ಕೊರೊನಾ ಸಂಖ್ಯೆ ಏರಿಕೆ; ದ.ಕ ಜಿಲ್ಲೆಯಲ್ಲಿ ಆಸ್ಪತ್ರೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಲು ಸಚಿವರ ಸೂಚನೆ

ಮಂಗಳೂರು: ಕೋವಿಡ್‌ ಹಾಗೂ ಅದರ ರೂಪಾಂತರಿ ಸೋಂಕಿನ ಚಿಕಿತ್ಸೆಗೆ ಜಿಲ್ಲೆಯ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳನ್ನು ಸಿದ್ಧಪಡಿಸಿಟ್ಟುಕೊಳ್ಳುವಂತೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ದಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್‌ -19 ಸೋಂಕು ಹಾಗೂ ಇತರ ವಿಷಯಗಳ ಕುರಿತು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕು ಮತ್ತು ಸಮುದಾಯ ಆಸ್ಪತ್ರೆ ಸಿದ್ಧಪಡಿಸದಿದ್ದಲ್ಲಿ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ಹೆಚ್ಚಿನ ರೋಗಿಗಳು ಬರುವ ಕಾರಣ, ಹೆಚ್ಚಿನ ಒತ್ತಡ ಬೀಳಲಿದೆ. ತಾಲೂಕುಗಳಲ್ಲಿ ವೈದ್ಯರು, ಆರೋಗ್ಯ ಕಾರ್ಯಕರ್ತರು, ಬೆಡ್‌, ವೆಂಟಿಲೇಟರ್‌ ಗಳು, ಆಕ್ಸಿಜನ್‌, ಲಿಕ್ವಿಡ್‌ ಆಕ್ಸಿಜನ್‌ ಸೇರಿದಂತೆ ಚಿಕಿತ್ಸೆಗೆ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಂಡರೆ, ಕೋವಿಡ್‌ ಹಾಗೂ ಅದರ ರೂಪಾಂತರಿ ಹೆಚ್ಚಳವಾದ ಸಂದರ್ಭದಲ್ಲಿ ನೆರವಾಗಲಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, 16 ಆಕ್ಸಿಜನ್‌ ಘಟಕಗಳ ಪೈಕಿ 15 ಕಾರ್ಯನಿರ್ವಹಿಸುತ್ತಿವೆ. ಅವುಗಳ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. ಖಾಸಗಿ ಆಸ್ಪತ್ರೆಗಳೂ ಚಿಕಿತ್ಸೆಗೆ ಸಿದ್ಧಗೊಂಡಿವೆ ಎಂದರು. ಬೂಸ್ಟರ್‌ ಡೋಸ್‌ ನೀಡಿಕೆಯಲ್ಲಿ ಜಿಲ್ಲೆ ಉತ್ತಮ ಸಾಧನೆ ಮಾಡಬೇಕು. ತಹಸೀಲ್ದಾರರು ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳು ತಾಲೂಕು ಮಟ್ಟದಲ್ಲಿ ಹೆಚ್ಚಿನ ನೋಂದಣಿ ಆಗುವಂತೆ ಅಗತ್ಯ ಗಮನಹರಿಸಬೇಕು. ಅರ್ಹರ ಪಟ್ಟಿ ಸಿದ್ಧಪಡಿಸಿ, ಸ್ಥಳಕ್ಕೆ ಹೋಗಿ ಲಸಿಕೆ ನೀಡುವ ಕ್ರಮ ವಹಿಸಬೇಕು ಎಂದರು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜಿಲ್ಲೆಯಲ್ಲಿ ಡಿಸಿ ಮನ್ನಾ ಸ್ಥಳಕ್ಕೆ ಅರ್ಹರಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳನ್ನು ಗುರುತಿಸಬೇಕು. ಅವರಿಗೆ ಅಗತ್ಯವಿರುವ ಭೂಮಿಯನ್ನು ಮಂಜೂರು ಮಾಡುವ ಕ್ರಮವನ್ನು ಸಂಬಂಧಿಸಿದ ಕಂದಾಯ ಇಲಾಖೆ ಅಧಿಕಾರಿಗಳು ವಹಿಸುವಂತೆ ಸೂಚಿಸಿದರು. ಶಾಸಕ ಯು.ಟಿ. ಖಾದರ್‌ ಸಲಹೆಗಳನ್ನು ನೀಡಿದರು. ಎಸ್ಪಿ ಋುಷಿಕೇಶ್‌ ಭಗವಾನ್‌ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ ಶ್ರೀಧರ್‌, ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಆನಂದಕುಮಾರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್‌ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು. ಕೆಲವು ಶಾಲೆ ತಾತ್ಕಾಲಿಕ ಬಂದ್‌ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಶಾಲೆಗಳನ್ನು ಮುಚ್ಚುವ ಸಂದಿಗ್ಧ ಪರಿಸ್ಥಿತಿ ಉದ್ಭವಿಸಿಲ್ಲ. ಆದರೂ, ಕೋವಿಡ್‌ ಸೋಂಕಿನ ಪ್ರಕರಣ ಹೆಚ್ಚು ಕಂಡುಬಂದ ಶಾಲೆಗಳನ್ನು ಮಾತ್ರ ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದರು. ಲಘು ಪರಿಣಾಮ ಬೀರುವ ಪ್ರಕರಣಗಳಷ್ಟೇ ಕೆಲವೆಡೆ ವರದಿಯಾಗಿವೆ. ತಾಲೂಕು ಮಟ್ಟದಲ್ಲಿ ತಹಸೀಲ್ದಾರ್‌ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಯಾ ಪ್ರದೇಶದ ಶಾಲೆಗಳ ವಿದ್ಯಾರ್ಥಿಗಳಿಗೆ ಕೋವಿಡ್‌ ಸೋಂಕು ಕಂಡುಬಂದಲ್ಲಿ ವರದಿ ಮಾಡುವಂತೆ ಜಿಲ್ಲಾಧಿಕಾರಿ ತಾಕೀತು ಮಾಡಿದರು.


from India & World News in Kannada | VK Polls https://ift.tt/3Grbdmo

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...