ಮೇಕೆದಾಟು ಪಾದಯಾತ್ರೆಗೆ ಡಿಕೆಶಿ ತಯಾರಿ; ನಿತ್ಯ 7 ಕಿ.ಮೀ ವಾಕಿಂಗ್, ವ್ಯಾಯಾಮ!

ಬೆಂಗಳೂರು: ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಚರ್ಚೆಗೆ ಗ್ರಾಸವಾಗಿರುವ ಮೇಕೆದಾಟು ಪಾದಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಸಜ್ಜಾಗುತ್ತಿದ್ದಾರೆ. ಒಟ್ಟು ಹತ್ತು ದಿನಗಳ ಕಾಲ ನಡೆಯಲಿರುವ ಪಾದಯಾತ್ರೆಗೆ ಈಗಾಗಲೇ ತಯಾರಿ ಶುರು ಮಾಡಿಕೊಂಡಿದ್ದಾರೆ. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಜನವರಿ 9 ರಿಂದ ಮೇಕೆದಾಟು ನದಿ ಸಮೀಪದಿಂದಲೇ ಪಾದಯಾತ್ರೆ ಆರಂಭಗೊಳ್ಳಲಿದೆ. ಪಾದಯಾತ್ರೆಗೆ ಡಿಕೆ ಶಿವಕುಮಾರ್ ಈಗಾಗಲೇ ತಯಾರಿ ಶುರುಮಾಡಿಕೊಳ್ಳುತ್ತಿದ್ದಾರೆ. ನಿತ್ಯ ಬೆಂಗಳೂರಿನ ಸದಾಶಿವನಗರದ ಸ್ಯಾಂಕಿ ಕೆರೆ ದಂಡೆ ಮೇಲೆ ನಡಿಗೆಯ ತಾಲೀಮು ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೆ ನಿತ್ಯ ವ್ಯಾಯಾಮವನ್ನೂ ಮಾಡುತ್ತಿದ್ದಾರೆ. ಮೇಕೆದಾಟುವಿನಿಂದ ಬೆಂಗಳೂರು ನಗರಕ್ಕೆ ಸುಮಾರು 100 ಕಿ. ಮೀಟರ್‌ಗೂ ಹೆಚ್ಚು ಪಾದಯಾತ್ರೆ ಮಾಡಬೇಕಿದೆ. ಕಾರ್ಯಕರ್ತರಿಗೆ ಹುಮ್ಮಸ್ಸು ನೀಡುವ ನಿಟ್ಟಿನಲ್ಲಿ ಪ್ರತಿನಿತ್ಯ ನಡೆದುಕೊಂಡು ಬರಲು ಡಿಕೆ ಶಿವಕುಮಾರ್ ನಿರ್ಧಾರ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಅವರು ವ್ಯಾಯಾಮ, ವಾಕಿಂಗ್ ಮೂಲಕ ತಯಾರಿ ನಡೆಸುತ್ತಿದ್ದಾರೆ. ಇನ್ನು ಮೇಕೆದಾಟು ಯೋಜನೆ ಜಾರಿ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಇದೊಂದು ರಾಜಕೀಯ ಗಿಮಿಕ್ ಎಂದು ಬಿಜೆಪಿ ಆರೋಪ ಮಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಆರ್. ಅಶೋಕ್, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಬಿಜೆಪಿ ಪ್ರಮುಖರು ಈ ಪಾದಯಾತ್ರೆಯ ಬಗ್ಗೆ ಕಿಡಿಕಾರಿದ್ದಾರೆ. ಅತೀ ಶೀಘ್ರದಲ್ಲೇ ಮೇಕೆದಾಟು ಯೋಜನೆ ಕುರಿತಾಗಿ ಕಾಂಗ್ರೆಸ್ ಪಕ್ಷದ ಹೊಣೆಗೇಡಿತನವನ್ನು ಬಯಲು ಮಾಡುವುದಾಗಿ ಸಚಿವ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದ್ದಾರೆ. ಒಟ್ಟಿನಲ್ಲಿ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ.


from India & World News in Kannada | VK Polls https://ift.tt/3zoFQpJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...