ಹತ್ಯೆಗೆ ಸಂಚು ವಿಡಿಯೋ ಸ್ಫೋಟ: ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಎಸ್‌ಆರ್ ವಿಶ್ವನಾಥ್

ಬೆಂಗಳೂರು: ಹತ್ಯೆಗೆ ಸಂಚು ರೂಪಿಸಿರುವ ವಿಡಿಯೋ ಬಹಿರಂಗಗೊಂಡ ಬೆನ್ನಲ್ಲೇ ಯಲಹಂಕ ಬಿಜೆಪಿ ಶಾಸಕ ಎಸ್‌ಆರ್‌ ವಿಶ್ವನಾಥ್ ಅವರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಗುರುವಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ಆರ್‌.ಟಿ ನಗರ ನಿವಾಸಕ್ಕೆ ತೆರಳಿದ ಎಸ್‌ ಆರ್‌ ವಿಶ್ವನಾಥ್ ಕೆಲಹೊತ್ತು ಮಾತುಕತೆ ನಡೆಸಿದರು. ಬಳಿಕ ಸಿಎಂ ಬೊಮ್ಮಾಯಿ ಅವರ ಜೊತೆಗೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದರು. ಕಾಂಗ್ರೆಸ್ ಮುಖಂಡ ಹಾಗೂ ಕುಳ್ಳ ದೇವರಾಜ್ ಎಂಬಿಬ್ಬರು ಮಾತನಾಡಿರುವ ವಿಡಿಯೋ ಒಂದು ಬಹಿರಂಗಗೊಂಡು ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ವಿಡಿಯೋದಲ್ಲಿ ಎಸ್‌ಆರ್‌ ವಿಶ್ವನಾಥ್‌ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸುವ ಕುರಿತಾಗಿ ಮಾತುಕತೆ ನಡೆದಿದೆ. ಈ ಹಿನ್ನೆಲೆಯಲ್ಲಿ ಎಸ್‌ ಆರ್‌ ವಿಶ್ವನಾಥ್ ಅವರು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಗೋಪಾಲಕೃಷ್ಣ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಾಗದೆ ಇದೀಗ ಸುಪಾರಿ ನೀಡಿ ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಶಾಸಕರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಆರೋಪವನ್ನು ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಿರಾಕರಿಸಿದ್ದಾರೆ. ಈ ನಡುವೆ ಎಸ್‌.ಆರ್‌ ವಿಶ್ವನಾಥ್ ಅವರು ಈ ಪ್ರಕರಣದ ಕುರಿತಾಗಿ ಉನ್ನತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರ ಬಳಿಯೂ ಈ ಪ್ರಕರಣದ ಮಾಹಿತಿಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಸಿಎಂ ಬಳಿ ಏನು ಚರ್ಚೆ ನಡೆಸಿದ್ದಾರೆ ಎಂಬ ಬಗ್ಗೆ ವಿಶ್ವನಾಥ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಎಸ್‌.ಆರ್‌ ವಿಶ್ವನಾಥ್ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಶಾಸಕ ಎಸ್‌ ಆರ್‌ ವಿಶ್ವನಾಥ್ ಅವರ ಹತ್ಯೆಗೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಈಗಾಗಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆ ಮಾಡಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೇಳಿದ್ದಾರೆ. ಇದರಲ್ಲಿ ನಮ್ಮದೇನು ಇಲ್ಲ, ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ. ಉನ್ನತ ಮಟ್ಟದ ತನಿಖೆ ಅಗತ್ಯದ ಬಗ್ಗೆ ಪ್ರಾಥಮಿಕ ತನಿಖೆಯ ಬಳಿಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ರಾಜಕೀಯ ಜಿದ್ದಾಜಿದ್ದಿಗೆ ಬರಲಿ, ನಾನು ಹೋರಾಟ ಮಾಡುತ್ತೇನೆ ಆದರೆ ದ್ವೇಷದ ರಾಜಕೀಯ ಸರಿಯಲ್ಲ. ಶಾಸಕನಿಗೆ ಕೊಲೆ ಸುಪಾರಿ‌ ನೀಡಿದ್ದು ನಿಜಕ್ಕೂ ಆತಂಕಕಾರಿ. ಯಾಕೆ ಇಂತಹ ದುರ್ಬುದ್ದಿ ಗೋಪಾಲಕೃಷ್ಣ ಅವರಿಗೆ ಬಂತೋ ಗೊತ್ತಿಲ್ಲ. ಈವರೆಗೆ ಇಂತಹ ಘಟನೆ ನನ್ನ ಕ್ಷೇತ್ರದಲ್ಲಿ ನಡೆದಿಲ್ಲ. ಕಳೆದ ಎರಡು ಬಾರಿ ನನ್ನ ವಿರುದ್ಧ ಚುನಾವಣೆಯಲ್ಲಿ ಗೋಪಾಲಕೃಷ್ಣ ಸ್ಪರ್ಧೆ ಮಾಡಿದ್ದಾರೆ.‌ನಾನು ಏಕಾಂಗಿಯಾಗಿ ಓಡಾಡುವಂತವನು. ರಾಜಕೀಯವಾಗಿ ಯಾವುದೇ‌ ದ್ವೇಷ ಇಲ್ಲ .ಈ ಘಟನೆಯಿಂದ ದಿಗ್ಬ್ರಮೆಗೆ ಒಳಗಾಗಿದ್ದೇನೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ಬುಧವಾರ ಹೇಳಿಕೆ ನೀಡಿದ್ದರು.


from India & World News in Kannada | VK Polls https://ift.tt/3xKnJK0

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...