ಬೆಂಗಳೂರು: ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವೈ.ಎಂ. ರಾಜು ವಿರುದ್ಧದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವೈ.ಎಂ. ರಾಜು ಸಲ್ಲಿಸಿರುವ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ. ವೈ.ಎಂ. ರಾಜು ಅವರು ಗಾಂಧಿನಗರ ಉಪವಿಭಾಗದಲ್ಲಿ ಸಹಾಯಕ ಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುವಾಗ ಕೆಲವು ಕಾಮಗಾರಿ ನಿರ್ವಹಣೆ ಮಾಡಿದ್ದರು. ಈ ಕಾಮಗಾರಿ ಕಳಪೆಯಾಗಿದೆ ಮತ್ತು ಅನುದಾನ ದುರ್ಬಳಕೆಯಾಗಿದೆ ಎಂದು ಆರೋಪಿಸಿ ರಾಜು ವಿರುದ್ಧ ಏಕಕಾಲಕ್ಕೆ ಹಲವು ತನಿಖಾ ಸಂಸ್ಥೆಗಳಿಗೆ ರಮೇಶ್ ದೂರು ಸಲ್ಲಿಸಿದ್ದರು. ಆ ಬಗ್ಗೆ ಎಸಿಬಿ ತನಿಖೆ ನಡೆಸುತ್ತಿತ್ತು. ''ಬಿಬಿಎಂಪಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ದೂರು ಸಲ್ಲಿಸುವ ಪ್ರವೃತ್ತಿ ಹೊಂದಿರುವ ಬಿಜೆಪಿಯ ಬೆಂಗಳೂರು ಜಿಲ್ಲೆ ದಕ್ಷಿಣ ಘಟಕದ ಅಧ್ಯಕ್ಷ ಎನ್.ಆರ್. ರಮೇಶ್ ಅವರ ದುರುದ್ದೇಶಪೂರ್ವಕ ನಡೆಯ ಬಗ್ಗೆ ಪರಿಶೀಲನೆ ನಡೆಸಬೇಕು,'' ಎಂದು ಅರ್ಜಿಯಲ್ಲಿ ರಾಜು ಕೋರಿದ್ದರು. ಅರ್ಜಿದಾರರ ಪರ ವಕೀಲರು, ''ರಾಜು ಅವರು ಕಾಮಗಾರಿ ನಡೆಸಿದ್ದು 2015-16ರಲ್ಲಿ. ಆದರೆ, ರಮೇಶ್ ದೂರು ಸಲ್ಲಿಸಿದ್ದು 2021ರ ನವೆಂಬರ್‌ನಲ್ಲಿ. ಆರು ವರ್ಷಗಳ ನಂತರ ಈ ರೀತಿ ದೂರು ನೀಡಿರುವ ಅವರ ವರ್ತನೆ ಅಧಿಕಾರಿಗಳನ್ನು ಶೋಷಣೆ ಮಾಡುವುದಾಗಿದೆ,'' ಎಂದು ಆರೋಪಿಸಿದರು. ಉಲ್ಲಂಘನೆ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಮತ್ತು ಕೇಸರಿ ಶಾಲಿನ ಪ್ರಕರಣದ ಹಿನ್ನೆಲೆಯಲ್ಲಿ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶದ ಸೂಚನೆಗಳನ್ನು ವಿದ್ಯಾರ್ಥಿಗಳು ಹಾಗೂ ಶೈಕ್ಷಣಿಕ ಸಂಸ್ಥೆ, ಸಂಘಟನೆಗಳು ಪಾಲಿಸಬೇಕು ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್. ರವಿಕುಮಾರ ಸೂಚನೆ ನೀಡಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹೈಕೋರ್ಟ್ ತೀರ್ಪು ಪಾಲಿಸುವುದು ಕರ್ತವ್ಯ. ಈ ನಿಟ್ಟಿನಲ್ಲಿ ಯಾರಾದರೂ ವ್ಯಕ್ತಿ, ಸಂಘಟನೆ, ಸಂಸ್ಥೆ ಮತ್ತು ವಿದ್ಯಾರ್ಥಿಗಳು ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಹಿಜಾಬ್ ಮತ್ತು ಕೇಸರಿ ಶಾಲಿನ ಪ್ರಕರಣ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಭಟನೆ, ಧರಣಿ ಮಾಡಬಾರದು. ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಪೇಸ್‌ಬುಕ್, ಇನ್‌ಸ್ಟಾಗ್ರಾಂಗಳಲ್ಲಿ ಪ್ರಚೋದನಕಾರಿ ಹೇಳಿಕೆಗಳು ಹಾಗೂ ಸಂದೇಶ ನೀಡುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿಪತ್ರ ಅಥವಾ ಇತರ ಯಾವದೇ ವಸ್ತುಗಳು ಪ್ರದರ್ಶಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
from India & World News in Kannada | VK Polls https://ift.tt/Po1KEJV