ಮುಂಬಯಿ: ಯಾರಿಗಾದರೂ ದಾನವಾಗಿ ನೀಡಲು ಹೆಣ್ಣುಮಗಳು ವಸ್ತುವಲ್ಲ ಎಂದು ಮುಂಬಯಿ ಹೈಕೋರ್ಟ್‌ನ ಔರಂಗಾಬಾದ್ ವಿಭಾಗೀಯ ಪೀಠವು ಸ್ಪಷ್ಟವಾಗಿ ಹೇಳಿದೆ. ಸ್ವಯಂಘೋಷಿತ ದೇವಮಾನವ ಎನಿಸಿರುವ ಶಂಕೇಶ್ವರ್ ಢಾಕ್ನೆಗೆ ಆತನ ಭಕ್ತ ಸೊಪನ್ ಢಾಂಕೆ ಎಂಬಾತ ತನ್ನ 17 ವರ್ಷದ ಮಗಳನ್ನು ದಾನವಾಗಿ ಒಪ್ಪಿಸಿದ್ದ. ಈತನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ವಿಚಾರಣೆ ವೇಳೆ ನ್ಯಾ. ವಿಭಾ ಕಂಕಣ್‌ವಾಡಿ ಅವರು ಆರೋಪಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಲ್ನಾ ಜಿಲ್ಲೆಯ ಬದ್ನಾಪುರದ ಮಂದಿರವೊಂದರಲ್ಲಿ ವಾಸವಿದ್ದ ದೇವಮಾನವನ ಜತೆಗೆ ತಂದೆ- ಮಗಳು ವಾಸವಿದ್ದರು. 2021ರ ಆಗಸ್ಟ್‌ನಲ್ಲಿ ಅಪ್ರಾಪ್ತ ಬಾಲಕಿಯು ದೇವಮಾನವ ಹಾಗೂ ತಂದೆ ಇಬ್ಬರೂ ಸೇರಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಳು. ಆ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದಾರೆ. ಈ ವೇಳೆ, 2018ರಲ್ಲಿ ಮಗಳನ್ನು ದೇವಮಾನವನಿಗೆ ದಾನ ನೀಡಿದ ಸಂಬಂಧ 100 ರೂ. ಮುಖಬೆಲೆಯ ಛಾಪಾ ಕಾಗದದ ದಾಖಲೆಯೊಂದನ್ನು ಆರೋಪಿಗಳು ಕೋರ್ಟ್‌ಗೆ ಸಲ್ಲಿಸಿದ್ದಾರೆ. ಹೈಕೋರ್ಟ್ ರಿಜಿಸ್ಟ್ರಾರ್ ವಿರುದ್ಧವೇ ನ್ಯಾಯಾಂಗ ನಿಂದನೆ ದಾವೆ ಹೂಡಿದ್ದವಗೆ 11 ಲಕ್ಷ ದಂಡಬೆಂಗಳೂರು: ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಟಿ.ಜಿ ಶಿವಶಂಕರೇಗೌಡ ವಿರುದ್ಧ ಸಿವಿಲ್ ನ್ಯಾಯಾಂಗ ನಿಂದನೆ ದಾವೆ ಹೂಡಿದ್ದ ಉಡುಪಿ ಜಿಲ್ಲೆ ಕಾರ್ಕಳದ ಜಿತೇಂದ್ರ ಕುಮಾರ್ ರಾಜನ್ ಎಂಬ ವ್ಯಕ್ತಿಗೆ ಹೈಕೋರ್ಟ್ 11 ಲಕ್ಷ ರೂ. ದಂಡ ವಿಧಿಸಿದೆ. ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾ. ಎಂ.ಜಿ. ಉಮಾ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ಈ ಆದೇಶ ನೀಡಿದೆ. ಜಿತೇಂದ್ರ ಕುಮಾರ್ ರಾಜನ್ ರಿಜಿಸ್ಟ್ರಾರ್ ವಿರುದ್ಧ 11 ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿ ನ್ಯಾಯಾಂಗದ ಅಮೂಲ್ಯ ಸಮಯ ಹಾಳು ಮಾಡಿದ್ದಾರೆ. ಹಾಗಾಗಿ ಒಂದೊಂದು ಅರ್ಜಿಗೆ ತಲಾ 1 ಲಕ್ಷ ರೂ.ನಂತೆ ಒಟ್ಟು 11 ಲಕ್ಷ ರೂ.ದಂಡ ಪಾವತಿಸಬೇಕು ಎಂದು ನ್ಯಾಧಿಯಪೀಠ ಆದೇಶಿಸಿದೆ. ಅಲ್ಲದೆ, ದಂಡದ ಮೊತ್ತವನ್ನು 8 ವಾರಗಳಲ್ಲಿ ವಕೀಲರ ಪರಿಷತ್ತಿಗೆ ಪಾವತಿಸಬೇಕು. ಒಂದು ವೇಳೆ ಪಾವತಿಸದಿದ್ದರೆ ಜಿಲ್ಲಾಧಿಕಾರಿ ದಂಡ ವಸೂಲಿಗೆ ಕ್ರಮ ಕೈಗೊಳ್ಳಬೇಕು ಹಾಗೂ ದಂಡದ ಮೊತ್ತ ಪಾವತಿಯಾಗದಿದ್ದರೆ ವಕೀಲರ ಪರಿಷತ್ತು ಅರ್ಜಿದಾರರ ವಿರುದ್ಧ ನ್ಯಾಯಾಂಗ ನಿಂದನೆ ದಾವೆ ಹೂಡಬಹುದು ಎಂದು ನ್ಯಾಯಪೀಠ ಆದೇಶಿಸಿದೆ. ‘ಅನಗತ್ಯ ಸಿವಿಲ್ ನ್ಯಾಯಾಂಗ ನಿಂದನೆ ದಾವೆ ಹೂಡಿ ಕೋರ್ಟ್‌ನ ಅಮೂಲ್ಯ ಸಮಯ ಹಾಳು ಮಾಡಿದ್ದಲ್ಲದೆ, ರಿಜಿಸ್ಟ್ರಾರ್ ಜನರಲ್ ವಿರುದ್ಧ ದಾವೆ ಹೂಡುವ ಮೂಲಕ ನ್ಯಾಯಾಂಗದ ಮೇಲೆ ಸವಾರಿ ಮಾಡಿ ನ್ಯಾಯಾಂಗದ ಅಧಿಕಾರಿಗಳಿಗೆ ಬೆದರಿಕೆ ಹಾಕುವಂತೆ ನಡೆದುಕೊಂಡಿರುವುದು ನ್ಯಾಯಾಂಗವನ್ನು ಅಣಕ ಮಾಡಿದಂತೆ ಎಂದು ಹೇಳಿರುವ ನ್ಯಾಯಪೀಠ, ಅರ್ಜಿದಾರರ ವಿರುದ್ಧ ಸ್ವಯಂಪ್ರೇರಿತ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ರಿಜಿಸ್ಟ್ರಾರ್ ಜನರಲ್‌ಗೆ ನಿರ್ದೇಶಿಸಿದೆ.
from India & World News in Kannada | VK Polls https://bit.ly/3KVchRW