ಕೋವಿಡ್ ಏರಿಕೆ: ಮುಖ್ಯಮಂತ್ರಿಗಳ ಜತೆ ಗುರುವಾರ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ: ತಳಿ ಕಾರಣದಿಂದ ಹೆಚ್ಚುತ್ತಿರುವ ಪ್ರಕರಣಗಳ ನಡುವೆ ದೇಶದಲ್ಲಿನ ಕೋವಿಡ್ ಸನ್ನಿವೇಶದ ಕುರಿತು ಪ್ರಧಾನಿ ಅವರು ಗುರುವಾರ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಲಿದ್ದಾರೆ. ಸಂಜೆ 4.30ರ ವೇಳೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾರತದಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆ ಎರಡೂವರೆ ಲಕ್ಷ ಸಮೀಪ ದಾಖಲಾಗಿದ್ದು, ದಿನದಿಂದ ದಿನಕ್ಕೆ ಭಾರಿ ಏರಿಕೆ ಕಾಣುತ್ತಿದೆ. ಈ ಹೊಸ ಕೋವಿಡ್ ಅಲೆಯು ಅಧಿಕ ಪ್ರಸರಣ ಶಕ್ತಿಯುಳ್ಳ ಓಮಿಕ್ರಾನ್ ತಳಿ ಸೋಂಕಿನಿಂದ ಉಂಟಾಗುತ್ತಿದೆ ಎಂದು ಹೇಳಲಾಗಿದೆ. ಅನೇಕ ರಾಜ್ಯಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ, ಜನರ ಗುಂಪುಗೂಡುವಿಕೆ ಮುಂತಾದವುಗಳ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿದೆ. ಕಳೆದ ವಾರ ಕೂಡ ಪ್ರಧಾನಿ ಮೋದಿ ಅವರು ವಿವಿಧ ರಾಜ್ಯಗಳ ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚಿಸಲು ಉನ್ನತ ಮಟ್ಟದ ನಡೆಸಿದ್ದರು. ಆರೋಗ್ಯ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸಿದ್ಧತೆ, ಲಸಿಕೆ ಅಭಿಯಾನದ ಸ್ಥಿತಿಗತಿ, ಓಮಿಕ್ರಾನ್ ತಳಿಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಉಂಟಾಗುವ ಪರಿಣಾಮಗಳ ಬಗ್ಗೆ ಸಮಾಲೋಚನೆ ಮಾಡಿದ್ದರು. ಸಭೆ ವೇಳೆ ಆರೋಗ್ಯ ಕಾರ್ಯದರ್ಶಿ, ಜಾಗತಿಕ ಕೋವಿಡ್ ಪ್ರಕರಣಗಳ ಏರಿಕೆ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದರು. ಜಿಲ್ಲಾ ಮಟ್ಟದಲ್ಲಿ ಸಮರ್ಪಕ ಆರೋಗ್ಯ ಮೂಲಸೌಕರ್ಯ ಖಾತರಿಪಡಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯಗಳೊಂದಿಗೆ ಸಮನ್ವಯ ಸಾಧಿಸುವಂತೆ ಅಧಿಕಾರಿಗಳಿಗೆ ಮೋದಿ ಸೂಚನೆ ನೀಡಿದ್ದರು. ಅಧಿಕ ಪ್ರಕರಣಗಳು ವರದಿಯಾಗುತ್ತಿರುವ ಪ್ರದೇಶಗಳ ಮೇಲೆ ತೀವ್ರ ನಿಗಾ ಇರಿಸಲು ಹಾಗೂ ತೀವ್ರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು, ಹೆಚ್ಚು ಪ್ರಕರಣಗಳನ್ನು ಕಾಣುತ್ತಿರುವ ರಾಜ್ಯಗಳಿಗೆ ಅಗತ್ಯ ತಾಂತ್ರಿಕ ನೆರವು ಒದಗಿಸಲು ನಿರ್ದೇಶಿಸಿದ್ದರು. 'ಪರೀಕ್ಷೆಗಳು, ಲಸಿಕೆಗಳು ಮತ್ತು ಜಿನೋಮ್ ಸೀಕ್ವೆನ್ಸಿಂಗ್ ಸೇರಿದಂತೆ ಔಷಧೀಯ ವಿಷಯಗಳಲ್ಲಿನ ನಿರಂತರ ವೈಜ್ಞಾನಿಕ ಸಂಶೋಧನೆಗಳ ಬಗ್ಗೆ ಪ್ರಧಾನಿ ಮಾತನಾಡಿದ್ದರು' ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿತ್ತು. ಭಾರತದಲ್ಲಿ ಗುರುವಾರ 2.47 ಲಕ್ಷ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಪಾಸಿಟಿವಿಟಿ ದರ ಶೇ 13ಕ್ಕೆ ಏರಿಕೆಯಾಗಿದೆ.


from India & World News in Kannada | VK Polls https://ift.tt/3nokl3v

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...