ಪುಟಿನ್‌ಗೆ ಕರೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ! ಉಕ್ರೇನ್‌ನಲ್ಲಿ ಭಾರತೀಯ ಪ್ರಜೆಗಳ ಸ್ಥಳಾಂತರ ಕುರಿತು ಚರ್ಚೆ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು. ಉಕ್ರೇನ್‌ನ ಪರಿಸ್ಥಿತಿಯನ್ನು ಪರಿಶೀಲಿಸಿದ ಮೋದಿ ಅವರು, ವಿಶೇಷವಾಗಿ ಖಾರ್ಕಿವ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರ ಕುರಿತು ಮಾತನಾಡಿದರು. ಸಂಘರ್ಷದ ಪ್ರದೇಶಗಳಿಂದ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕುರಿತು ಪುಟಿನ್‌ ಅವರೊಂದಿಗೆ ಚರ್ಚಿಸಿದರು. ನಾವು ಎರಡು ಕಾಲ್ ಸೆಂಟರ್‌ಗಳನ್ನು ಸ್ಥಾಪಿಸುತ್ತಿದ್ದೇವೆ. ಉಕ್ರೇನ್‌ನ ಬುಚೆರೆಸ್ಟ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳಿಗೆ ಒಂದು ಕಾಲ್‌ ಸೇಮಟರ್‌ ಮತ್ತು ಸಿರೆಟ್ (ರೊಮೇನಿಯಾ) ತಲುಪಿರುವ ವಿದ್ಯಾರ್ಥಿಗಳಿಗಾಗಿ ಮತ್ತೊಂದು ಕಾಲ್‌ ಸೆಂಟರ್‌ ಸ್ಥಾಪಿಸಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಎಎನ್‌ಐಗೆ ತಿಳಿಸಿದ್ದಾರೆ. ಯುದ್ಧಪೀಡಿತ ಉಕ್ರೇನ್‌ನ ಖಾರ್ಕಿವ್‌ನಿಂದ ಭಾರತಕ್ಕೆ ಮರಳಲು ಕಾಯುತ್ತಿರುವ ಭಾರತೀಯ ವಿದ್ಯಾರ್ಥಿನಿಯರು ರೈಲಿನಲ್ಲಿ ಉಕ್ರೇನ್‌ನ ಪಶ್ಚಿಮ ಗಡಿಯ ಕಡೆಗೆ ತೆರಳುತ್ತಿದ್ದಾರೆ. ವಿದ್ಯಾರ್ಥಿಗಳನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಖಾರ್ಕಿವ್ ಈಗ ವಾಸ್ತವಿಕವಾಗಿ ರಷ್ಯಾದ ನಿಯಂತ್ರಣದಲ್ಲಿದೆ ಎಂದು ಮೂಲಗಳು ತಿಳಿಸಿವೆ. ನಾವು (ಭಾರತ ಸರ್ಕಾರ) ಗುರಿ ಮಾಡಬೇಡಿ ಎಂದು ಹೇಳಿದ ಪ್ರದೇಶಗಳನ್ನು ರಷ್ಯನ್ನರು ಸದ್ಯಕ್ಕೆ ತೊರೆದಿದ್ದಾರೆ. ನಮ್ಮ ವಿದ್ಯಾರ್ಥಿಗಳು ಸುರಕ್ಷಿತ ಮಾರ್ಗಕ್ಕಾಗಿ ನಾವು ರಷ್ಯನ್ನರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ವರದಿಯಾಗಿದೆ. ಉಕ್ರೇನ್‌ನ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್ ನಿನ್ನೆಯಿಂದ ಭಾರೀ ಶೆಲ್ ದಾಳಿಗೆ ತುತ್ತಾಗಿದ್ದು, ಇದರಲ್ಲಿ ಭಾರತೀಯ ವಿದ್ಯಾರ್ಥಿಯೂ ಸಾವನ್ನಪ್ಪಿದ್ದಾರೆ. ರಷ್ಯಾ ದಾಳಿ ಮತ್ತಷ್ಟು ತೀವ್ರಗೊಳ್ಳುವ ಆತಂಕದ ನಡುವೆ, ಬುಧವಾರ ಸಂಜೆ ಭಾರತವು ತನ್ನ ಎಲ್ಲ ನಾಗರಿಕರನ್ನು ಸ್ಥಳೀಯ ಕಾಲಮಾನ ಸಂಜೆ 6 ಗಂಟೆಗೆ (ರಾತ್ರಿ 9.30 IST) ನಗರವನ್ನು ಖಾಲಿ ಮಾಡುವಂತೆ ಕೇಳಿಕೊಂಡಿದೆ. ಅಲ್ಲದೆ, ಅಗತ್ಯವಿದ್ದರೆ, ಕಾಲ್ನಡಿಗೆಯಲ್ಲಿ ಪಿಸೋಚಿನ್, ಬಾಬಾಯಿ ಅಥವಾ ಬೆಜ್ಲುಡಿವ್ಕಾ ಕಡೆಗೆ ಹೋಗಿ ಮತ್ತು ಯಾವುದೇ ಸಂದರ್ಭದಲ್ಲಿ ಖಾರ್ಕಿವ್ ಅನ್ನು ತೊರೆಯುವಂತೆ ಸೂಚನೆ ನೀಡಲಾಗಿದೆ.


from India & World News in Kannada | VK Polls https://ift.tt/Xnfvs7j

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...