ಪಾರ್ಲ್ (): ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ತಂಡದ ಹಿರಿಯ ವೇಗಿ ಅವರು ಭಾರತ ವಿರುದ್ಧ ಇಂದಿನಿಂದ(ಜ.19) ಆರಂಭವಾಗಲಿರುವ ಮೂರು ಪಂದ್ಯಗಳ ಓಡಿಐ ಸರಣಿಯ ಹರಿಣಗಳ ತಂಡದಿಂದ ಮಂಗಳವಾರ ಬಿಡಗಡೆಯಾಗಿದ್ದಾರೆ. ಭಾರತ ವಿರುದ್ಧ ಕಳೆದ ವಾರ ಮುಕ್ತಾಯವಾಗಿದ್ದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಗಿಸೊ ರಬಾಡ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿದ್ದರು. ಆಡಿದ್ದ ಮೂರು ಪಂದ್ಯಗಳಿಂದ 20 ವಿಕೆಟ್‌ಗಳನ್ನು ಕಬಳಿಸಿದ್ದರು. ಆ ಮೂಲಕ 2-1 ಅಂತರದ ಟೆಸ್ಟ್ ಸರಣಿ ಗೆಲುವಿನಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು. ಪಾರ್ಲ್‌ನ ಬೊಲೆಂಡ್ ಪಾರ್ಕ್‌ನಲ್ಲಿ ಇಂದಿನಿಂದ ಶುರುವಾಗಲಿರುವ ಏಕದಿನ ಸರಣಿಯಲ್ಲಿ ಕಗಿಸೊ ರಬಾಡ ಕಣಕ್ಕೆ ಇಳಿಯಬೇಕಾಗಿತ್ತು. ಆದರೆ ಮುಂದಿನ ತಿಂಗಳು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಹಿನ್ನೆಲೆಯಲ್ಲಿ ಹಿರಿಯ ವೇಗಿಗೆ ವಿಶ್ರಾಂತಿ ನೀಡುವ ಸಲುವಾಗಿ ಓಡಿಐ ತಂಡದಿಂದ ಬಿಡುಗಡೆಗೊಳಿಸಲಾಗಿದೆ. "ಹರಿಣಗಳ ಹಿರಿಯ ವೇಗಿ ಕಗಿಸೊ ರಬಾಡ ಅವರನ್ನು ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್ ಹಿನ್ನೆಲೆಯಲ್ಲಿ ಭಾರತ ವಿರುದ್ಧ ಮೂರು ಪಂದ್ಯಗಳ ಓಡಿಐ ಸರಣಿಯಿಂದ ಬಿಡುಗಡೆಗೊಳಿಸಲಾಗಿದೆ. ಆ ಮೂಲಕ ಮುಂದಿನ ತಿಂಗಳು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಒಳಗಾಗಿ ಅವರು ಇನ್ನಷ್ಟು ಫಿಟ್ ಆಗುವಂತೆ ಅವಕಾಶವನ್ನು ಕಲ್ಪಿಸಲಾಗಿದೆ," ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ದಕ್ಷಿಣ ಆಫ್ರಿಕಾ ಓಡಿಐ ತಂಡ ಬಯೋ-ಬಬಲ್ ವಾತಾವರಣದಲ್ಲಿ ಇರುವ ಹಿನ್ನೆಲೆಯಲ್ಲಿ ಕಗಿಸೊ ರಬಾಡ ಅವರ ಸ್ಥಾನಕ್ಕೆ ಬದಲಿ ಆಟಗಾರರನ್ನು ಕ್ರಿಕೆಟ್ ದಕ್ಷಿಣ ಆಫ್ರಿಕಾ ಸೂಚಿಸಿಲ್ಲ. ಟೆಸ್ಟ್ ತಂಡದಿಂದ ಜಾರ್ಜ್ ಲಿಂಡೆ ಅವರನ್ನು ಓಡಿಐ ಸರಣಿಗೆ ಹೆಚ್ಚುವರಿ ಸ್ಪಿನ್ನರ್ ಆಗಿ ಉಳಿಸಿಕೊಳ್ಳಲಾಗಿದೆ. ಅಂದಹಾಗೆ ಭಾರತ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನ ಕಗಿಸೊ ರಬಾಡ ಫಾರ್ಮ್‌ನಲ್ಲಿ ಇರಲಿಲ್ಲ. ಆದರೆ, ವಾಂಡರರ್ಸ್ ಟೆಸ್ಟ್ ಪಂದ್ಯದಲ್ಲಿ ಅವರು ಮ್ಯಾಚ್ ವಿನ್ನಿಂಗ್ ಸ್ಪೆಲ್ ಬೌಲ್ ಮಾಡಿದ್ದರು. 20 ವಿಕೆಟ್‌ಗಳೊಂದಿಗೆ ಟೆಸ್ಟ್ ಸರಣಿಯಲ್ಲಿಯೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ಪರ 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆಡಿದ ಬಳಿಕ ಕಗಿಸೊ ರಬಾಡ ದಕ್ಷಿಣ ಆಫ್ರಿಕಾ ತಂಡದಲ್ಲಿ ನಿಯಮಿತವಾಗಿ ಆಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಓಡಿಐ ಸರಣಿಯಲ್ಲಿ ವಿಶ್ರಾಂತಿ ನೀಡಲಾಗಿದೆ. ಗಾಯದಿಂದಾಗಿ ಟೆಸ್ಟ್ ಸರಣಿಯಿಂದ ಹೊರ ನಡೆದಿದ್ದ ಎನ್ರಿಕ್ ನೊರ್ಕಿಯಾ ಓಡಿಐ ಸರಣಿಗೂ ಅಲಭ್ಯರಾಗಿದ್ದಾರೆ. ಭಾರತ ವಿರುದ್ಧ ಓಡಿಐ ಸರಣಿಗೆ ದಕ್ಷಿಣ ಆಫ್ರಿಕಾ ತಂಡ: ತೆಂಬಾ ಬವೂಮ(ನಾಯಕ), ಕೇಶವ್ ಮಹರಾಜ್(ಉಪ ನಾಐಕ), ಕ್ವಿಂಟನ್ ಡಿ ಕಾಕ್(ವಿ.ಕೀ), ಜುಬೇರ್ ಹಮ್ಝಾ, ಮಾರ್ಕೊ ಯೆನ್ಸನ್, ಜಾನ್ನೆಮನ್ ಮಲನ್, ಸಿಸಂಡಾ ಮಗಾಲಾ, ಏಡೆನ್ ಮಾರ್ಕ್ರಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ವೇಯ್ನ್ ಪಾರ್ನೆಲ್, ಆಂಡಿಲ್ ಫೆಹ್ಲುಕ್ವಾಯೊ, ಡ್ವೈನ್ ಪ್ರಿಟೋರಿಯಸ್, ಜಾರ್ಜ್ ಲಿಂಡೆ, ತಬ್ರೈಝ್ ಶಾಂಸಿ, ರಾಸಿ ವ್ಯಾನ್ ಡೆರ್ ಡುಸ್ಸೆನ್, ಕೈಲ್ ವರೆನ್.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3nD1HVV