ಪರಿಷತ್ ಚುನಾವಣೆ: ಬಿಜೆಪಿ ಜೊತೆ ಜೆಡಿಎಸ್‌ ಮಾಡುತ್ತಾ ಮೈತ್ರಿ? ಕುತೂಹಲ ಕೆರಳಿಸಿದ ಎಚ್‌ಡಿಕೆ ಪತ್ರಿಕಾಗೋಷ್ಠಿ

ಬೆಂಗಳೂರು: ಡಿಸೆಂಬರ್ 10 ರಂದು ವಿಧಾನ ಪರಿಷತ್ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‌ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಸೋಲು ಗೆಲುವಿನ ಲೆಕ್ಕಾಚಾರದ ನಡುವೆ ಕೆಲವೊಂದು ಕ್ಷೇತ್ರಗಳಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿಯ ಮಾತುಕತೆಗಳು ಕುತೂಹಲ ಕೆರಳಿಸಿವೆ. ಈ ನಡುವೆ ಮಾಜಿ ಸಿಎಂ ಮಂಗಳವಾರ ಮಧ್ಯಾಹ್ಮ 12 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದು ಮೈತ್ರಿಯ ಬಗ್ಗೆ ನಮ್ಮ ನಿಲುವು ತಿಳಿಸುವ ಸಾಧ್ಯತೆ ಇದೆ. ಪರಿಷತ್‌ನಲ್ಲಿ ನಡೆಯುತ್ತಾ ಮೈತ್ರಿ? ಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್ 5 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಿದೆ. ಆದರೆ ಉಳಿದ ಕಡೆಗಳಲ್ಲಿ ಪಕ್ಷದ ನಿಲುವು ಏನು ಎಂಬುವುದು ಈವರೆಗೂ ಸ್ಪಷ್ಟಪಡಿಸಿಲ್ಲ. ಈ ನಡುವೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕುಮಾರಸ್ವಾಮಿ ಅವರಿಗೆ ಫೋನ್ ಕರೆ ಮಾಡಿ ಉಳಿದ ಕ್ಷೇತ್ರಗಳಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ ಇದಕ್ಕೆ ಅಧಿಕೃತವಾಗಿ ಯಾವುದೇ ಉತ್ತರವನ್ನು ಜೆಡಿಎಸ್‌ ನೀಡಿಲ್ಲ. ಈ ನಿಟ್ಟಿನಲ್ಲಿ ಮಂಗಳವಾರದ ಪತ್ರಿಕಾಗೋಷ್ಠಿ ಮಹತ್ವ ಪಡೆದುಕೊಂಡಿದೆ. ಸಿಂದಗಿ ಹಾಗೂ ಹಾನಗಲ್‌ ಮತ್ತು ಬಸವಕಲ್ಯಾಣ ಉಪಚುನಾವಣೆಯಲ್ಲಿ ಜೆಡಿಎಸ್‌ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಪರೋಕ್ಷವಾಗಿ ಬಿಜೆಪಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ ಎಂದೇ ಕಾಂಗ್ರೆಸ್ ಆರೋಪ ಮಾಡಿತ್ತು. ಅಷ್ಟೇ ಅಲ್ಲದೆ ಜೆಡಿಎಸ್‌ ಪಕ್ಷ ಬಿಜೆಪಿಯ ಬಿ ಟೀಂ ಎಂದು ಆರೋಪಿಸಿದ್ದರು ಸಿದ್ದರಾಮಯ್ಯ. ಇದೀಗ ವಿಧಾನಪರಿಷತ್‌ ಚುನಾವಣೆಯಲ್ಲಿ ಮೈತ್ರಿ ಮಾಡಿದ್ದಲ್ಲಿ ಮುಂದಿನ ವಿಧಾನಸಭೆಯ ಚುನಾವಣೆಯ ಮೇಲೂ ಇದು ಪರಿಣಾಮ ಬೀರಲಿದೆ. ಈ ನಿಟ್ಟಿನಲ್ಲಿ ಕುಮಾರಸ್ವಾಮಿ ಅವರು ಏನು ನಿಲುವು ತೆಗೆದುಕೊಳ್ಳುತ್ತಾರೆ ಎಂಬವುದು ಕೂಡಾ ಕುತೂಹಲಕ್ಕೆ ಕಾರಣವಾಗಿದೆ. ಬಹಿರಂಗವಾಗಿ ಬೆಂಬಲ ನೀಡದೆ ಒಳಮೈತ್ರಿ ಮಾಡಿಕೊಳ್ಳುತ್ತಾರಾ? ಅಥವಾ ಬಹಿರಂಗ ಮೈತ್ರಿಗೆ ಅಸ್ತು ಎನ್ನುತ್ತಾರಾ ಎಂಬುವುದನ್ನು ಕಾದುನೋಡಬೇಕಿದೆ.


from India & World News in Kannada | VK Polls https://ift.tt/3dxZ1TL

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...