ನಗರ ಸ್ಥಳೀಯ ಸಂಸ್ಥೆ ಅಭಿವೃದ್ಧಿಗೆ 3885 ಕೋಟಿ: ಸಚಿವ ಸಂಪುಟದಲ್ಲಿ ಅನುಮೋದನೆ

ಬೆಂಗಳೂರು: ರಾಜ್ಯದ 302 ನಗರ ಸ್ಥಳೀಯ ಸಂಸ್ಥೆಗಳ ಮಹಾತ್ಮ ಗಾಂಧಿ ವಿಕಾಸ ಯೋಜನೆ ಹಾಗೂ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯಡಿ 3885 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆ ಜಾರಿಗೆ ಗುರುವಾರ ನಡೆದ ಒಪ್ಪಿಗೆ ನೀಡಿದೆ. ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವ , ''2022-23ರಿಂದ 2024-25ನೇ ಸಾಲಿಗೆ ಸಂಬಂಧಪಟ್ಟಂತೆ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದೆ,'' ಎಂದರು. ನಗರ ಸ್ಥಳೀಯ ಸಂಸ್ಥೆಗಳಿಗೆ ಒದಗಿಸಿದ ಒಟ್ಟು ಮೊತ್ತದಲ್ಲಿ ಶೇ. 24.10ರಷ್ಟು ಹಣವನ್ನು ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಆ ಸಮುದಾಯದ ಹೆಚ್ಚು ಜನರಿರುವ ಕಡೆ ಮೂಲ ಸೌಕರ್ಯ ಅಭಿವೃದ್ಧಿಗೆ ಬಳಸಲಾಗುತ್ತದೆ. ಶೇ. 5ರಷ್ಟನ್ನು ವಿಶೇಷಚೇತನರ ಕಲ್ಯಾಣಕ್ಕೆ ಮತ್ತು ಶೇ. 7.25ರಷ್ಟನ್ನು ಇತರೆ ಬಡಜನರ ಕಲ್ಯಾಣದ ಜತೆಗೆ ಮೂಲ ಸೌಕರ್ಯಕ್ಕೆ ವಿನಿಯೋಗಿಸಲು ನಿರ್ಧರಿಸಲಾಗಿದೆ. ಶುಶ್ರೂಷಕರ ನೇರ ನೇಮಕಾತಿಆಯುಷ್‌ ಇಲಾಖೆಯಲ್ಲಿ ಖಾಲಿಯಿರುವ 177 ಶುಶ್ರೂಷಕರ ಹುದ್ದೆ ಪೈಕಿ 80 ಹುದ್ದೆಗಳಿಗೆ ನೇರ ನೇಮಕದ ಆದೇಶ ಪತ್ರ ನೀಡಲು ತೀರ್ಮಾನಿಸಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು. ಈಗಾಗಲೇ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೂ ಅವಕಾಶ ಕಲ್ಪಿಸುವ ಸಲುವಾಗಿ ಪ್ರತಿ ವರ್ಷದ ಸೇವೆಗೆ 2 ಅಂಕದಂತೆ 10 ವರ್ಷಕ್ಕೆ 20 ಅಂಕ ನೀಡಲು ಅವಕಾಶ ನೀಡಲಾಗುವುದು. ಒಂದು ವರ್ಷ ಗುತ್ತಿಗೆ ಸೇವೆ ಸಲ್ಲಿಸಿದವರಿಗೆ ಗರಿಷ್ಠ 10 ವರ್ಷ ವಯೋಮಿತಿ ಸಡಿಲಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗಕ್ಕೆ ನೇಮಕಾತಿಗೆ ಸಲ್ಲಿಸಿರುವ ಪ್ರಸ್ತಾವ ಹೊರತುಪಡಿಸಿ ಉಳಿದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು. ಐಟಿ ಉಪಕರಣ ಅಳವಡಿಕೆಗೆ 406.44 ಕೋಟಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಚೇರಿಗಳಿಗೆ ಐಟಿ ಉಪಕರಣಗಳ ಪೂರೈಕೆ, ಅಳವಡಿಕೆ, ಕಾರ್ಯಾಚರಣೆ, ನಿರ್ವಹಣೆಗೆ ಅಗತ್ಯವಿರುವ 406.44 ಕೋಟಿ ರೂ. ನೀಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು. ಅಂಬಿ ಸ್ಮಾರಕಕ್ಕೆ 12 ಕೋಟಿ ರೂ. ಹಿರಿಯ ನಟ ಅಂಬರೀಷ್‌ ಅವರ ಸ್ಮಾರಕವನ್ನು ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ ನಿರ್ಮಿಸಲು ಸರಕಾರ ತೀರ್ಮಾನಿಸಿದೆ. ವರನಟ ಡಾ. ರಾಜ್‌ಕುಮಾರ್‌ ಸ್ಮಾರಕದ ಬಳಿಯೇ ಅಂಬರೀಷ್‌ ಸ್ಮಾರಕ ನಿರ್ಮಾಣವಾಗಲಿದ್ದು, ಅದಕ್ಕಾಗಿ 12 ಕೋಟಿ ರೂ. ಅಂದಾಜು ವೆಚ್ಚಕ್ಕೆ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಸಚಿವರು ಮಾಹಿತಿ ನೀಡಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಆತಂಕದ ನಡುವೆ ಸಭೆ ನಡೆಸಿದ್ದ ಸಚಿವ ಸಂಪುಟ, ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಂಡಿದೆ.


from India & World News in Kannada | VK Polls https://ift.tt/3n39SdC

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...