ಚೇತರಿಕೆ ಕಂಡ ಪ್ರವಾಸೋದ್ಯಮ: ಓಮಿಕ್ರಾನ್‌ ಆತಂಕದ ನಡುವೆಯೂ ಶೃಂಗೇರಿಗೆ ಪ್ರವಾಸಿಗರ ದಂಡು!

: ಓಮಿಕ್ರಾನ್‌ ಆತಂಕದ ನಡುವೆಯೂ ಕ್ರಿಸ್‌ಮಸ್‌ ರಜೆ ಹಾಗೂ ವರ್ಷಾಂತ್ಯದ ಹಿನ್ನೆಲೆಯಲ್ಲಿ ಶ್ರೀಶಾರದಾ ಪೀಠಕ್ಕೆ ಪ್ರವಾಸಿಗರ ದಂಡು ಹರಿದು ಬಂದಿದೆ. ಪಟ್ಟಣದ ವಾಹನ ನಿಲುಗಡೆ ಸ್ಥಳವಾದ ಗಾಂಧಿಮೈದಾನದಲ್ಲಿ ಪ್ರವಾಸಿ ವಾಹನದ ಸಾಲು ಹಾಗೂ ಶ್ರೀಮಠದ ಎದುರು ಭಕ್ತಾದಿಗಳ ಸಾಲು ಕಂಡು ಬಂದಿದೆ. ಕೊರೊನಾ ನಂತರ ಸಂಪೂರ್ಣ ನೆಲಕಚ್ಚಿದ್ದು, ಇದೀಗ ಭಾರಿ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಪ್ರವಾಸೋದ್ಯಮ ಚೇತರಿಕೆ ಕಂಡು ಬಂದಿದೆ. ಗಾಂಧಿ ಮೈದಾನದಲ್ಲಿ ವಾಹನ ನಿಲುಗಡೆ ಅಲ್ಲದೇ ಪಟ್ಟಣದ ಎಲ್ಲಾ ರಸ್ತೆಗಳಲ್ಲೂ ಪ್ರವಾಸಿಗರ ವಾಹನ ನಿಲುಗಡೆಯಾಗಿದೆ. ಪಟ್ಟಣದ ವಸತಿಗೃಹಗಳು, ಹೋಂ ಸ್ಟೇಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು, ಹೊಂಸ್ಟೇಗಳನ್ನು ಮುಂಗಡವಾಗಿ ಕಾಯ್ದಿರಿಸಲಾಗಿದೆ. ಶ್ರೀಮಠದಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ ಇದ್ದು, ಸಾವಿರಾರು ಜನರು ಊಟಕ್ಕೆ ಆಗಮಿಸುತ್ತಿದ್ದಾರೆ. ಭಕ್ತರಿಗೆ ಎರಡು ಲಸಿಕೆ ಪ್ರಮಾಣಪತ್ರ ಕಡ್ಡಾಯಗೊಳಿಸಲಾಗಿದೆ. ಜಗದ್ಗುರುಗಳು ವಾಸ್ತವ್ಯ ಇರುವ ಗುರುಭವನಕ್ಕೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಗುರುದರ್ಶನ ಬೆಳಗ್ಗೆ 11ರಿಂದ ಮಧ್ಯಾಹ್ನದವರೆಗೆ ಮಾತ್ರ ಇದೆ. ಶ್ರೀಮಠದ ಎದುರಿನ ಶ್ರೀ ಚಂದ್ರಶೇಖರ ಭಾರತೀ ಸಭಾಂಗಣದಲ್ಲಿ ಮಕ್ಕಳ ಅಕ್ಷರಭ್ಯಾಸವೂ ನಡೆಯುತ್ತಿದ್ದು, ನೂರಾರು ಮಕ್ಕಳು ಪಾಲ್ಗೊಳ್ಳುತ್ತಿದ್ದಾರೆ.


from India & World News in Kannada | VK Polls https://ift.tt/3mTTDzN

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...