ಮೊಹಾಲಿ: ಶ್ರೀಲಂಕಾ ವಿರುದ್ಧ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ತಂಡದ ನಾಯಕ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಆ ಮೂಲಕ ಟೆಸ್ಟ್ ನಾಯಕನಾಗಿ ಮೊಟ್ಟ ಮೊದಲ ಪಂದ್ಯದಲ್ಲಿಯೇ ಟಾಸ್ ಗೆಲ್ಲುವ ಮೂಲಕ ರೋಹಿತ್ ಶುಭಾರಂಭ ಕಂಡಿದ್ದಾರೆ. ಇಲ್ಲಿನ ಪಂಜಾಬ್ ಕ್ರಿಕೆಟ್ ಅಸೋಸಿಯೆಷನ್‌ನ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯುವ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವೃತ್ತಿ ಜೀವನದ 100ನೇ ಟೆಸ್ಟ್ ಆಗಿದೆ. ಈ ಹಿನ್ನೆಲೆಯಲ್ಲಿ ಬಲಗೈ ಬ್ಯಾಟ್ಸ್‌ಮನ್ ಪಾಲಿಗೆ ಈ ಪಂದ್ಯ ಅತ್ಯಂತ ವಿಶೇಷತೆಯಿಂದ ಕೂಡಿದೆ. ಅಂದಹಾಗೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಚೇತೇಶ್ವರ್ ಪೂಜಾರ ಅವರ ಸ್ಥಾನಕ್ಕೆ ಹನುಮ ವಿಹಾರಿ ಹಾಗೂ ಅಜಿಂಕ್ಯ ರಹಾನೆ ಅವರ ಸ್ಥಾನಕ್ಕೆ ಶ್ರೇಯಸ್ ಅಯ್ಯರ್‌ಗೆ ಅವಕಾಶ ಕಲ್ಪಿಸಲಾಗಿದೆ. ರವೀಂದ್ರ ಜಡೇಜಾ ಹಾಗೂ ಆರ್ ಅಶ್ವಿನ್ ಜೊತೆಗೆ ಹೆಚ್ಚುವರಿ ಸ್ಪಿನ್ನರ್ ಆಗಿ ಜಯಂತ್ ಯಾದವ್ ಅವರನ್ನು ಆಡುವ ಬಳಗದಲ್ಲಿ ಪರಿಗಣಿಸಲಾಗಿದೆ. ಇನ್ನು ಮೊಹಮ್ಮದ್ ಶಮಿ ಹಾಗೂ ಜಸ್‌ಪ್ರಿತ್ ಬುಮ್ರಾ ಇಬ್ಬರು ವೇಗಿಗಳನ್ನು ತಂಡದಲ್ಲಿ ಆಡಿಸಲಾಗುತ್ತಿದೆ. ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಭಾರತ: ರೋಹಿತ್ ಶರ್ಮಾ(ನಾಯಕ), ಮಯಾಂಕ್ ಅಗರ್ವಾಲ್, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿ.ಕೀ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಯಂತ್ ಯಾದವ್, ಮೊಹಮ್ಮದ್ ಶಮಿ, ಜಸ್‌ಪ್ರಿತ್ ಬುಮ್ರಾ. ಶ್ರೀಲಂಕಾ: ದಿಮುತ್ ಕರುಣಾರತ್ನೆ(ನಾಯಕ), ಲಹಿರು ತಿರಿಮಾನ್ನೆ, ಪತುಮ್ ನಿಸಂಕ, ಚರಿತ್ ಅಸಲಂಕಾ, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ನಿರೋಶನ್ ಡಿಕ್ವೆಲ್ಲಾ(ವಿ.ಕೀ), ಸುರಂಗ ಲಕ್ಮಲ್, ವಿಶ್ವ ಫೆರ್ನಾಂಡೊ, ಲಸಿತ್ ಎಂಬುಲ್ದೇನಿಯ, ಲಹಿರು ಕುಮಾರ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/L8adGH9