ದಲಿತ ಕುಟುಂಬ, ನ್ಯಾಯಾಲಯಕ್ಕೆ ವಂಚನೆ: ಉಡುಪಿಯಲ್ಲಿ ವಕೀಲನಿಗೆ ಜೀವಾವಧಿ ಶಿಕ್ಷೆ..!

: ಅಪಘಾತ ವಿಮೆ ಪಡೆಯಲು ನಕಲಿ ದಾಖಲೆ ಸೃಷ್ಟಿಸಿ ವಿಮಾ ಪರಿಹಾರವನ್ನು ಲಪಟಾಯಿಸಿ ಸಂತ್ರಸ್ತರಿಗೆ 2.5 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉಡುಪಿ ಅಲೆವೂರು ಪ್ರೇಮರಾಜ ಕಿಣಿಗೆ ಶಿಕ್ಷೆ ವಿಧಿಸಿ ಉಡುಪಿ ಆದೇಶಿಸಿದೆ. ಪ್ರಕರಣದ ಎರಡನೇ ಆರೋಪಿ ವಿನಯ ಕುಮಾರ್‌, ಮೃತಪಟ್ಟಿರುವ ಮೂರನೇ ಆರೋಪಿ ಹರಿಶ್ಚಂದ್ರ ಆಚಾರ್ಯ ಅವರೊಂದಿಗೆ ಸೇರಿ ಬೆಳ್ತಂಗಡಿ ತಾಲೂಕಿನ ನಾರಾವಿಯ ಬಡ ದಲಿತ ಕೂಲಿ ಕಾರ್ಮಿಕ ಸಾಧು ಮತ್ತು ಕುಟುಂಬಕ್ಕೆ ವಂಚಿಸಿ ಸುಮಾರು 2.5 ಲಕ್ಷ ರೂ.ಗಳಿಗೂ ಅಧಿಕ ಮೊತ್ತದ ಅಪಘಾತ ವಿಮಾ ಪರಿಹಾರವನ್ನು ಕಬಳಿಸಿರುವ ಬಗ್ಗೆ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿತ್ತು. ದಲಿತ ಕುಟುಂಬದ ಪರವಾಗಿ ಉಡುಪಿಯ ದಲಿತ ಮುಖಂಡ ಜಯನ್‌ ಮಲ್ಪೆ ನೇತೃತ್ವದಲ್ಲಿ ದಸಂಸ ಹೋರಾಟ ನಡೆಸಿತ್ತು. ಪ್ರಕರಣದ 3ನೇ ಆರೋಪಿ ಮೃತಪಟ್ಟಿದ್ದು, ಪ್ರಕರಣದ ವಿಚಾರಣೆ ವೇಳೆ ಪ್ರೇಮರಾಜ ಕಿಣಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಬೆಳ್ತಂಗಡಿ ತಾಲೂರು ನಾರವ ಮಡಕೋಡು ಗ್ರಾಮದ ಕಡಂಬಿಲದ ಬಡ ಕೂಲಿ ಕಾರ್ಮಿಕರಾದ ಚಂಬು ಅವರ ಪತ್ನಿ ಕುಂದಾದು 2002 ರ ಮೇ 13 ರಂದು ಕೊಲ್ಲೂರಿಗೆ ತೆರಳುತ್ತಿರುವಾಗ ಕಾರ್ಕಳದ ಕಸಬಾ ಗ್ರಾಮದ ಸಾಲ್ಮರದ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಬಗ್ಗೆ ಪತಿ ಚಂಬು ಹಾಗೂ ಅವರ ಮಕ್ಕಳಾದ ಅಣ್ಣು, ಸಾಧು ಅಕ್ಕು ಹಾಗೂ ಕಜವೆ ಅಪಘಾತ ವಿಮಾ ಪರಿಹಾರ ಕೊರಿ ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣ ಉಡುಪಿ ನ್ಯಾಯಾಲಯದಲ್ಲಿ ತನಿಖೆಯಾಗಿದ್ದು, ನ್ಯಾಯಾಲಯ 2003ರ ಆಗಸ್ಟ್‌ನಲ್ಲಿ 1,22,400 ರೂ. ಪರಿಹಾರ ಹಾಗೂ ಬಡ್ಡಿ ಸೇರಿ 1,33,246 ರೂ. ಪರಿಹಾರ ನೀಡುವಂತೆ ಆದೇಶ ಹೊರಡಿಸಿತ್ತು. ಅದನ್ನು ಪಡೆದ ಚಂಬು ಕುಟುಂಬ ಪರಿಹಾರ ಮೊತ್ತ ಕಡಿಮೆಯಾಗಿದೆ ಎಂದು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಪುರಸ್ಕರಿಸಿದ್ದ ಹೈಕೋರ್ಟ್‌ ಪರಿಹಾರ ನೀಡುವಂತೆ ಆದೇಶ ನೀಡಿತ್ತು. ಹೈಕೋರ್ಟ್‌ ಆದೇಶದಂತೆ ವಿಮಾ ಕಂಪನಿ 1,85,600 ರೂ. ಬಡ್ಡಿ ಸೇರಿ ಒಟ್ಟು 2,57,549 ರೂ. ಮೊತ್ತದ ಹಣವನ್ನು ನ್ಯಾಯಾಲಯದಲ್ಲಿ ಜಮೆ ಮಾಡಿತ್ತು. ಆದರೆ ಈ ಹಂತದಲ್ಲಿ ಆರೋಪಿಗಳು ಪಿರ್ಯಾದುದಾರರು, ನ್ಯಾಯಾಲಯ ಹಾಗೂ ಬ್ಯಾಂಕ್‌ ಅಧಿಕಾರಿಗಳನ್ನು ವಂಚಿಸಿ ಬಡ ಕುಟುಂಬಕ್ಕೆ ಸಿಗಬೇಕಿದ್ದ ಪರಿಹಾರ ಮೊತ್ತವನ್ನು ನಕಲಿ ದಾಖಲೆ ಹಾಗೂ ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಪೂರ್ತಿ ಹಣವನ್ನು ಪಿರ್ಯಾದುದಾರರ ಅರಿವಿಗೆ ಬಾರದಂತೆ ಲಪಟಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ, ಶುಕ್ರವಾರ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದು, ಎರಡನೇ ಆರೋಪಿಗೆ ಏಳು ವರ್ಷಗಳ ಶಿಕ್ಷೆ ವಿಧಿಸಿದ್ದಾರೆ.


from India & World News in Kannada | VK Polls https://ift.tt/NadqMVo

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...