ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನಾಕ್‌ಔಟ್ ಟಿಕೆಟ್ ಸಲುವಾಗಿ 8 ತಂಡಗಳ ನಡುವೆ ಭಾರಿ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ಲಖನೌ ಸೂಪರ್ ಜಯಂಟ್ಸ್ ವಿರುದ್ಧದ ಭಾನುವಾರ ನಡೆದ ಪಂದ್ಯದಲ್ಲಿ ಕೇವಲ 6 ರನ್‌ಗಳ ಅಂತರದಲ್ಲಿ ಸೋತ ಡೆಲ್ಲಿ ಕ್ಯಾಪಿಟಲ್ಸ್ ಇದೀಗ ಮುಂದಿನ ಹಂತಕ್ಕೇರುವ ಸಲುವಾಗಿ ತನ್ನ ಪಾಲಿನ ಉಳಿದ ಎಲ್ಲ ಪಂದ್ಯಗಳನ್ನು ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಅಂದಹಾಗೆ ಈ ಪಂದ್ಯದಲ್ಲಿ ನಿಯಮ ಉಲ್ಲಂಘನೆ ಮಾಡಿದ ಡೆಲ್ಲಿ ತಂಡ ಆರಂಭಿಕ ಬ್ಯಾಟರ್ ಪೃಥ್ವಿ ಶಾ ದಂಡ ಕೂಡ ತೆತ್ತಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/KsnpVTg