ವಕೀಲ್​ ಸಾಬ್​ ಜಗದೀಶ್‌ಗೆ ಜಾಮೀನು ಮಂಜೂರು ಮಾಡಿದ ಬೆಂಗಳೂರು ಸೆಷನ್ಸ್‌ ಕೋರ್ಟ್‌

ಬೆಂಗಳೂರು: ಸಿಟಿ ಸಿವಿಲ್‌ ಕೋರ್ಟ್‌ ಆವರಣದಲ್ಲಿ ಗಲಾಟೆ ಮಾಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ವಕೀಲ ಜಗದೀಶ್‌ ಅವರಿಗೆ ನಗರದ ಸೆಷನ್ಸ್‌ ಕೋರ್ಟ್‌ ಮಂಜೂರು ಮಾಡಿದೆ. 50 ಸಾವಿರ ರೂ. ಮೊತ್ತದ ವೈಯಕ್ತಿಕ ಬಾಂಡ್‌, ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತಾ ಖಾತರಿ ನೀಡಬೇಕು. ಸಾಕ್ಷ್ಯಗಳನ್ನು ನಾಶಪಡಿಸಬಾರದು ಅಥವಾ ಅವುಗಳ ಮೇಲೆ ಪ್ರಭಾವ ಬೀರಬಾರದು. ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು ಎಂದು ಕೋರ್ಟ್‌ ಷರತ್ತು ವಿಧಿಸಿ ಜಾಮೀನು ನೀಡಿದೆ. ಫೆ.11ರಂದು ಸಿಟಿ ಸಿವಿಲ್‌ ಕೋರ್ಟ್‌ನಲ್ಲಿ ವಕೀಲ ಜಗದೀಶ್‌ ಮತ್ತವರ ಪುತ್ರನ ಮೇಲೆ ಹಲ್ಲೆ ನಡೆದಿತ್ತು. ಗಲಾಟೆ ನಡೆಯಲು ಜಗದೀಶ್‌ ವಕೀಲರನ್ನು ಪ್ರಚೋದಿಸಿದರು ಎಂಬ ಆರೋಪವೂ ಅವರ ಮೇಲೆ ಕೇಳಿ ಬಂದಿತ್ತು. ಫೆ.12ರಂದು ವಕೀಲ ನಾರಾಯಣ ಸ್ವಾಮಿ ನೀಡಿದ್ದ ದೂರಿನಂತೆ ಕೊಲೆ ಬೆದರಿಕೆ ಹಾಗೂ ಕೊಲೆ ಯತ್ನ ಮತ್ತಿತರೆ ಆರೋಪಗಳನ್ನು ಹೊರಿಸಿ ಹಲಸೂರು ಗೇಟ್‌ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿ ಜಗದೀಶ್‌ ಅವರನ್ನು ಫೆ.14ರ ಬೆಳಗ್ಗೆ ಕೊಡಿಗೇಹಳ್ಳಿ ಮನೆಯಿಂದ ಬಂಧಿಸಿದ್ದರು. ಆ ಬಳಿಕ ನ್ಯಾಯಾಲಯ ವಕೀಲ ಜಗದೀಶ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಈ ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಕ್ಕರೂ, ಇನ್ನೆರಡು ಪ್ರಕರಣಗಳಲ್ಲಿ ಜಾಮೀನು ಸಿಕ್ಕ ನಂತರ ಜಗದೀಶ್‌ ಅವರಿಗೆ ಬಿಡುಗಡೆ ಭಾಗ್ಯ ಸಿಗಲಿದೆ ಎನ್ನಲಾಗಿದೆ. ವಕೀಲ ಜಗದೀಶ್ ಮತ್ತು ಪುತ್ರನ ಮೇಲೆ ನಡೆದಿತ್ತು ಹಲ್ಲೆ!ನಗರದ ಸಿಟಿ ಸಿವಿಲ್‌ ಕೋರ್ಟ್ ಆವರಣದಲ್ಲಿ ವಕೀಲ ಜಗದೀಶ್ ಮತ್ತು ಅವರ ಆಪ್ತರ ಮೇಲೆ ಹಲ್ಲೆ ನಡೆಸಿರುವ ಆರೋಪವೂ ಕೇಳಿ ಬಂದಿತ್ತು. ಈ ಸಂಬಂಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಪ್ರಕರಣವೊಂದರ ಸಂಬಂಧ ಫೆಬ್ರವರಿ 11ರಂದು ಬೆಳಗ್ಗೆ ಸಿಟಿ ಸಿವಿಲ್‌ ಕೋರ್ಟ್‌ಗೆ ದಾಖಲೆ ಸಲ್ಲಿಸಲು ಹೋದಾಗ ‘ಕೆಲವು ಮುಸುಕುಧಾರಿಗಳು ನನ್ನ ಹಾಗೂ ನನ್ನ ಪುತ್ರ, ಆಪ್ತರ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ಜಗದೀಶ್‌ ಆರೋಪಿಸಿದ್ದರು. ಹಲ್ಲೆಗೊಳಗಾದ ಜಗದೀಶ್‌ ಪುತ್ರನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಫೇಸ್ ಬುಕ್ ಲೈವ್ ನಲ್ಲಿ ಆಕ್ರೋಶ!ಘಟನೆ ಕುರಿತು ಅದೇ ದಿನ ಫೇಸ್‌ಬುಕ್ ಲೈವ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದ ವಕೀಲ ಜಗದೀಶ್, ನಗರ ಪೊಲೀಸ್ ಆಯುಕ್ತ ಕಮಲಪಂತ್, ಡಿಜಿಪಿ ಪ್ರವೀಣ್ ಸೂದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ನನ್ನ ಮಗನಿಗೆ ಏನಾದರೂ ಆದರೆ ನಿಮ್ಮ ಖಾಕಿ ಸಮವಸ್ತ್ರ ಬಿಡಿಸದೇ ಬಿಡಲ್ಲ. ಕೋರ್ಟ್ ಆವರಣದಲ್ಲಿ ಒಬ್ಬ ನ್ಯಾಯವಾದಿ ಮಗನ ಮೇಲೆ ಹಲ್ಲೆ ನಡೆದಿದೆ ಅಂದ್ರೆ ಇದೇನಿದು ಗೂಂಡಾ ರಾಜ್ಯನಾ? ಮೊದಲು ರಾಜೀನಾಮೆ ತೆಗೆದುಕೊಂಡು ಮನೆಗೆ ಹೋಗಿ. ಇಲ್ಲವೇ ನಾನೇ ನಿಮ್ಮ ಸಮವಸ್ತ್ರ ಬಿಚ್ಚಿಸುತ್ತೀನಿ ಎಂದು ವಾಗ್ದಾಳಿ ನಡೆಸಿದ್ದರು. ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಮೇಲೆ ಭ್ರಷ್ಟಾಚಾರ ಆರೋಪ ಕೇಳಿಬಂದ ನಂತರ ಈ ಪ್ರಕರಣದ ಬೆನ್ನುಬಿದ್ದಿದ್ದ ಜಗದೀಶ್, ಈ ಆರೋಪವನ್ನು ದಾಖಲೆ ಸಮೇತ ಸಾಬೀತುಪಡಿಸೋದಾಗಿ ಹೇಳಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗದೀಶ್ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಅನೇಕರು ಮುಗಿಬಿದ್ದಿದ್ದರು.


from India & World News in Kannada | VK Polls https://ift.tt/d4OEjSc

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...