10 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ ಸಿಬ್ಬಂದಿ ಸೇವೆ ಕಾಯಂ ಮನವಿ ಪರಿಗಣಿಸಲು ಹೈಕೋರ್ಟ್‌ ಆದೇಶ

ಬೆಂಗಳೂರು: ಹತ್ತು ವರ್ಷಕ್ಕಿಂತ ಅಧಿಕ ಅವಧಿ ಸೇವೆ ಸಲ್ಲಿಸಿದ 13 ಬೋಧಕೇತರ ಸಿಬ್ಬಂದಿಯ ಸೇವೆ ಕಾಯಂಗೊಳಿಸುವ ಮನವಿ ಪರಿಗಣಿಸುವಂತೆ ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ, ಸೇವಾ ಕಾಯಂ ನಿರಾಕರಿಸಿ ವಿವಿ ನೀಡಿದ್ದ ಹಿಂಬರಹವನ್ನು ರದ್ದುಪಡಿಸಿದ ಏಕ ಸದಸ್ಯಪೀಠ ನೀಡಿದ್ದ ಆದೇಶವನ್ನು ವಿಭಾಗೀಯಪೀಠ ಎತ್ತಿ ಹಿಡಿದಿದೆ. ಸಿಬ್ಬಂದಿಯ ಸೇವೆ ಕಾಯಂಗೊಳಿಸುವ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಶ್ವ ವಿದ್ಯಾಲಯ ಸಲ್ಲಿಸಿದ್ದ ಮೇಲ್ಮನವಿಯನ್ನು ಹಿರಿಯ ನ್ಯಾಯಮೂರ್ತಿ ಎಸ್‌.ಸುಜಾತ ನೇತೃತ್ವದ ವಿಭಾಗೀಯ ಪೀಠ ವಜಾಗೊಳಿಸಿದೆ. ‘ಸುಗಮ ಕಾರ್ಯನಿರ್ವಹಣೆಗೆ ಎಸ್‌.ಜಿ. ನಾಗೇಂದ್ರ ಸೇರಿ 13 ಸಿಬ್ಬಂದಿಯನ್ನು ತಾತ್ಕಾಲಿಕ ಆಧಾರದ ಮೇಲೆ ವಿಶ್ವ ವಿದ್ಯಾಲಯವು ನೇಮಿಸಿಕೊಂಡಿತ್ತು. ಆ ಸಿಬ್ಬಂದಿ 10 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಇದೀಗ ಅವರ ಸೇವೆ ಕಾಯಂಗೊಳಿಸಲು ಮಾತ್ರ ನಿರಾಕರಿಸಿರುವುದು ಸಮರ್ಥನೀಯವಲ್ಲ. ಹಾಗಾಗಿ, 13 ಮಂದಿ ಸಿಬ್ಬಂದಿಯ ಪ್ರಕರಣಗಳನ್ನು ಉಮಾದೇವಿ ಪ್ರಕರಣದಲ್ಲಿ ಸಾಂವಿಧಾನಿಕ ಪೀಠ ನೀಡಿರುವ ತೀರ್ಪಿನ್ವಯ ಪರಿಗಣಿಸಬೇಕು’ ಎಂದು ವಿಭಾಗೀಯ ಪೀಠ ತನ್ನ ಆದೇಶದಲ್ಲಿ ಸೂಚಿಸಿದೆ. ಎಸ್‌.ಜಿ. ನಾಗೇಂದ್ರ, ಎಸ್‌.ಆರ್‌. ಧನಂಜಯ ಮತ್ತು ಕೆ.ಕೆ ವಿಮಲಾ ಸೇರಿದಂತೆ ಒಟ್ಟು 13 ಜನರು ವಿಶ್ವ ವಿದ್ಯಾಲಯದಲ್ಲಿ 2004 ರಿಂದ 2009ರ ವರೆಗೆ ಸಹಾಯಕ, ಪ್ರಯೋಗಾಲಯ ಸಹಾಯಕ ಹಾಗೂ ಇನ್ನಿತರ ಹುದ್ದೆಗಳಿಗೆ ತಾತ್ಕಾಲಿಕ ಆಧಾರದ ಮೇಲೆ ನೇಮಕಗೊಂಡಿದ್ದರು. ಅವರು ನಿರ್ವಹಿಸುತ್ತಿದ್ದ ಹುದ್ದೆಗಳ ಕಾಯಂ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ 2015 ರಲ್ಲಿಅರ್ಜಿ ಆಹ್ವಾನಿಸಿತ್ತು.


from India & World News in Kannada | VK Polls https://ift.tt/3nPCisa

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...