ಭಿಕ್ಷುಕರ ಕಾಲೊನಿಯಲ್ಲಿರುವವರ ಮಾನಸಿಕ ಸ್ಥಿತಿಗತಿ ಪರಿಶೀಲಿಸಿ ವರದಿ ಸಲ್ಲಿಸಲು ಹೈಕೋರ್ಟ್‌ ಆದೇಶ

ಬೆಂಗಳೂರು: ಭಿಕ್ಷುಕರ ಕಾಲೊನಿಯಲ್ಲಿ ಸದ್ಯ ವಾಸಿಸುತ್ತಿರುವವರ ಪರಿಶೀಲಿಸಿ ಒಂದು ತಿಂಗಳಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ. 2010ರಲ್ಲಿ ಭಿಕ್ಷುಕರ ಕಾಲೊನಿಯಲ್ಲಿ ಅನಾರೋಗ್ಯದಿಂದ ನಡೆದ ಭಿಕ್ಷುಕರ ಸರಣಿ ಸಾವು ಸಂದರ್ಭದಲ್ಲಿ ಹೈಕೋರ್ಟ್‌ ಕಾನೂನು ಸೇವಾ ಸಮಿತಿ ಸಲ್ಲಿಸಿದ್ದ ಪಿಐಎಲ್‌, ಸಿಜೆ ರಿತುರಾಜ್‌ ಅವಸ್ಥಿ ಮತ್ತು ನ್ಯಾ. ಸೂರಜ್‌ ಗೋವಿಂದರಾಜ್‌ ಅವರಿದ್ದ ವಿಭಾಗೀಯ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂತು. ವಾದ ಆಲಿಸಿದ ಬಳಿಕ ನ್ಯಾಯಪೀಠ, ‘ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿರುವವರ ಪೈಕಿ ಶೇ.30 ರಷ್ಟು ಮಂದಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆಂದು ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಹೇಳಿದೆ. ಹಾಗಾಗಿ, ಸದ್ಯ ಕಾಲೊನಿಯಲ್ಲಿರುವ ಭಿಕ್ಷುಕರ ಮಾನಸಿಕ ಸ್ಥಿತಿಗತಿ ಪರಿಶೀಲಿಸಬೇಕು ಮತ್ತು ಅಲ್ಲಿರುವವರ ಮಾನಸಿಕ ಸ್ಥಿತಿಗತಿ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಂಡು ಒಂದು ತಿಂಗಳಲ್ಲಿ ವರದಿಯನ್ನು ಕಾನೂನು ಸೇವಾ ಪ್ರಾಧಿಕಾರಕ್ಕೆ ಸಲ್ಲಿಸಬೇಕು’ ಎಂದು ಆದೇಶ ನೀಡಿತು. ಅಲ್ಲದೆ, 2010 ರಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆನಂತರ ಸಾಕಷ್ಟು ಸುಧಾರಣೆಗಳಾಗಿವೆ. ಹಾಗಾಗಿ, ಸದ್ಯ ಅರ್ಜಿ ಮುಂದುವರಿಸುವ ಅಗತ್ಯವಿಲ್ಲ. ಆದರೆ ಸದ್ಯ ಭಿಕ್ಷುಕರ ಕಾಲೊನಿಯಲ್ಲಿರುವವರ ಮಾನಸಿಕ ಸ್ಥಿತಿಗತಿ ಬಗ್ಗೆ ಪರಿಶೀಲಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದ ನ್ಯಾಯಪೀಠ, ಅರ್ಜಿ ವಿಲೇವಾರಿ ಮಾಡಿತು. ಕಾನೂನು ಸೇವಾ ಪ್ರಾಧಿಕಾರದ ಪರ ವಾದ ಮಂಡಿಸಿದ ವಕೀಲೆ ಬಿ.ವಿ.ವಿದ್ಯುಲ್ಲತಾ, ‘2010ರಲ್ಲಿ ಭಿಕ್ಷುಕರ ಕಾಲೊನಿಯಲ್ಲಿ ಅನಾರೋಗ್ಯದಿಂದ ಭಿಕ್ಷುಕರ ಸರಣಿ ಸಾವು ಸಂಭವಿಸಿತ್ತು. ಆಗ ಕಾನೂನು ಸೇವಾ ಸಮಿತಿ ಈ ಅರ್ಜಿ ದಾಖಲಿಸಿ, ಅಲ್ಲಿಗೆ ಭೇಟಿ ನೀಡಿ, ಅಲ್ಲಿನ ನ್ಯೂನತೆಗಳನ್ನು ಪರಿಶೀಲಿಸಿ ಹಲವು ಶಿಫಾರಸುಗಳನ್ನು ಮಾಡಿತ್ತು. ಅಲ್ಲಿ ಶೇ.30ರಷ್ಟು ಮಂದಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಆ ಹಿನ್ನೆಲೆಯಲ್ಲಿ ಕೋರ್ಟ್‌ ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರವನ್ನು ಪ್ರತಿವಾದಿಯನ್ನಾಗಿ ಮಾಡಿ ಹಲವು ನಿರ್ದೇಶನ ನೀಡಿತ್ತು’ ಎಂದು ವಿವರಿಸಿದರು. ‘ಅಲ್ಲದೆ, ಸದ್ಯದ ಅಲ್ಲಿನ ಭಿಕ್ಷುಕರ ಮಾನಸಿಕ ಸ್ಥಿತಿ ಗತಿ ಪರಿಶೀಲಿಸಬೇಕಾಗಿದೆ ಮತ್ತು ಮಾನಸಿಕ ಆರೋಗ್ಯ ಕಾಯಿದೆ ಜಾರಿಗೆ ಕೈಗೊಂಡಿರುವ ಕ್ರಮಗಳನ್ನು ಪರಾಮರ್ಶೆ ನಡೆಸುವ ಅಗತ್ಯವಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.


from India & World News in Kannada | VK Polls https://ift.tt/33bzVIM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...