
ಬೆಂಗಳೂರು: ಸಿಎಂ ಅವರು ಗುರುವಾರ ದಿಲ್ಲಿಗೆ ತೆರಳಿದರು. ದಿಲ್ಲಿಯಲ್ಲಿ ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಅವರು, ಬಳಿಕ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ರಾಜ್ಯದಲ್ಲೂ ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡುತ್ತಿರುವುದು ಮಹತ್ವ ಪಡೆದುಕೊಂಡಿದೆ. ರಾಜ್ಯದ ಆರೋಗ್ಯ ಇಲಾಖೆಯ ನೌಕರರು ಹಾಗೂ ಫ್ರಂಟ್ ಲೈನ್ ವರ್ಕರ್ಸ್‌ಗಳಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆಯೂ ಚರ್ಚೆ ನಡೆಯುತ್ತಿದ್ದು ಈ ನಿಟ್ಟಿನಲ್ಲಿ ಕೇಂದ್ರದ ನಿರ್ಧಾರಗಳ ಬಗ್ಗೆ ಮಾತನಾಡಲಿದ್ದಾರೆ. ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಹಾಗೂ ಆರೋಗ್ಯ ಸಚಿವರನ್ನು ಭೇಟಿ ಮಾಡ್ತೇನೆ ಎಂದು ತಿಳಿಸಿದರು. ಆದರೆ ಸಂಪುಟ ವಿಸ್ತರಣೆ ಚರ್ಚೆಯ ಬಗ್ಗೆ ಕೇಳಿದ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆಯನ್ನು ಅವರು ನೀಡಿಲ್ಲ. ವಿಶ್ವನಾಥ್ ಹತ್ಯೆಗೆ ಸಂಚು, ತನಿಖೆ ನಡೆಯುತ್ತಿದೆ ಎಂದ ಸಿಎಂ ಇದೇ ಸಂದರ್ಭದಲ್ಲಿ ಬಿಜೆಪಿಯ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದರು. ವಿಶ್ವನಾಥ್ ವಿಚಾರವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆ ಮಾಡಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೇಳಿದ್ದಾರೆ. ಇದರಲ್ಲಿ ನಮ್ಮದೇನೂ ಇಲ್ಲ, ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ ಎಂದರು. ಇನ್ನು ಉನ್ನತ ಮಟ್ಟದ ತನಿಖೆಗೆ ಎಸ್.ಆರ್. ವಿಶ್ವನಾಥ್ ಆಗ್ರಹಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಉನ್ನತ ಮಟ್ಟದ ತನಿಖೆ ಅಗತ್ಯತೆ ಪ್ರಾಥಮಿಕ ತನಿಖೆಯ ಬಳಿಕ ತೀರ್ಮಾನ ಆಗುತ್ತದೆ ಎಂದು ಹೇಳಿದರು. ಸಮಯ ನೀಡದ ಪಿಎಂಪ್ರಧಾನಿ ನರೇಂದ್ರ ಮೋದಿಯವರು ಡಿಸೆಂಬರ್ 6ರಂದು ಬೆಂಗಳೂರಿಗೆ ಆಗಮಿಸಲಿದ್ದು, ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಹೇಳಿದ್ದರು. ಆದರೆ, ಈ ಸಂಬಂಧ ಪ್ರಧಾನಿ ಕಾರ್ಯಾಲಯದಿಂದ ಯಾವುದೇ ಸಂದೇಶ ಬಂದಿಲ್ಲ ಎಂದು ಮೂಲಗಳು ಖಚಿತ ಪಡಿಸಿವೆ. ಹಾಗಾಗಿ ಪ್ರಧಾನಿಯವರು ಸದ್ಯ ರಾಜ್ಯಕ್ಕೆ ಬರುವ ಸಾಧ್ಯತೆ ಇಲ್ಲ.
from India & World News in Kannada | VK Polls https://ift.tt/3FXKD3A