ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ಧಿವಾದ ಹೇಳುವ ಅವಶ್ಯಕತೆ ಇಲ್ಲ; ಸತೀಶ್ ಜಾರಕಿಹೊಳಿ

: ವಿಧಾನ ಪರಿಷತ್ ಚುನಾವಣೆಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿಯಿಂದ ಇಬ್ಬರು ಅಭ್ಯರ್ಥಿಗಳನ್ನು ಗೆಲ್ಲಿಸಲು ಸಾಧ್ಯವಾಗುವುದಿಲ್ಲ. ಅವರೇನಿದ್ದರೂ ಒಬ್ಬ ಅಭ್ಯರ್ಥಿಯನ್ನು ಮಾತ್ರ ಗೆಲ್ಲಿಸಬಹುದಷ್ಟೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಶುಕ್ರವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಒಂದು ಸುತ್ತಿನ ಪ್ರಚಾರ ಮುಗಿಸಿದ್ದೇವೆ. ಎರಡನೇ ಸುತ್ತಿನ ಪ್ರಚಾರ ಆರಂಭವಾಗಿದೆ. ಚುನಾವಣೆಗೂ ಮುಂಚೆಯೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎಂದರು. ಲಖನ್ ಬಗ್ಗೆ ನಾವು ಈಗಾಗಲೇ ಏನು ಮಾತನಾಡಬೇಕಿತ್ತೋ ಮಾತನಾಡಿದ್ದೇವೆ ಎಂದ , ಲಖನ್ ಗೂ ನಮ್ಮ ಪಕ್ಷಕ್ಕೂ ಸಂಬಂಧ ಇಲ್ಲ. ನಾವು ಚುನಾವಣೆ ಮಾಡುತ್ತಿರುವುದು ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿ ಲಖನ್ ವಿರುದ್ಧ. ಈ ಚುನಾವಣೆಯಲ್ಲಿ ಕುಟುಂಬ ವಿಷಯ ತರುವುದು ಸರಿಯಲ್ಲ ಎಂದರು. ಇನ್ನು ಈ ಬಾರಿಯ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಮತಗಳನ್ನು ಈಗಾಗಲೇ ‌ನಾವು ಭದ್ರಪಡಿಸಿಕೊಂಡಿದ್ದೇವೆ ಎಂದರು. ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ಧಿವಾದ ಹೇಳುವ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿಯೇ ಗೊಂದಲಗಳನ್ನು ಮೊದಲು ಸರಿಪಡಿಸಿಕೊಳ್ಳಲಿ. ಒಂದೇ ವೇದಿಕೆಯಲ್ಲಿ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಾರೆ. ಮೊದಲು ಅದನ್ನು ಸರಿಪಡಿಸಿಕೊಳ್ಳಲಿ ಎಂದರು. ಇನ್ನು ಡಿಕೆ ಶಿವಕುಮಾರ್ ದೊಡ್ಡ ಸಾಹುಕಾರ್ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ರಾಜಕೀಯವಾದ ಹೇಳಿಕೆ. ಅದನ್ನು ನಮ್ಮ ತಲೆ ಮೇಲೆ ಯಾಕೆ ತೆಗೆದುಕೊಳ್ಳುವುದು ಎಂದು ಪ್ರತಿಕ್ರಿಯಿಸಿದರು.


from India & World News in Kannada | VK Polls https://ift.tt/3rtg5Tn

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...