ಆರೆಸ್ಸೆಸ್ ಮುಖಂಡ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ಆರೋಗ್ಯದಲ್ಲಿ ಸಣ್ಣಮಟ್ಟಿನ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮನೆಯಲ್ಲಿದ್ದ ಪ್ರಭಾಕರ್ ಭಟ್ ಅವರಿಗೆ ಕಡಿಮೆ ರಕ್ತದೊತ್ತಡ ಕಾರಣದಿಂದ ಆರೋಗ್ಯದಲ್ಲಿ ಏರುಪೇರಾಗಿತ್ತು. ಜತೆಗೆಸಣ್ಣ ಪ್ರಮಾಣದಲ್ಲಿ ಎದೆನೋವಿನ ಲಕ್ಷಣ ಕೂಡ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.
from India & World News in Kannada | VK Polls https://ift.tt/XQNJ37t