ಮೇಕೆದಾಟು ಪಾದಯಾತ್ರೆ ವಿಫಲಗೊಳಿಸಲು ಸರ್ಕಾರ ಪ್ರಯತ್ನ; ಮಲ್ಲಿಕಾರ್ಜುನ ಖರ್ಗೆ ಆರೋಪ

ರಾಮನಗರ: ಮೇಕೆದಾಟು ಪಾದಯಾತ್ರೆಯನ್ನು ವಿಫಲಗೊಳಿಸಲು ರಾಜ್ಯ ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರಾದ ಆರೋಪ ಮಾಡಿದರು. ಮೇಕೆದಾಟು ಸಂಗಮದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಹೋರಾಟಕ್ಕೆ ಕರ್ನಾಟಕ ಜನರ ಸಂಪೂರ್ಣ ಬೆಂಬಲ ಇದೆ ಎಂದರು. ಈ ಯೋಜನೆಯಿಂದ ಬೆಂಗಳೂರಿಗೆ ಸಹಾಯ ಆಗಲಿದೆ. ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಡಿಪಿಆರ್‌ ಪ್ರಾರಂಭ ಮಾಡಲಾಗಿತ್ತು. ಅದಕ್ಕೆ ಒಂದು ಸ್ವರೂಪ ಕೊಟ್ಟಿದ್ದರು. ನಂತರದಲ್ಲಿ ಡಿಕೆಶಿ ಹೆಚ್ಚಿನ ಆಸಕ್ತಿ ವಹಿಸಿ ಇದಕ್ಕೆ ಚಾಲನೆ ಕೊಡುವ ಪ್ರಯತ್ನ ಮಾಡಿದ್ದರು ಎಂದರು. ಈ ಪಾದಯಾತ್ರೆಯಿಂದ ಉದ್ದೇಶ ಈಡೇರುವ ವರೆಗೂ ಹೋರಾಟ ಇರಬೇಕಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಂಸದ ಡಿಕೆ ಸುರೇಶ್ ಗೆ ಈ ನಿಟ್ಟಿನಲ್ಲಿ ಹಠ ಇದೆ. ಈ ಕಾರಣದಿಂದ ಈ ಕೆಲಸ ಸಾಧ್ಯವಾಗುತ್ತದೆ ಎಂದರು. ಪಾದಯಾತ್ರೆ ನಡಿಗೆಯಲ್ಲಿ ಆರೋಗ್ಯ ಚೆನ್ನಾಗಿರಲಿ, ಕೋವಿಡ್ ಹಿನ್ನೆಲೆಯಲ್ಲಿ ಎಚ್ಚರಿಕೆಯನ್ನು ವಹಿಸಿ, ನಮ್ಮ ವಿರುದ್ಧ ಯಾರೂ ಹೇಳಿಕೊಳ್ಳುವಂತದದ್ದು ಆಗಬಾರದು. ಇದನ್ನು ವಿಫಲಗೊಳಿಸಲು ಸರ್ಕಾರ ಎಲ್ಲಾ ಪ್ರಯತ್ನ ಮಾಡುತ್ತದೆ. ನೀರಿಗಾಗಿ ಹೋರಾಟ ಮಾಡುವ ಪ್ರಯತ್ನ ಕಾಂಗ್ರೆಸ್ ಮಾಡುತ್ತಿದೆ. ಅದರ ಕ್ರೆಡಿಟ್ ಕಾಂಗ್ರೆಸ್ಗೆ ಸಿಗುತ್ತದೆ ಎಂದು ಇದನ್ನು ವಿಫಲಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು. ಪಾದಯಾತ್ರೆಯನ್ನು ತಡೆಯುವ ಪ್ರಯತ್ನ ಬಿಜೆಪಿ ಹಾಗೂ ಜೆಡಿಎಸ್ ಮಾತ್ರವಲ್ಲ ಬೇರೆ ಬೇರೆಯವರು ಕಾಲೆಳೆಯುವತಹ ಪ್ರಯತ್ನ ಮಾಡುತ್ತಾರೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.


from India & World News in Kannada | VK Polls https://ift.tt/3f1FSuq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...