ರಸಹೀನ ಕಾರ್ಯಕ್ರಮ ಪ್ರಸಾರ ಮಾಡಿ FM Rainbow ಮುಚ್ಚುವ ಹುನ್ನಾರ: ಸುರೇಶ್‌ಕುಮಾರ್‌ ಆಕ್ಷೇಪ

ಬೆಂಗಳೂರು: ಅಕಾಶವಾಣಿಯ ‘ರೇನ್‌ ಬೋ 101.3 ಎಫ್‌ಎಂ’ ರೇಡಿಯೊ ಚಾನೆಲ್‌ ಅನ್ನು ಹಂತ -ಹಂತವಾಗಿ ಮುಚ್ಚಲು ಮುಂದಾಗಿರುವುದರ ವಿರುದ್ಧ ಮಾಜಿ ಸಚಿವ, ಬಿಜೆಪಿ ಶಾಸಕ ಎಸ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಕ್ಷಿಣ ವಲಯದ ಆಕಾಶವಾಣಿ ಮುಖ್ಯಸ್ಥ ರಮಾಕಾಂತ್‌ ವಿರುದ್ಧ ಆಕ್ರೋಶ ಹೊರಹಾಕಿರುವ ಮಾಜಿ ಸಚಿವ ಎಸ್‌. ಸುರೇಶ್‌ಕುಮಾರ್‌, ‘ರೇನ್‌ ಬೋ 101.3 ಎಫ್‌ಎಂ ಚಾನೆಲ್‌ ಬೆಂಗಳೂರಿನ ಸಂಸ್ಕೃತಿಯ ಪ್ರತೀಕವಾಗಿರುವ ಮತ್ತು ವ್ಯಾಪಾರಿ ಮನೋಧರ್ಮವನ್ನು ಮೀರಿ ಅಪ್ಪಟ ಮನೋರಂಜನೆಗೆ ಹೆಸರಾಗಿದೆ. ರಮಾಕಾಂತ್‌ ಅವರು ಭಾಷಾಂಧತೆ ಹಾಗೂ ಸುದ್ದಿ ಮೂಲದ ಜವಾಬ್ದಾರಿಗಳನ್ನಷ್ಟೇ ಸೇವೆಯುದ್ದಕ್ಕೂ ನಿರ್ವಹಿಸಿಕೊಂಡು ಬಂದಿದ್ದಾರೆ. ಮನೋರಂಜನೆ ಕುರಿತು ಅವರು ಹೊಂದಿರುವ ಉಪೇಕ್ಷೆ ಇಂತಹ ದುಷ್ಟ ಆಲೋಚನೆಗೆ ಕಾರಣವಾಗಿದೆ’ ಎಂದು ಕಿಡಿಕಾರಿದ್ದಾರೆ. ‘ರಾತ್ರಿ 9ರಿಂದ 11ರವರೆಗೆ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಎಲ್ಲರ ಮೆಚ್ಚುಗೆಯ ಕನ್ನಡ ಹಳೆಯ ಚಿತ್ರಗೀತೆಗಳ ಕಾರ್ಯಕ್ರಮ ರದ್ದು ಮಾಡಲಾಗಿದೆ. ಆ ಜಾಗದಲ್ಲಿ ಪ್ರೈಮರಿ ಚಾನೆಲ್‌ನ ರಸಹೀನ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗುತ್ತಿದೆ. ಜನರು ಈ ವಾಹಿನಿಯಿಂದ ವಿಮುಖರಾಗಲಿ ಎಂಬ ದುರುದ್ದೇಶ ಹೊಂದಿರುವಂತಿದೆ. ಪ್ರೈಮರಿ ಚಾನೆಲ್‌ನಲ್ಲಿನ ಹಿಂದಿ ಹಾಗೂ ಅನ್ಯಭಾಷಾ ಸುದ್ದಿ ಕಾರ್ಯಕ್ರಮಗಳನ್ನು ಸಹ ರೇನ್‌ ಬೋ ಮೂಲಕ ಪ್ರಸಾರ ಮಾಡಲು ಹುನ್ನಾರ ನಡೆಯುತ್ತಿದೆ. ಕನ್ನಡ ಸುದ್ದಿಗಳನ್ನು ಹೊರತುಪಡಿಸಿ, ಹಿಂದಿ ಮತ್ತಿತರ ಭಾಷೆಗಳ ಸುದ್ದಿಗಳ ಬಿತ್ತರದ ಅವಶ್ಯಕತೆ ಏನಿದೆ?’ ಎಂದು ಪ್ರಶ್ನಿಸಿದ್ದಾರೆ. ‘ಒಂದು ವೇಳೆ ರಮಾಕಾಂತ್‌ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯದಿದ್ದಲ್ಲಿ 'ರಮಾಕಾಂತ್‌ ಗೋ ಬ್ಯಾಕ್‌' ಚಳವಳಿ ಪ್ರಬಲವಾಗುತ್ತದೆ’, ಎಂದು ಸುರೇಶ್‌ ಕುಮಾರ್‌ ಎಚ್ಚರಿಕೆ ನೀಡಿದ್ದಾರೆ. ಎಫ್‌ ರೇನ್‌ಬೋದ ಕತ್ತು ಕುಯ್ಯುವ ಕೆಲಸಕ್ಕೆ ಕೇಂದ್ರ ಹೊರಟಿದೆ: ಎಚ್‌ಡಿಕೆಕನ್ನಡದ ಮನರಂಜನೆಯ ಪ್ರತೀಕವಾಗಿರುವ ಎಫ್‌ಎಂ ರೇನ್‌ಬೋ ಸ್ಥಗಿತಕ್ಕೆ ಹಂತ ಹಂತವಾಗಿ ಮುಚ್ಚಲು ಮುಂದಾಗಿರುವುದರ ವಿರುದ್ಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕೂಡ ಕಿಡಿಕಾರಿದ್ದರು. ಈ ಸಂಬಂಧ ಹೇಳಿಕಡ ಬಿಡುಗಡೆ ಮಾಡಿದ್ದ ಅವರು, ‘ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿದೆ ಇನ್ನೊಂದು ಸಾಕ್ಷಿ. ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ’ ಎಂದಿದ್ದಾರೆ. ‘ಸೂರ್ಯೋದಯಕ್ಕೆ ಮುನ್ನವೇ ಪ್ರಸಾರ ಆರಂಭಿಸಿ ರಾತ್ರಿ 11ರ ತನಕ ಸತತ 18 ಗಂಟೆ ಕಾಲ ನಿರಂತರವಾಗಿ ಕನ್ನಡ ಕಾರ್ಯಕ್ರಮಗಳನ್ನು ನೀಡುತ್ತಿರುವ ʼ101.3 ಎಫ್ ಎಂ ರೇನ್ ಬೋ ಕನ್ನಡ ಕಾಮನಬಿಲ್ಲುʼ ರೇಡಿಯೋ ವಾಹಿನಿಯ ಕತ್ತು ಕುಯ್ಯುವ ಕೆಲಸಕ್ಕೆ ಕೇಂದ್ರ ಸರಕಾರ ಹೊರಟಿರುವುದು ಅಕ್ಷಮ್ಯ. ಇದು ಕನ್ನಡಕ್ಕೆ ಕೊಡಲಿ ಪೆಟ್ಟು ಎಂದು ಅವರು ಕಿಡಿಕಾರಿದ್ದಾರೆ. ʼರೇನ್ ಬೋ ಕನ್ನಡ ಕಾಮನಬಿಲ್ಲುʼ ಕೇವಲ ರೇಡಿಯೋ ವಾಹಿನಿ ಮಾತ್ರವಲ್ಲ, ಕನ್ನಡಿಗರ ಹೃದಯ ಬಡಿತ, ಕನ್ನಡದ ಅಸ್ಮಿತೆ ಕೂಡ ಎಂದಿರುವ ಕುಮಾರಸ್ವಾಮಿ, ‘ಆದರೆ, ಕೇಂದ್ರ ಸರಕಾರ ಕನ್ನಡಿಗರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ. ಅಧಿಕಾರಿಗಳ ಮೂಲಕ ಕನ್ನಡಮ್ಮನ ರಕ್ತ ಬಗೆಯುವ ಹೀನ ಕೆಲಸ ಮಾಡುತ್ತಿದೆ. ಈ ಹಿಂದೆ ಕನ್ನಡಿಗರ ಮನೆಮನದಲ್ಲಿ ತುಂಬಿದ್ದ ʼಅಮೃತವರ್ಷಿಣಿʼಯನ್ನು ಮುಗಿಸಲಾಯಿತು. ಈಗ ಕನ್ನಡ ಕಾಮನಬಿಲ್ಲನ್ನು ಮುಗಿಸಲು ಹೊರಟಿದ್ದಾರೆ. ಕನ್ನಡ ವಿರೋಧಿ ಕೇಂದ್ರ ಸರಕಾರ, ಕನ್ನಡದ್ರೋಹಿ ಅಧಿಕಾರಿಗಳ ಕಪಿಮುಷ್ಠಿಯಲ್ಲಿ ಸಿಲುಕಿರುವ ಕನ್ನಡದ ಆಕ್ರಂದನವನ್ನು ಇನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


from India & World News in Kannada | VK Polls https://ift.tt/xEkylvc45

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...