Omicron Variant: ಸಿಎಂ ಬೊಮ್ಮಾಯಿ ತುರ್ತು ಸಭೆ, ಜಾರಿಗೊಳ್ಳಲಿದೆಯಾ ಹೊಸ ಮಾರ್ಗಸೂಚಿ?

ಬೆಂಗಳೂರು: ರಾಜ್ಯದಲ್ಲಿ ಎರಡು ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸಿಎಂ ಶುಕ್ರವಾರ ತುರ್ತು ಸಭೆ ನಡೆಸಲಿದ್ದಾರೆ. ಆರೋಗ್ಯ ಇಲಾಖೆ ಹಾಗೂ ಇತರ ಹಿರಿಯ ಅಧಿಕಾರಿಗಳ ಜೊತೆ ಮಹತ್ವದ ಸಭೆಯನ್ನು ಸಿಎಂ ಬೊಮ್ಮಾಯಿ ಹಮ್ಮಿಕೊಂಡಿದ್ದು, ಹೊಸ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಿದ್ದಾರೆಯೇ ಎಂಬ ಕುತೂಹಲ ಕೆರಳಿದೆ. ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಕೆಲವೊಂದು ಮಹತ್ವದ ವಿಚಾರಗಳನ್ನು ತಿಳಿಸುವ ಸಾಧ್ಯತೆ ಇದೆ. ಸಿಎಂ ಬೊಮ್ಮಾಯಿ ಅವರು ಗುರುವಾರ ದಿಲ್ಲಿ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್, ಮನ್ಸುಖ್ ಮಾಂಡವೀಯ, ಕಿರೆನ್ ರಿಜಿಜು ಮುಂತಾದವರನ್ನು ಭೇಟಿ ಮಾಡಿದ್ದರು. 18ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿರುವ ಓಮಿಕ್ರಾನ್ ಇದೀಗ ರಾಜ್ಯಕ್ಕೂ ಕಾಲಿಟ್ಟಿದೆ. ಬೆಂಗಳೂರಿನ ಓರ್ವ ವೈದ್ಯ ಸೇರಿದಂತೆ ಇಬ್ಬರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ವೈದ್ಯರ ಸಂಪರ್ಕದಲ್ಲಿದ್ದ ಐವರಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿದ್ದು, ಅವರನ್ನೂ ಕೂಡಾ ಐಸೋಲೇಷನ್‌ನಲ್ಲಿ ಇಡಲಾಗಿದೆ. ಇಬ್ಬರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಟ್ರಾಕ್‌ ಮಾಡಲಾಗಿದ್ದು ಅವರನ್ನೆಲ್ಲ ಪ್ರತ್ಯೇಕ ವಾಸಕ್ಕೆ ಒಳಪಡಿಸಲಾಗಿದೆ. ಸಭೆಯಲ್ಲಿ ಏನೆಲ್ಲಾ ಚರ್ಚೆ?
  • ಓಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾಗಿರುವ ಮುಂಜಾಗರೂಕತಾ ಕ್ರಮಗಳ ಬಗ್ಗೆ ಚರ್ಚೆ
  • ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿರುವ ಸಿಎಂ ಬೊಮ್ಮಾಯಿ
  • ಓಮಿಕ್ರಾನ್ ಸೋಂಕು ವೇಗವಾಗಿ ಹರಡುವ ಸಾಧ್ಯತೆ ಇರುವುದರಿಂದ ಕೈಗೊಳ್ಳಬೇಕಾದ ನಿಯಂತ್ರಣಾ ಕ್ರಮಗಳ ಬಗ್ಗೆ ಚರ್ಚೆ
  • ಹೊಸ ಜಾರಿಗೊಳಿಸುವ ಅಗತ್ಯಗಳ ಕುರಿತಾಗಿ ಅಧಿಕಾರಿಗಳ ಜೊತೆ ಮಾಹಿತಿ ಪಡೆಯಲಿರುವ ಸಿಎಂ ಬೊಮ್ಮಾಯಿ
  • ಲಸಿಕಾ ಅಭಿಯಾನಕ್ಕೆ ವೇಗ ಕೊಡುವ ನಿಟ್ಟಿನಲ್ಲೂ ಸಭೆಯಲ್ಲಿ ಚರ್ಚೆ ಸಾಧ್ಯತೆ
  • ಗುಂಪು ಸೇರುವಿಕೆಗೆ ನಿಯಂತ್ರಣ, ಸಭೆ ಸಮಾರಂಭಗಳಿಗೆ ಕಡಿವಾಣ, ಮಾಸ್ಕ್‌ ಕಡ್ಡಾಯ ಮುಂತಾದ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಚರ್ಚೆ
  • ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಗೊಂದಲದ ಕುರಿತಾಗಿಯೂ ತಜ್ಞರ ಜೊತೆ ಸಭೆಯಲ್ಲಿ ಚರ್ಚೆ ಸಾಧ್ಯತೆ
  • ಓಮಿಕ್ರಾನ್ ಸೋಂಕಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕೈಗೊಂಡಿರುವ ವ್ಯವಸ್ಥೆಗಳ ಬಗ್ಗೆಯೂ ಮಾಹಿತಿ ಪಡೆಯಲಿರುವ ಸಿಎಂ


from India & World News in Kannada | VK Polls https://ift.tt/31gmOp7

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...