆ ತಲುಪುತ್ತದೆ. ಮಂಗಳೂರಿನಿಂದ ಮುಂಬಯಿಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 1,400 ರೂ. ನಿಗದಿಪಡಿಸಲಾಗಿದೆ. ಪ್ರಯಾಣಿಕರಿಗೆ ಅವತಾರ್‌ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ವೆಬ್‌ಸೈಟ್‌ https://ift.tt/3F7K5YF ಅಥವಾ ಹತ್ತಿರದ ರಿಸರ್ವೇಶನ್‌ ಕೌಂಟರ್‌ ಅನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


from India & World News in Kannada | VK Polls https://ift.tt/3e5uoWm

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...