ಸೋಂಕಿತರಿಗೆ ಕೇರ್‌ ಸೆಂಟರ್‌; ಮೈಸೂರು ಜಿಲ್ಲೆಯಲ್ಲಿ ದಿಢೀರ್ ಸೋಂಕು ಏರಿಕೆ ಹಿನ್ನೆಲೆ ಜಿಲ್ಲಾಡಳಿತ ಕ್ರಮ!

: ಸಹಜ ಸ್ಥಿತಿಯಲ್ಲಿದ್ದ ಜಿಲ್ಲೆಯಲ್ಲಿ ಒಂದೇ ದಿನ ಸೋಂಕು ನಾಲ್ಕುಪಟ್ಟು ಹೆಚ್ಚಳವಾಗಿರುವುದು ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪರಿಸ್ಥಿತಿ ಎದುರಿಸಲು ತುರ್ತು ಕ್ರಮ ತೆಗೆದುಕೊಂಡಿದೆ. ಸರಕಾರಿ ವ್ಯವಸ್ಥೆಯಲ್ಲಿರುವ ಕೋವಿಡ್‌ ಕೇರ್‌ ಸೆಂಟರ್‌ಗಳ ಆರಂಭಕ್ಕೆ ತಯಾರಿ ನಡೆಸಲಾಗಿದ್ದು, ಜಿಲ್ಲಾಆರೋಗ್ಯ ಇಲಾಖೆ ಅಧಿಕಾರಿಗಳು ತುರ್ತು ಸಭೆ ನಡೆಸಿ ಮಾಹಿತಿ ಪಡೆದಿದೆ. ಗುರುವಾರ ಕೇವಲ 65 ಜನರಲ್ಲಿ ಹೊಸ ಸೋಂಕು ಕಂಡು ಬಂದರೆ ಶುಕ್ರವಾರ ಒಂದೇ ದಿನ 219 ಪ್ರಕರಣಗಳು ಪತ್ತೆಯಾದವು. ಇದರಿಂದಾಗಿ ಜಿಲ್ಲಾಡಳಿತ ತುರ್ತು ಕ್ರಮಗಳಿಗೆ ಮುಂದಾಗಿದೆ. ಎರಡನೇ ಅಲೆಯ ಬಳಿಕ ಮೊದಲ ಬಾರಿಗೆ ಜಿಲ್ಲೆಯಲ್ಲಿ ಹೆಚ್ಚು ಸೋಂಕು ಇರುವ ಕೋವಿಡ್‌ ಕ್ಲಸ್ಟರ್‌ಗಳನ್ನು ಗುರುತಿಸಲಾಗಿದೆ. ಅಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದು, ಸೋಂಕಿತರ ಸಂಪರ್ಕಿತರ ಮೇಲೆ ನಿಗಾ ಇರಿಸಲಾಗಿದೆ. ಬಿಸಿಎಂ ಹಾಸ್ಟೆಲ್‌, ಚಾಮನಹಳ್ಳಿ, ತಿ.ನರಸೀಪುರದಲ್ಲಿ ಇದೀಗ ಕ್ಲಸ್ಟರ್‌ಗಳಿವೆ. ಮಂಡಕಳ್ಳಿ ಶೀಘ್ರ ಲಭ್ಯಎರಡನೇ ಅಲೆ ಇಳಿಮುಖವಾದ ನಂತರ ಮುಚ್ಚಲ್ಪಟ್ಟಿದ್ದ ಮಂಡಕಳ್ಳಿಯಲ್ಲಿರುವ ರಾಜ್ಯ ಮುಕ್ತ ವಿವಿ ಕಟ್ಟಡವನ್ನು ಮತ್ತೆ ಕೋವಿಡ್‌ ಕೇರ್‌ ಸೆಂಟರ್‌ ಆಗಿ ಪರಿವರ್ತಿಸಲಾಗುತ್ತಿದೆ. ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‌ ಅವರು ಮಂಡಕಳ್ಳಿ ತೆರಳಿ ಕಟ್ಟಡವನ್ನು ಪರಿಶೀಲಿಸಿದರು. ಸದ್ಯಕ್ಕೆ ಈ ಕೇಂದ್ರದಲ್ಲಿ 200 ಹಾಸಿಗೆಗಳನ್ನು ಸಿದ್ಧಪಡಿಸುವಂತೆ ಸೂಚನೆ ನೀಡಿದ್ದಾರೆ. ಇದೇ ರೀತಿ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದರೆ ಇನ್ನಿತರ ಕೋವಿಡ್‌ ಕೇರ್‌ ಕೇಂದ್ರಗಳನ್ನೂ ತೆರೆಯಲು ಸಿದ್ಧತೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ. ಕೆ.ಆರ್‌.ಆಸ್ಪತ್ರೆ, ಜಿಲ್ಲಾಸ್ಪತ್ರೆ, ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಕೇರ್‌, ತುಳಸಿದಾಸ್‌ ಆಸ್ಪತ್ರೆ ತೆರೆಯಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಶೇ.50 ಖಾಸಗಿ ಬೆಡ್‌ ಒಂದೆಡೆ ಸರಕಾರಿ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಸಿದ್ಧಪಡಿಸುತ್ತಿದ್ದರೆ ಖಾಸಗಿ ಆಸ್ಪತ್ರೆಗಳಲ್ಲಿ ಜಿಲ್ಲಾಸ್ಪತ್ರೆ ಸೂಚಿಸುವ ರೋಗಿಗಳಿಗೆ ಶೇ.50 ರಷ್ಟು ಹಾಸಿಗೆ ಗಳನ್ನು ಕಾಯ್ದಿರಿಸುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ 250 ಹಾಸಿಗೆ ಸಿದ್ಧವಾಗಿದೆ. ಇದರಲ್ಲಿ 100 ಹಾಸಿಗೆಗೆ ಆಮ್ಲಜನಕ ಪೂರೈಕೆ ವ್ಯವಸ್ಥೆ ಮಾಡಲಾಗಿದೆ. ಉಳಿದಂತೆ ಒಟ್ಟು 5,350 ಹಾಸಿಗೆಗಳು ಸಿದ್ಧವಾಗಿವೆ. ಉಳಿದಂತೆ ಇನ್ನೂ ಮೂರು ಸಾವಿರ ಹಾಸಿಗೆ ಇನ್ನೊಂದೆರಡು ದಿನಗಳಲ್ಲಿ ಬಳಕೆಗೆ ಲಭ್ಯವಾಗಲಿವೆ ಎಂದು ಡಿಎಚ್‌ಒ ಡಾ. ಕೆ.ಎಚ್‌.ಪ್ರಸಾದ್‌ ತಿಳಿಸಿದ್ದಾರೆ.


from India & World News in Kannada | VK Polls https://ift.tt/3JQVu1X

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...