ಹಿಜಾಬ್‌ ಬೆನ್ನಲ್ಲೇ ನಮಾಜ್ ವಿವಾದ; ಸರ್ಕಾರಿ ಶಾಲೆಯಲ್ಲಿ ನಮಾಜ್‌ಗೆ ಅವಕಾಶ ಕಲ್ಪಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರೋಧ

ಕೋಲಾರ: ಸರ್ಕಾರಿ ಶಾಲೆಯಲ್ಲಿ ಮುಸ್ಲಿಂ ಮಕ್ಕಳಿಗೆ ನಮಾಜ್ ಮಾಡಲು ಅವಕಾಶ ಕಲ್ಪಿಸಿದ ಶಾಲೆಯ ಮುಖ್ಯ ಶಿಕ್ಷಕರ ನಡೆ ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಶಾಲೆಗೆ ತೆರಳಿದ ಹಿಂದೂ ಸಂಘಟನೆಗಳು ವಿವಾದ ಸೃಷ್ಟಿಸಿರುವ ಘಟನೆ ಕೋಲಾರದ ಮುಳಬಾಗಿಲುನಲ್ಲಿ ನಡೆದಿದೆ. ಮುಳಬಾಗಲು ನಗರದ ಸೋಮೇಶ್ವರ ಪಾಳ್ಯದ ಬಳೆಚಂಗಪ್ಪ ಸರಕಾರಿ ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತೀ ಶುಕ್ರವಾರ ಪ್ರತ್ಯೇಕ ಕೊಠಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ನಮಾಜ್‌ಗೆ ಅವಕಾಶ ಕಲ್ಪಿಸಿದ್ದು, ಇದರಿಂದ ಸಿಟ್ಟುಗೊಂಡ ಹಿಂದೂಪರ ಸಂಘಟನೆಗಳು, ಹಳೆಯ ವಿದ್ಯಾರ್ಥಿಗಳು ಶನಿವಾರ ನೂರಾರು ಸಂಖ್ಯೆಯಲ್ಲಿ ಶಾಲೆಯ ಮುಂದೆ ಜಮಾಯಿಸಿದ್ದರು. ಶಾಲೆಯಲ್ಲಿ ಮಕ್ಕಳಿಗೆ ನಮಾಜ್‌ ನೀಡಲು ಅವಕಾಶ ಮಾಡಿಕೊಟ್ಟ ಶಾಲೆಯ ಮುಖ್ಯ ಶಿಕ್ಷಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂಪರ ಸಂಘಟನೆಗಳ ಒತ್ತಾಯಕ್ಕೆ ಮಣಿದು ಸೋಮವಾರ ಪ್ರಾಂಶುಪಾಲರ ತಲೆದಂಡವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಶಾಲೆಯಲ್ಲಿ ಮುಸ್ಲಿಂ ಸಮುದಾಯದ ಮಕ್ಕಳಿಗೆ ನಮಾಜ್‌ ಮಾಡಲು ಅವಕಾಶ ನೀಡಿದ ಘಟನೆ ತೀವ್ರ ಚರ್ಚೆಗೆ ಕಾರಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಶನಿವಾರ ನೂರಾರು ಮಂದಿ ಹಳೆಯ ವಿದ್ಯಾರ್ಥಿಗಳು, ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಸೇರಿದ್ದರು. ಈ ವೇಳೆ ಪ್ರಾಂಶುಪಾಲರನ್ನು ವಿದ್ಯಾರ್ಥಿಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಪರಿಸ್ಥಿತಿ ಕೈ ಮೀರುವುದನ್ನು ಗಮನಿಸಿದ ಪೊಲೀಸರು ಕೂಡಲೇ ವಿದ್ಯಾರ್ಥಿಗಳ ಮನವೊಲಿಸಿ ವಾಪಸ್‌ ಕಳುಹಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ತಹಸೀಲ್ದಾರ್‌ ಶೋಭಿತಾ ಅವರು ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದ್ದರು. ಆದರೆ, ಶಾಲೆಗೆ ಖುದ್ದು ಭೇಟಿ ನೀಡದ ಅವರು, ಶಿಕ್ಷಣ ಸಂಯೋಜಕರು ಹಾಗೂ ಇಬ್ಬರು ಶಿಕ್ಷಕರಿಗೆ ಶಾಲೆಗೆ ತೆರಳಿ ವರದಿ ನೀಡುವಂತೆ ಸೂಚಿಸಿದ್ದರು. ಇಂತಹ ಸೂಕ್ಷ್ಮ ವಿಚಾರಗಳ ಪರಿಶೀಲನೆಗೆ ಬಿಇಒ ಬರದೆ ಕೆಳಹಂತದ ಅಧಿಕಾರಿಗಳನ್ನು ಕಳುಹಿಸಿದರ ಬಗ್ಗೆಯೂ ಹಳೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಬಿಇಒ ಸೂಚನೆ ಮೇರೆಗೆ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಂಯೋಜಕ ಅಂಜಿತ್‌ ಕುಮಾರ್‌ ನೇತೃತ್ವದ ತಂಡವು ಶಾಲೆಯ ಮುಖ್ಯ ಶಿಕ್ಷರು, ಸಹ ಶಿಕ್ಷರು ಹಾಗೂ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದಿದ್ದು, ಬಿಇಒ ಅವರಿಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ.


from India & World News in Kannada | VK Polls https://ift.tt/3qSg5LZ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...