ಸಚಿವ ಆರ್.ಅಶೋಕ್ ಆಪ್ತರೆಂದು ಹೇಳಿ ಅಧಿಕಾರಿಗಳಿಗೆ ಕಿರುಕುಳ; ಎಸಿಬಿ, ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಕಂದಾಯ ಸಚಿವ ಆರ್‌. ಅಶೋಕ್‌ ಅವರ ಆಪ್ತರೆಂದು ಹೇಳಿಕೊಂಡು ಕಂದಾಯ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಂಜುನಾಥ್‌ ಎಂಬಾತನ ವಿರುದ್ಧ ವಕೀಲ ನಾಗರಾಳ ಎಸ್‌.ಪಿ. ಗುಳೇದಗುಡ್ಡ, ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮತ್ತು ಲೋಕಾಯುಕ್ತರಿಗೆ ದೂರು ನೀಡಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ ಎಂಜಿನಿಯರ್‌ ಆಗಿದ್ದ ಮಂಜುನಾಥ್‌, ಎರವಲು ಸೇವೆ ಮೇರೆಗೆ ನೋಂದಣಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದು, ಇದೀಗ ನಿವೃತ್ತಿ ಹೊಂದಿದ್ದಾರೆ. ನಿವೃತ್ತಿ ಬಳಿಕ ಮಂಜುನಾಥ್‌ ನೋಂದಣಿ ಇಲಾಖೆಯ ಎಲ್ಲ ಅಧಿಕಾರಿ ವರ್ಗದವರನ್ನು ಹೆದರಿಸುತ್ತಿದ್ದಾರೆ. ಅಲ್ಲದೆ, ಶಾಸಕರ ಭವನದಲ್ಲಿ ಶಾಸಕರೊಬ್ಬರಿಗೆ ನೀಡಲಾಗಿರುವ ಕೊಠಡಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಗುಳೇದಗುಡ್ಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಂಜುನಾಥ್‌, ನೋಂದಣಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕರೆ ಮಾಡಿ ಹಣ ನೀಡುವಂತೆ ಒತ್ತಾಯಿಸುತ್ತಾರೆ. ಇಲ್ಲದಿದ್ದರೆ, ನಿಮ್ಮ ವಿರುದ್ಧ ಎಸಿಬಿ ಹಾಗೂ ಲೋಕಾಯುಕ್ತ, ಸಿಸಿಬಿಗೆ ದೂರು ನೀಡಲಾಗುವುದು ಎಂದು ಹೆದರಿಸುತ್ತಾರೆ. ಮಂಜುನಾಥ್‌ನ ನಿಯಮ ಬಾಹಿರ ಕೆಲಸಗಳಿಗೆ ಆಕ್ಷೇಪ ವ್ಯಕ್ತಪಡಿಸುವ ಅಧಿಕಾರಿಗಳನ್ನು ತಕ್ಷಣ ಜಾರಿಗೆ ಬರುವಂತೆ ದೂರದ ಪ್ರದೇಶಗಳಿಗೆ ವರ್ಗಾವಣೆ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಶಾಸಕರ ಭವನಕ್ಕೆ ಸಾರ್ವಜನಿಕರ ಪ್ರವೇಶವಿಲ್ಲ. ಆದರೆ, ಮಂಜುನಾಥ್‌ ಹೆಸರು ಹೇಳಿದರೆ ಶಾಸಕರ ಭವನದ ಮುಖ್ಯದ್ವಾರದ ಪೊಲೀಸರು ಯಾವುದೇ ತಪಾಸಣೆಯನ್ನೂ ಮಾಡದೆ ಬಿಟ್ಟು ಕಳುಹಿಸುತ್ತಾರೆ. ಈ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಿ ಕಂದಾಯ ಮತ್ತು ನೋಂದಣಿ, ಮುದ್ರಾಂಕ ಇಲಾಖೆಯ ಅಧಿಕಾರಿ, ಸಿಬ್ಬಂದಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.


from India & World News in Kannada | VK Polls https://ift.tt/QjXGd05

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...