ಸನ್‌ರೈಸರ್ಸ್ ಹೈದರಾಬಾದ್ ತೊರೆದು ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಸ್ಟ್ರೇಲಿಯಾ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರುತ್ತಿದ್ದಾರೆ. ಇಲ್ಲಿಯವರೆಗೂ ಆಡಿರುವ 6 ಪಂದ್ಯಗಳಲ್ಲಿ 52.20ರ ಸರಾಸರಿಯಲ್ಲಿ 261 ರನ್ ಗಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಟೀಮ್ ಇಂಡಿಯಾ ಮಾಜಿ ಆರಂಭಿಕ ವಿರೇಂದ್ರ ಸೆಹ್ವಾಗ್, ಡೆಲ್ಲಿ ಕ್ಯಾಪಿಟಲ್ಸ್ ಪರ ಡೇವಿಡ್ ವಾರ್ನರ್ ರನ್ ಗಳಿಸಿದಾಗಲೆಲ್ಲಾ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ನೋವಾಗುತ್ತದೆ ಎಂದು ಹೇಳಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/DlVJNM4