Omicron Variant: ಓಮಿಕ್ರಾನ್ ಬಗ್ಗೆ ಭಯ ಬೇಡ, ಎಚ್ಚರಿಕೆ ಇರಲಿ: ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿದ್ದು, ಈ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆ ಇರಲಿ ಎಂದು ಗೃಹ ಸಚಿವ ಹೇಳಿದರು. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಸರ್ಕಾರ ಹೊಸ ಮಾರ್ಗಸೂಚಿ ಜಾರಿಗೊಳಿಸಿದರೆ ಅದನ್ನು ಕಾರ್ಯರೂಪಕ್ಕೆ ತರಲು ಪೊಲೀಸ್ ಇಲಾಖೆ ಎಲ್ಲ ರೀತಿಯ ಸಹಕಾರ ನೀಡುತ್ತದೆ ಎಂದರು. ಇದು ಸಾವು ಬದುಕಿನ ಪ್ರಶ್ನೆಯಾಗಿದೆ. ಎರಡನೇ ಅಲೆಯಲ್ಲಿ ಸಾಕಷ್ಟು ಹಾನಿಯಾಗಿದೆ. ಹಾಗಾಗಿ ಈ ಬಾರಿ ಯಾವುದೇ ಪ್ರಾಣ ಹಾನಿಯಾಗದಂತೆ ತಡೆಗಟ್ಟಲು ಪೊಲೀಸರು ಯಾವ ರೀತಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡಬೇಕು ಎಂಬ ಬಗ್ಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು. ಕೋವಿಡ್ ತಡೆಗಟ್ಟಲು ಎಲ್ಲ ಇಲಾಖೆಯ ಜೊತೆ ನಾವು ಸಹಕರಿಸುತ್ತೇವೆ. ಇನ್ನು ಬೆಳಗಾವಿ ಅಧಿವೇಶನದ ಬಗ್ಗೆ ಕೋವಿಡ್ ಟಾಸ್ಕ್ ಫೋರ್ಸ್, ಸ್ಪೀಕರ್ ಹಾಗೂ ಸಿಎಂ ನಿರ್ಧಾರ ಮಾಡುತ್ತಾರೆ ಎಂದರು.‌ ವಿಶ್ವನಾಥ್‌ಗೆ ಭದ್ರತೆಯಲಹಂಕ ಶಾಸಕ ಎಸ್ ಆರ್‌ ವಿಶ್ವನಾಥ್ ಅವರಿಗೆ ಎಲ್ಲ ರೀತಿಯಲ್ಲಿ ರಕ್ಷಣೆ ಕೊಟ್ಟಿದ್ದೇವೆ. ಮನೆ ಹಾಗೂ ವೈಯಕ್ತಿಕ ಓಡಾಟದ ಸಂದರ್ಭದಲ್ಲಿ ರಕ್ಷಣೆ ‌ನೀಡಲಾಗಿದೆ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅದನ್ನು ಯಾವ ಮಟ್ಟದಲ್ಲಿ ತನಿಖೆ ಮಾಡುವ ಬಗ್ಗೆ ಹಿರಿಯ ಅಧಿಕಾರಿಗಳು ಚಿಂತನೆ ಮಾಡುತ್ತಾರೆ. ಈಗಾಗಲೇ ‌ವಿಶ್ವನಾಥ್ ಅವರ ಬಳಿ ಪೊಲೀಸರು ಮಾಹಿತಿಯನ್ನು ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು. ಯಾವ ಶಾಸಕರಿಗೆ ಜೀವ ಬೆದರಿಕೆ ಇದೆ ಎಂದಾದರೆ ರಕ್ಷಣೆ ಕೊಡುವುದು ಪೊಲೀಸರ ಕರ್ತವ್ಯ.‌ ಒಬ್ಬರನ್ನು ಸಾಯಿಸಿ ಮುಂದೆ ಬರಬಹುದು ಎಂಬ ಚಿಂತನೆ ವಿಕೃತಿ. ಅದಕ್ಕೆ ಕಾನೂನು ಪ್ರಕಾರವಾಗಿ ಏನು ಮಾಡಬೇಕು ಅದನ್ನು ಪೊಲೀಸರು ಮಾಡುತ್ತಾರೆ ಎಂದರು. ಇದೇ ಸಂದರ್ಭದಲ್ಲಿ ಪೊಲೀಸರಿಗೆ ನಿಂದಿಸಿದ ವಿಡಿಯೋ ವೈರಲ್ ಆಗುತ್ತಿರುವ ಬಗ್ಗೆ ಮಾತನಾಡಿದ ಜ್ಞಾನೇಂದ್ರ, ನಾನು ಎಲ್ಲ ಪೊಲೀಸರ ಬಗ್ಗೆ ಮಾತನಾಡಿಲ್ಲ.‌ ಯಾರು ಗೋಕಳ್ಳರ ಜೊತೆ ಶಾಮೀಲಾಗಿದ್ದಾರೆ ಅವರ ಬಗ್ಗೆ ಮಾತ್ರ ಹೇಳಿದ್ದೇನೆ. ಪೊಲೀಸರ ಬಗ್ಗೆ ಗೌರವ ಇದೆ. ನಮ್ಮ ಪೊಲೀಸ್ ವ್ಯವಸ್ಥೆ ಚೆನ್ನಾಗಿದೆ. ನನ್ನ ಕ್ಷೇತ್ರದಲ್ಲಿ ಗೋ ಸಾಗಾಟ ತಪ್ಪಿಸಲು ಹೋದವರ ಮೇಲೆ ದಾಳಿ ಆಗಿದೆ. ಈ ಹಿನ್ನೆಲೆಯಲ್ಲಿ ಕೆಲವರಿಗೆ ಹೇಳಿದ್ದೇನೆ.‌ ಗೋ ಸಾಗಾಟ ವಾಹನವನ್ನು ಅವರ ಮೇಲೆ ಹತ್ತಿಸಿದ್ದಾರೆ.‌ ಅವರು ಬದುಕಿದ್ದೇ ಪವಾಡ ಎಂದರು.


from India & World News in Kannada | VK Polls https://ift.tt/3ojhk5B

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...