
ಮುಂಬೈ: ಇಂದು ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಅಂದಹಾಗೆ, ಮೊದಲನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದ ನಿಯಮಿತ ನಾಯಕ ಇದೀಗ ಆಡಲು ತಂಡಕ್ಕೆ ಮರಳಿದ್ದಾರೆ. ಈ ಹಿನ್ನೆಲೆಯಲ್ಲಿ ಅಜಿಂಕ್ಯ ರಹಾನೆ ಅವರ ಬದಲು ಕೊಹ್ಲಿ ಎಂದಿನಂತೆ ತಂಡವನ್ನು ಮುನ್ನಡೆಸಲಿದ್ದಾರೆ. ನ್ಯೂಜಿಲೆಂಡ್ ತಂಡದ ನಾಯಕ ಗಾಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಟಾಮ್ ಲೇಥನ್ ತಂಡವನ್ನು ಮುನ್ನಡೆಸಲಿದ್ದಾರೆ. ರಹಾನೆ, ಜಡೇಜಾ, ಇಶಾಂತ್ ಔಟ್: ವಿಭಿನ್ನ ಗಾಯಕ್ಕೆ ತುತ್ತಾಗಿರುವ ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ ಹಾಗೂ ಇಶಾಂತ್ ಶರ್ಮಾ ಅವರು ಎರಡನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಹ್ಲಿ ಎಂದಿನಂತೆ ತಮ್ಮ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿದ್ದು, ಶ್ರೇಯಸ್ ಅಯ್ಯರ್ 5ನೇ ಕ್ರಮಾಂಕದಲ್ಲಿ ಮುಂದುವರಿಯಲಿದ್ದಾರೆ. ಇನ್ನು ರವೀಂದ್ರ ಜಡೇಜಾ ಸ್ಥಾನದಲ್ಲಿ ಜಯಂತ್ ಯಾದವ್ ಪ್ಲೇಯಿಂಗ್ ಇಲೆವೆನ್‌ಗೆ ಬಂದಿದ್ದಾರೆ. ಉಭಯ ತಂಡಗಳ ಪ್ಲೇಯಿಂಗ್ XI ಭಾರತ: ಮಯಾಂಕ್ ಅಗರ್ವಾಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ(ನಾಯಕ), ಶ್ರೇಯಸ್ ಅಯ್ಯರ್, ವೃದ್ದಿಮಾನ್ ಸಹಾ(ವಿ.ಕೀ), ಆರ್ ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್. ನ್ಯೂಜಿಲೆಂಡ್: ಟಾಮ್ ಲೇಥಮ್(ನಾಯಕ), ವಿಲ್ ಯಂಗ್, ಡ್ಯಾರಿಲ್ ಮಿಚೆಲ್, ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಟಾಮ್ ಬ್ಲಂಡೆಲ್(ವಿ.ಕೀ), ರಚಿನ್ ರವಿಂದ್ರ, ಕೈಲ್ ಜೇಮಿಸನ್, ಟಿಮ್ ಸೌಥಿ, ಅಜಾಝ್ ಪಟೇಲ್, ವಿಲ್ ಸೋಮರ್‌ವಿಲ್ಲೆ
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3ruUoSG