ಪುತ್ತೂರು ಅಂಬಿಕಾ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್‌ ಘಟಕ ಉದ್ಘಾಟನೆ

ಪುತ್ತೂರು: ಯುವಜನರನ್ನು ಬಲಗೊಳಿಸಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಸಮಾಜಸೇವೆ ಮತ್ತು ರಾಷ್ಟ್ರ ಸೇವೆ ಮಾಡಲು ಪ್ರೇರೇಪಿಸುತ್ತದೆ. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮೂಡಿಸುವುದರ ಜತೆಗೆ ಶಿಕ್ಷಣವನ್ನು ನೀಡುತ್ತದೆ ಎಂದು ವಿಶ್ರಾಂತ ಪ್ರಾಧ್ಯಾಪಕ ಗೇರುಕಟ್ಟೆ ವಾಸುದೇವ ರಾವ್‌ ಹೇಳಿದರು. ನಗರದ ಬಪ್ಪಳಿಗೆಯಲ್ಲಿರುವ ಅಂಬಿಕಾ ಪದವಿ ಮಹಾ ವಿದ್ಯಾಲಯದ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ಕಾಲೇಜಿನ ಎನ್‌ಎಸ್‌ಎಸ್‌ ಘಟಕವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಪ್ರೀತಿ, ತ್ಯಾಗ, ಶಾಂತಿ, ಸಹಬಾಳ್ವೆ, ಬಂಧುತ್ವ ಮುಂತಾದ ಉದಾತ್ತ ಗುಣಗಳನ್ನು ಮನುಷ್ಯ ಹೊಂದಿರಬೇಕು. ಮಮತೆ ಮತ್ತು ಮಾನವತೆಯನ್ನು ಬೆಳೆಸಿಕೊಳ್ಳಬೇಕು. ಸ್ವಚ್ಛತೆ, ನೈರ್ಮಲ್ಯ, ಶಿಸ್ತನ್ನು ಜೀವನದಲ್ಲಿ ಅಳವಡಿಸಬೇಕು. ಇದಕ್ಕೆ ಎನ್‌ಎಸ್‌ಎಸ್‌ ಘಟಕ ಪೂರಕವಾಗಿ ಕೆಲಸ ಮಾಡುತ್ತದೆ ಎಂದರು. ಮಂಗಳೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್‌ ಸಂಯೋಜಕಿ ಡಾ. ನಾಗರತ್ನ ಕೆ.ಎ. ಮಾತನಾಡಿ, ಎನ್‌ಎಸ್‌ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಅರಳಿಸುವುದರ ಜತೆಗೆ ಚಾರಿತ್ರ್ಯ ಬೆಳೆಸುತ್ತದೆ. ಸದ್ಗುಣಗಳನ್ನು ಹೊಂದಿರುವ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುವಲ್ಲಿ ಎನ್‌ಎಸ್‌ಎಸ್‌ ಪಾತ್ರ ಅತಿ ಮುಖ್ಯ ಎಂದರು. ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಿಂದಲೇ ವ್ಯಕ್ತಿತ್ವವನ್ನು ಅರಳಿಸುವ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಕೇವಲ ನಮಗಾಗಿ ಬದುಕದೆ ಇತರರಿಗಾಗಿ, ಸಮಾಜ ಕಾರ್ಯಕ್ಕಾಗಿ ಜೀವನವನ್ನು ಮೀಸಲಿಡಬೇಕು. ಸಮಾಜ ಗುರುತಿಸುವಂಹ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ಆಗ ಜೀವನ ಸಾರ್ಥಕ್ಯವನ್ನು ಪಡೆಯುತ್ತದೆ ಎಂದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ಚಂದ್ರಕಾಂತ ಗೋರೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಾಸುದೇವ್‌ ರಾವ್‌ ಅವರನ್ನು ಸನ್ಮಾನಿಸಲಾಯಿತು. ಅಂಬಿಕಾ ಕಾಲೇಜಿನ ಗ್ರಂಥಾಲಯಕ್ಕೆ ಐದು ಸಾವಿರ ಮೌಲ್ಯದ ಪುಸ್ತಕಗಳನ್ನು ಕೊಡುಗೆಯಾಗಿ ಹಸ್ತಾಂತರಿಸಿದರು. ಕಾಲೇಜಿನ ವಿದ್ಯಾರ್ಥಿಗಳಾದ ಪಂಚಮಿ, ಅಂಕಿತಾ, ಸ್ಫೂರ್ತಿ ಪ್ರಾರ್ಥಿಸಿದರು. ಎನ್‌ಎಸ್‌ಎಸ್‌ ಘಟಕದ ಸಂಯೋಜಕ ನವೀನ್‌ ಎಸ್‌. ಸ್ವಾಗತಿಸಿದರು. ಪ್ರಿನ್ಸಿಪಾಲ್‌ ಡಾ. ವಿನಾಯಕ ಭಟ್ಟ ಗಾಳಿಮನೆ ಪ್ರಾಸ್ತಾವಿಕ ಮಾತನಾಡಿದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್‌ ಕುಮಾರ್‌ ಕಮ್ಮಜೆ ವಂದಿಸಿದರು. ಪ್ರಾಧ್ಯಾಪಕ ಗಿರೀಶ್‌ ಭಟ್‌ ಇಳಂತಿಲ ಕಾರ್ಯಕ್ರಮ ನಿರೂಪಿಸಿದರು.


from India & World News in Kannada | VK Polls https://ift.tt/3zZClpT

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...