ಮುಂಬೈ: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಸಂಘಟಿತ ಪ್ರದರ್ಶನ ತೋರಿದ ಟೀಮ್ ಇಂಡಿಯಾ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 372 ರನ್‌ಗಳ ಭರ್ಜರಿ ಜಯ ಗಳಿಸಿತು. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿಯೇ ಭಾರತ ತಂಡದ ದೊಡ್ಡ ಮೊತ್ತ ಅಂತರದ ಜಯ ಇದಾಯಿತು. ಆದರೆ, ನ್ಯೂಜಿಲೆಂಡ್ ತಂಡಕ್ಕೆ ಇದು ಅತ್ಯಂತ ದೊಡ್ಡ ಅಂತರದ ಸೋಲಾಯಿತು. ಇಲ್ಲಿನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೋಮವಾರ 5 ವಿಕೆಟ್ ಕಳೆದುಕೊಂಡು 140 ರನ್‌ಗಳಿಂದ ನಾಲ್ಕನೇ ದಿನದಾಟ ಆರಂಭಿಸಿದ ನ್ಯೂಜಿಲೆಂಡ್ ತಂಡಕ್ಕೆ ಗೆಲ್ಲಲು 400 ರನ್ ಅಗತ್ಯವಿತ್ತು. ಆದರೆ, ಜಯಂತ್ ಯಾದವ್ ಸ್ಪಿನ್ ಮೋಡಿಗೆ ನಲುಗಿದ ಕಿವೀಸ್ 56.3 ಓವರ್‌ಗಳಿಗೆ 167 ರನ್‌ಗಳಿಗೆ ಸರ್ವ ಪತನ ಕಂಡಿತು. ತವರು ಮಣ್ಣಿನಲ್ಲಿ ಭಾರತ ತಂಡದ ಸತತ 14ನೇ ಟೆಸ್ಟ್ ಸರಣಿ ಗೆಲುವು ಇದಾಯಿತು. ಆ ಮೂಲಕ ಹೆಚ್ಚು ಕಡಿಮೆ ಎರಡು ದಿನ ಬಾಕಿ ಇರುವಾಗಲೇ ಭಾರತ ತಂಡ ಎರಡನೇ ಪಂದ್ಯ ಗೆದ್ದು, ಟೆಸ್ಟ್ ಸರಣಿಯನ್ನು 1-0 ಅಂತರದಲ್ಲಿ ಮುಡಿಗೇರಿಸಿಕೊಂಡಿತು. ದ್ವಿತೀಯ ಇನಿಂಗ್ಸ್‌ನಲ್ಲಿ ಭಾರತದ ಪರ ಅತ್ಯುತ್ತಮ ಬೌಲ್ ಮಾಡಿದ ಆರ್ ಅಶ್ವಿನ್ ಹಾಗೂ ಜಯಂತ್ ಯಾದವ್ ತಲಾ 4 ವಿಕೆಟ್‌ಗಳನ್ನು ಪಡೆದುಕೊಂಡರು.from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3Dt09m8