ಮುಂಬೈ: ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಫಿಟ್ನೆಸ್ ಟೆಸ್ಟ್ ಪಾಸ್ ಮಾಡಿರುವ , ಮುಂಬರುವ ವಿರುದ್ಧದ ಏಕದಿನ ಕ್ರಿಕೆಟ್ ಮತ್ತು ಟಿ20 ಕ್ರಿಕೆಟ್ ಸರಣಿಗಳಲ್ಲಿ ಭಾರತ ತಂಡವನ್ನು ಮುನ್ನಡೆಸಲು ಸಂಪೂರ್ಣ ಸಜ್ಜಾಗಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ () ಆಯ್ಕೆ ಸಮಿತಿಯು ಬುಧವಾರ ವೆಸ್ಟ್ ಇಂಡೀಸ್ ವಿರುದ್ಧದ ಒಡಿಐ ಮತ್ತು ಟಿ20 ಸರಣಿಗಳಿಗೆ ತಂಡಗಳನ್ನು ಪ್ರಕಟ ಮಾಡಿದೆ. ಕೆಲ ಅನುಭವಿಗಳನ್ನು ಕೈಬಿಟ್ಟು ಯುವ ಆಟಗಾರರಿಗೆ ಮಣೆ ಹಾಕಿದೆ. ತೊಡೆಯ ಗಾಯದ ಸಮಸ್ಯೆಯಿಂದ ರೋಹಿತ್ ಶರ್ಮಾ ಸಂಪೂರ್ಣ ಚೇತರಿಸಿ ತಂಡಕ್ಕೆ ಹಿಂದಿರುಗಿದ್ದಾರೆ. ಈ ನಡುವೆ ಅನುಭವಿ ವೇಗಿಗಳಾದ ಜಸ್‌ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿಗೆ ವಿಶ್ರಾಂತಿ ಕೊಡಲಾಗಿದೆ. ಕೆಎಲ್ ರಾಹುಲ್ ಎರಡೂ ಮಾದರಿಯ ಕ್ರಿಕೆಟ್‌ನಲ್ಲಿ ಭಾರತ ತಂಡದ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಆದರೆ, 2ನೇ ಒಡಿಐ ವೇಳೆ ತಂಡ ಸೇರಲಿದ್ದಾರೆ. ಇದೇ ವೇಳೆ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿರಾಶೆ ಮೂಡಿಸಿದ ಅನುಭವಿ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಗಾಯದಿಂದ ಚೇತರಿಸದ ರವೀಂದ್ರ ಜಡೇಜಾ ಈ ಸರಣಿಗಳಿಗೆ ಅಲಭ್ಯರಾಗಿದ್ದಾರೆ. ಅಕ್ಷರ್ ಪಟೇಲ್ ಕೇವಲ ಒಡಿಐ ಸರಣಿಗೆ ಆಯ್ಕೆಯಾಗಿದ್ದಾರೆ. ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಒಡಿಐ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಅವರನ್ನು ಏಕದಿನ ಕ್ರಿಕೆಟ್ ತಂಡದಿಂದ ಕೈಬಿಟ್ಟು ಕೇವಲ ಟಿ20 ಕ್ರಿಕೆಟ್ ತಂಡಕ್ಕೆ ಮಾತ್ರವೇ ಸೇರಿಸಲಾಗಿದೆ. ಭಾರತ ಕಿರಿಯರ ತಂಡ ಮತ್ತು ಐಪಿಎಲ್‌ನ ಪಂಜಾಬ್ ಕಿಂಗ್ಸ್ ತಂಡದ ಪರ ಮಿಂಚಿರುವ ಯುವ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಅವರಿಗೆ ಇದೇ ಮೊದಲ ಬಾರಿ ಭಾರತ ತಂಡದಲ್ಲಿ ಸ್ಥಾನ ನೀಡಲಾಗಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ತಂಡ ಒಡಿಐ ಸರಣಿಯಲ್ಲಿ 0-3 ಅಂತರದ ವೈಟ್‌ವಾಶ್ ಸೋಲಿನ ಮುಖಭಂಗಕ್ಕೊಳಗಾಗಿತ್ತು. ಈಗ ತಾಯ್ನಾಡಿನಲ್ಲಿ ವಿಂಡೀಸ್ ಎದುರು ತಲಾ ಮೂರು ಪಂದ್ಯಗಳ ಒಡಿಐ ಮತ್ತು ಟಿ20 ಸರಣಿಗಳಲ್ಲಿ ಪೈಪೋಟಿ ನಡೆಸಲಿದೆ. ವಿಂಡೀಸ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ ಒಡಿಐ ತಂಡ ಹೀಗಿದೆರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್‌ಕೀಪರ್), ದೀಪಕ್ ಚಹರ್, ಶಾರ್ದುಲ್ ಠಾಕೂರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿಧ್ ಕೃಷ್ಣ, ಅವೇಶ್ ಖಾನ್. ಟಿ20 ಕ್ರಿಕೆಟ್ ತಂಡ ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್‌ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹರ್, ಶಾರ್ದುಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಪರಿಷ್ಕೃತ ವೇಳಾಪಟ್ಟಿಮೊದಲ ಒಡಿಐ, ಫೆಬ್ರವರಿ 6 (ಅಹ್ಮದಾಬಾದ್) ಎರಡನೇ ಒಡಿಐ, ಫೆಬ್ರವರಿ 9 (ಅಹ್ಮದಾಬಾದ್) ಮೂರನೇ ಒಡಿಐ, ಫೆಬ್ರವರಿ 11 (ಅಹ್ಮದಾಬಾದ್) ಮೊದಲ ಟಿ20, ಫೆಬ್ರವರಿ 16 (ಕೋಲ್ಕತಾ) ಎರಡನೇ ಟಿ20, ಫೆಬ್ರವರಿ 18 (ಕೋಲ್ಕತಾ) ಮೂರನೇ ಟಿ20, ಫೆಬ್ರವರಿ 20 (ಕೋಲ್ಕತಾ)
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3IF4c1X