ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಗ್ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ವಿರುದ್ಧ ಬೆಂಗಳೂರು ದಕ್ಷಿಣ ಸಿಇಎನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜೆ.ಪಿ ನಗರ ನಿವಾಸಿ ಲಕ್ಷ್ಮೀ ನಾರಾಯಣ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತಾಂತರ ನಿಷೇಧ ಕಾಯಿದೆ ಜಾರಿ ಹಿನ್ನೆಲೆಯಲ್ಲಿ ಕ್ರೈಸ್ತ ಧರ್ಮವನ್ನು ಅವಹೇಳನ ಮಾಡುವ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹಾಗೂ ದುರುದ್ದೇಶದಿಂದ ಕೂಡಿದ ಬರಹವನ್ನು ಡಿ. 22ರಂದು ಪ್ರಶಾಂತ್ ಸಂಬರಗಿ ತಮ್ಮ ಫೇಸ್ಬುಕ್ನಲ್ಲಿ ಪ್ರಕಟಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ರಾಜಕೀಯ ನಿಲುವುಗಳನ್ನು ಅವಹೇಳನ ಮಾಡಿ ಪೋಸ್ಟ್ಗಳನ್ನು ಪ್ರಶಾಂತ್ ಸಂಬರಗಿ ಹಾಕಿದ್ದರು. ಹಾಗಾಗಿ, ಡಿಕೆ ಶಿವಕುಮಾರ್ ಅವರ ಬಗ್ಗೆ ತೇಜೋವಧೆ ಮಾಡುವಂತಹ ಬರಹವನ್ನು ಪ್ರಕಟಿಸಿರುವ ಆರೋಪಿ ಪ್ರಶಾಂತ್ ಸಂಬರಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಲಕ್ಷ್ಮೀ ನಾರಾಯಣ್ ಮನವಿ ಮಾಡಿದ್ದಾರೆ. ವಕೀಲರೂ ಆಗಿರುವ ಲಕ್ಷ್ಮೀ ನಾರಾಯಣ್ ನೀಡಿದ ದೂರನ್ನು ಆಧರಿಸಿ ಬಿಗ್ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ವಿರುದ್ಧ ಬೆಂಗಳೂರು ದಕ್ಷಿಣ ಸಿಇಎನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
from India & World News in Kannada | VK Polls https://ift.tt/3EuBeiJ