ಬಿಎಂಟಿಸಿ, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದ ರಾಜ್ಯ ಸರಕಾರ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ () ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲೂಕೆಆರ್‌ಟಿಸಿ)ಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳ 2021ರ ನವೆಂಬರ್‌ ಮತ್ತು ಡಿಸೆಂಬರ್‌ ವೇತನಕ್ಕಾಗಿ ಸರಕಾರ 103.20 ಕೋಟಿ ರೂ. ಬಿಡುಗಡೆ ಮಾಡಿದೆ. ಈ ಕುರಿತು ಶುಕ್ರವಾರ ಆದೇಶ ಹೊರಡಿಸಿದೆ. ಆದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ರಾಜಸ್ವ ಮತ್ತು ಅಗತ್ಯ ವೆಚ್ಚಗಳ ಅನುಪಾತ ಶೇ. 10ಕ್ಕಿಂತ ಕಡಿಮೆ ಇರುವುದರಿಂದ ಮತ್ತು ಆ ಸಂಸ್ಥೆಗಳು ತಮ್ಮ ಸ್ವಂತ ನಿಧಿಯಿಂದಲೇ ಭರಿಸಲು ಶಕ್ತವಾಗಿರುವ ಕಾರಣ ಅವು ಸಕಾಲದಲ್ಲಿ ವೇತನ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಬಿಎಂಟಿಸಿ ಮತ್ತು ಎನ್‌ಡಬ್ಲೂಕೆಎಸ್‌ಆರ್‌ಟಿಸಿಗಳಿಗೆ ಎರಡು ತಿಂಗಳ ವೇತನ ವೆಚ್ಚಕ್ಕಾಗಿ ಕ್ರಮವಾಗಿ ಶೇ. 40ರಷ್ಟು ಮತ್ತು ಶೇ. 15ರಿಂದ 17ರಷ್ಟು ಕೊರತೆ ಇರುವುದರಿಂದ ಬಿಎಂಟಿಸಿಗೆ 81 ಕೋಟಿ ರೂ. ಹಾಗೂ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ 22 ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದೆ. ಬಿಡುಗಡೆ ಮಾಡಲಾದ ಅನುದಾನವನ್ನು ಎರಡೂ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಿಂದ ಸಹಿ ಪಡೆದು ಖಜಾನೆಯಿಂದ ಹಣ ಡ್ರಾ ಮಾಡಬಹುದಾಗಿದೆ. ಬಸ್‌ ಸೇವೆ ಹೇಗಿರಬೇಕು? ನಿಮ್ಮ ಅಭಿಪ್ರಾಯ ತಿಳಿಸಿ ಕೆಎಸ್‌ಆರ್‌ಟಿಸಿ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲಿಸಿ ವರದಿ ನೀಡಲು ರಚಿಸಲಾಗಿರುವ ನಿವೃತ್ತ ಕಾರ್ಯದರ್ಶಿ ಎಂ.ಆರ್‌. ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿ ಸಂಸ್ಥೆಯ ಸೇವೆಗಳ ಬಗ್ಗೆ ಸಾರ್ವಜನಿಕರು ಮತ್ತು ಪ್ರಯಾಣಿಕರಿಗೆ ಅಭಿಪ್ರಾಯ/ಸಲಹೆಗಳನ್ನು ಕೋರಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯವ್ಯ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ಕುರಿತು ಜ. 31ರೊಳಗೆ ಸಲಹೆಗಳನ್ನು ಇಮೇಲ್‌ ವಿಳಾಸ cpro@ksrtc.org ಮೂಲಕ ಅಥವಾ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ, ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ, ಕೆ.ಎಚ್‌. ರಸ್ತೆ, ಬೆಂಗಳೂರು - 560027 ಇಲ್ಲಿಗೆ ಕಳುಹಿಸಲು ಕೋರಿದೆ.


from India & World News in Kannada | VK Polls https://ift.tt/3FVLelH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...