ವೆಸ್ಟ್ ಇಂಡೀಸ್ ವಿರುದ್ಧ ಫೆಬ್ರವರಿ 6 ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಓಡಿಐ ಸರಣಿಗೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಆರಿಸಲಾಗಿದ್ದು, ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಇನಿಂಗ್ಸ್ ಆರಂಭಿಸಬಹುದಾಗಿದೆ.
ಹೊಸದಿಲ್ಲಿ:
ದಕ್ಷಿಣ ಆಫ್ರಿಕಾ ವಿರುದ್ಧ 3-0 ಅಂತರದಲ್ಲಿ ಓಡಿಐ ಸರಣಿ ಸೋತು ತವರಿಗೆ ಮರಳಿರುವ ಭಾರತ ತಂಡದಲ್ಲಿ ಇನ್ನು ಮುಂದೆ ರೋಹಿತ್ ಶರ್ಮಾ ಹವಾ ಶುರುವಾಗಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಓಡಿಐ ಸರಣಿ ಹಾಗೂ ಅಷ್ಟೇ ಪಂದ್ಯಗಳ ಟಿ20 ತವರು ಸರಣಿಗಳಿಗೆ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದೆ.
ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿದ್ದ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಅಲಭ್ಯರಾಗಿದ್ದರು. ಈ ಹಿನ್ನೆಲೆಯಲ್ಲಿ ಕೆ.ಎಲ್ ರಾಹುಲ್ ನಾಯಕತ್ವದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರದ್ಧ ಓಡಿಐ ಸರಣಿ ಆಡಿತ್ತು. ಇದೀಗ ರೋಹಿತ್ ಶರ್ಮಾ ಸಂಪೂರ್ಣ ಫಿಟ್ ಆಗಿದ್ದು, ವೆಸ್ಟ್ ಇಂಡೀಸ್ ವಿರುದ್ಧ ಫೆ. 6 ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲನೇ ಏಕದಿನ ಪಂದ್ಯದಲ್ಲಿ ಪೂರ್ಣ ಪ್ರಮಾಣದ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ತವರು ಸರಣಿಗಳಿಗೆ ಹಿರಿಯ ವೇಗಿಗಳಾದ ಜಸ್‌ಪ್ರಿತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಈ ಸರಣಿಯಲ್ಲಿ ಸ್ಪಿನ್ ಹಾಗೂ ವೇಗಿಗಳ ಸಂಯೋಜನೆಯ ಅಂತ್ಯುತ್ತಮ ಪ್ಲೇಯಿಂಗ್ ಇಲೆವೆನ್‌ನೊಂದಿಗೆ ಟೀಮ್ ಇಂಡಿಯಾ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಅದರಂತೆ ವಿಂಡೀಸ್ ವಿರುದ್ಧದ ಮೂರು ಪಂದ್ಯಗಳ ಒಡಿಐ ಸರಣಿಗೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಅನ್ನು ಇಲ್ಲಿ ವಿವರಿಸಲಾಗಿದೆ.
ಆರಂಭಿಕರು: ರೋಹಿತ್-ಧವನ್
ಬರೋಬ್ಬರಿ ಒಂದು ವರ್ಷದ ಬಳಿಕ ಭಾರತ ಓಡಿಐ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಇನಿಂಗ್ಸ್ ಆರಂಭಿಸಲು ಸಜ್ಜಾಗುತ್ತಿದ್ದಾರೆ. ಭಾರತೀಯ ಕ್ರಿಕೆಟ್‌ನ ಅತ್ಯಂತ ಯಶಸ್ವಿ ಓಪನರ್ ಬ್ಯಾಟ್ಸ್‌ಮನ್‌ಗಳಲ್ಲಿ ರೋಹಿತ್-ಧವನ್ ಜೋಡಿ ಕೂಡ ಒಂದು. ಕಳೆದ ಇಂಗ್ಲೆಂಡ್ ಸರಣಿಯಿಂದ ಧವನ್ ಓಡಿಐ ತಂಡದಲ್ಲಿ ನಿಯಮಿತವಾಗಿ ಆಡುತ್ತಿದ್ದಾರೆ. ಆದರೆ ರೋಹಿತ್ ಗಾಯದ ಸಮಸ್ಯೆಯಿಂದ ಕೆಲ ಸರಣಿಗಳನ್ನು ಕಳೆದುಕೊಂಡಿದ್ದರು.
ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಇನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಇನಿಂಗ್ಸ್ ಆರಂಭಿಸಿದ್ದ ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧ ಓಡಿಐ ಸರಣಿಯಲ್ಲಿ ಮಧ್ಯಮ ಕ್ರಮಾಂಕಕ್ಕೆ ಮರಳುವ ಸಾಧ್ಯತೆ ಇದೆ. ಅದಹಾಗೆ ಕಳೆದ ಎರಡು ವರ್ಷಗಳಿಂದ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಡಿದ ಅನುಭವವನ್ನು ಹೊಂದಿದ್ದಾರೆ. ಹಾಗಾಗಿ 4 ಅಥವಾ 5 ನೇ ಕ್ರಮಾಂಕದಲ್ಲಿ ರಾಹುಲ್ ಆಡುವ ಸಂಭವವಿದೆ.
ವಿಂಡೀಸ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟಿಸಿದ ಬಿಸಿಸಿಐ!
ಮಧ್ಯಮ ಕ್ರಮಾಂಕ: ಕೊಹ್ಲಿ, ರಾಹುಲ್, ಪಂತ್
ಎಂದಿನಂತೆ ಮಾಜಿ ನಾಯಕ ವಿರಾಟ್ ಕೊಹ್ಲಿ ಮೂರನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿದ್ದಾರೆ. ಅವರು ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಒಡಿಐ ಸರಣಿಯಲ್ಲಿ ಎರಡು ಅರ್ಧಶತಕಗಳನ್ನು ಸಿಡಿಸಿದ್ದರು. ಆ ಮೂಲಕ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಅಂದಹಾಗೆ ಈ ಸರಣಿಯಲ್ಲಿ ಕೊಹ್ಲಿ ವೃತ್ತಿ ಬದುಕಿನ 71ನೇ ಶತಕದ ನಿರೀಕ್ಷೆಯಲ್ಲಿದ್ದಾರೆ. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕೆ.ಎಲ್ ರಾಹುಲ್ ಆಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಶ್ರೇಯಸ್ ಅಯ್ಯರ್ ಆಡುವ ಬಳಗದಲ್ಲಿ ತಮ್ಮ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ. ಇನ್ನು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಐದನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವುದು ಬಹುತೇಕ ಖಚಿತ.
ಭಾರತ ವಿರುದ್ಧದ ಟಿ20 ಸರಣಿಗೆ ವೆಸ್ಟ್ ಇಂಡೀಸ್ ತಂಡ ಪ್ರಕಟ!
6ನೇ ಕ್ರಮಾಂಕಕ್ಕೆ ಸೂರ್ಯಕುಮಾರ್ ಯಾದವ್
ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಓಡಿಐ ಪಂದ್ಯದಲ್ಲಿ ಭಾರತ ಆರು ಬ್ಯಾಟ್ಸ್‌ಮನ್‌ಗಳು ಹಾಗೂ ಐವರು ಬೌಲರ್‌ಗಳೊಂದಿಗೆ ಕಣಕ್ಕೆ ಇಳಿದಿತ್ತು. ಆದರೆ ವಿಂಡೀಸ್ ವಿರುದ್ಧ ಓಡಿಐ ಸರಣಿಗೆ ವೆಂಕಟೇಶ್ ಅಯ್ಯರ್ ಇಲ್ಲ, ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಸಂಪೂರ್ಣ ಫಿಟ್ ಇಲ್ಲ. ಈ ಹಿನ್ನೆಲೆಯಲ್ಲಿ ತಂಡದ ಆಡುವ ಬಳಗದಲ್ಲಿ ದೀಪಕ್ ಹೂಡ ಒಬ್ಬರು ಮಾತ್ರ ಬ್ಯಾಟಿಂಗ್ ಆಲ್‌ರೌಂಡರ್ ಆಗಿ ಇದ್ದಾರೆ. ಆದರೆ ಅನುಭವದ ಕೊರತೆಯ ಹಿನ್ನೆಲೆಯಲ್ಲಿ ಆರನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಆಡಿಸುವ ಸಾಧ್ಯತೆ ಇದೆ.
ಶ್ರೇಯಸ್ ಅಯ್ಯರ್‌ಗೆ ಹೋಲಿಕೆ ಮಾಡಿದರೆ ಸೂರ್ಯಕುಮಾರ್ ಯಾದವ್ ಕಳೆದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದರು. ಈ ಹಿನ್ನೆಲೆಯಲ್ಲಿ ಓಡಿಐ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ 6ನೇ ಕ್ರಮಾಂಕದಲ್ಲಿಆಡುವ ಸಾಧ್ಯತೆ ದಟ್ಟವಾಗಿದೆ. ಕೆ.ಎಲ್ ರಾಹುಲ್ ಮೊದಲನೇ ಓಡಿಐಗೆ ಅಲಭ್ಯರಾಗಿರುವ ಹಿನ್ನೆಲೆಯಲ್ಲಿ ಶ್ರೇಯಸ್ ಅಯ್ಯರ್ 4 ಅಥವಾ 5ನೇ ಕ್ರಮಾಂಕದಲ್ಲಿ ಚಾನ್ಸ್ ಪಡೆದುಕೊಳ್ಳುವ ಸಾಧ್ಯತೆ ಇದೆ.
ಫಿಟ್ನೆಸ್ ಟೆಸ್ಟ್‌ನಲ್ಲಿ ರೋಹಿತ್ ಪಾಸ್, ವಿಂಡೀಸ್ ವಿರುದ್ಧದ ಸರಣಿಗೆ ಸಜ್ಜಾದ 'ಹಿಟ್‌ಮ್ಯಾನ್'
ಬೌಲಿಂಗ್ ಆಲ್‌ರೌಂಡರ್ಸ್: ವಾಷಿಂಗ್ಟನ್, ಶಾರ್ದುಲ್, ಚಹರ್
ಬ್ಯಾಟಿಂಗ್ ಏಳನೇ ಕ್ರಮಾಂಕದಲ್ಲಿ ವಾಷಿಂಗ್ಟನ್ ಸುಂದರ್ ಆಡುವ ಸಾಧ್ಯತೆ ಇದೆ. ಬೌಲಿಂಗ್ ಆಲ್‌ರೌಂಡರ್ ಆಗಿ ಸುಂದರ್ ಈ ಹಿಂದೆ ತಂಡದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದರಾಎ. ಇತ್ತೀಚೆಗೆ ಮುಕ್ತಾಯವಾಗಿದ್ದ ವಿಜಯ್ ಹಝಾರೆ ಟ್ರೋಫಿ ಟೂರ್ನಿಯಲ್ಲಿಯೂ ತಮಿಳುನಾಡು ಆಲ್‌ರೌಂಡರ್ ಅತ್ಯುತ್ತಮ ಪ್ರದರ್ಶನ ತೋರಿದ್ದರು. ಈ ಟೂರ್ನಿಯಲ್ಲಿ ಕೆಳ ಮಧ್ಯಮ ಕ್ರಮಾಂಕದಲ್ಲಿ ಆಡಿದ್ದ ಅವರು ಉತ್ತಮ ರನ್‌ಗಳನ್ನು ಗಳಿಸಿದ್ದರು.
ದಕ್ಷಿಣ ಆಫ್ರಿಕಾ ವಿರುದ್ಧ ಓಡಿಐ ಸರಣಿಯಲ್ಲಿ ಶಾರ್ದುಲ್ ಠಾಕೂರ್ ಹಾಗೂ ದೀಪಕ್ ಚಹರ್ ಅವರ ಬ್ಯಾಟಿಂಗ್ ಪ್ರದರ್ಶನ ಟೀಮ್ ಇಂಡಿಯಾ ಪಾಲಿಗೆ ಪಾಸಿಟಿವ್ ಅಂಶವಾಗಿತ್ತು. ಈ ಸರಣಿಯಲ್ಲಿ ಈ ಇಬ್ಬರೂ ಅತ್ಯುತ್ತಮ ಪ್ರದರ್ಶನ ತೋರಿದ್ದರು. ಇದರಲ್ಲಿ ಪ್ಲಸ್ ಪಾಯಿಂಟ್ ಎಂದರೆ ಈ ಜೋಡಿಯ ಬ್ಯಾಟಿಂಗ್! ಈ ಹಿನ್ನೆಲೆಯಲ್ಲಿ ವೆಸ್ಟ್ ಇಂಡೀಸ್ ವಿರುದ್ದದ ಓಡಿಐ ಸರಣಿಗೆ ಶಾರ್ದುಲ್ ಹಾಗೂ ದೀಪಕ್ 8 ಮತ್ತು 9ನೇ ಕ್ರಮಾಂಕಕ್ಕೆ ಸೂಕ್ತ ಆಟಗಾರರಾಗಿದ್ದಾರೆ.
ಟೀಮ್ ಇಂಡಿಯಾದಿಂದ ಅಶ್ವಿನ್ ಹೊರ ಬೀಳಲು ಇದೇ ಕಾರಣ!
ಬೌಲರ್‌ಗಳು: ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್
ಇನ್ನು ಬೌಲರ್‌ಗಳ ಸ್ಥಾನದಲ್ಲಿ ತಂಡದ ಕೊನೆಯ ಎರಡು ಸ್ಥಾನಗಳಿಗೆ ಮೊಹಮ್ಮದ್ ಸಿರಾಜ್ ಹಾಗೂ ಯುಜ್ವೇಂದ್ರ ಚಹಲ್ ಅವಕಾಶ ಪಡೆದುಕೊಳ್ಳುವುದು ಬಹುತೇಕ ಖಚಿತವಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಯ ಪಂದ್ಯದಲ್ಲಿ ಆಡಿದ್ದ ಪ್ರಸಿಧ್ ಕೃಷ್ಣ ಬದಲು ಸಿರಾಜ್ ಪ್ಲೇಯಿಂಗ್ XIನಲ್ಲಿ ಆಡುವ ನೆಚ್ಚಿನ ಆಟಗಾರರಾಗಿದ್ದಾರೆ. ಇನ್ನು ಸ್ಪಿನ್ ವಿಭಾಗವನ್ನು ಅನುಭವಿ ಯುಜ್ವೇಂದ್ರ ಚಹಲ್ ಮುನ್ನಡೆಸುವ ಸಾಧ್ಯತೆ ಇದೆ. ದಕ್ಷಿಣ ಆಫ್ರಿಕಾ ವಿರುದ್ಧ ಯೋಗ್ಯ ಪ್ರದರ್ಶನ ತೋರಿದ್ದ ಚಹಲ್, ವಿಂಡೀಸ್ ಸರಣಿಯಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ತೋರಲೇ ಬೇಕಾದ ಅಗತ್ಯವಿದೆ. ಇಲ್ಲವಾದಲ್ಲಿ ಯುವ ಸ್ಪಿನ್ನರ್ ರವಿ ಬಿಷ್ಣೋಯ್‌ಗೆ ತಮ್ಮ ಸ್ಥಾನವನ್ನು ಬಿಟ್ಟುಕೊಡಬೇಕಾಗುತ್ತದೆ.
ಚಹಲ್ ಸ್ಥಾನ ಕಬಳಿಸಲು ಕಾಯುತ್ತಿರುವ ಸ್ಪಿನ್ನರ್ ಹೆಸರಿಸಿದ ಕಾರ್ತಿಕ್!
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/1OtsS5Hbe